For Quick Alerts
ALLOW NOTIFICATIONS  
For Daily Alerts
 

Abhishek Sharma: ರೋಹಿತ್‌ ಶರ್ಮಾ ಜೊತೆ ವಿಶೇಷ ಕ್ಲಬ್‌ಗೆ ಎಂಟ್ರಿ ನೀಡಿದ ಅಭಿಷೇಕ್‌

ಟೀಮ್ ಇಂಡಿಯಾ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಭರ್ಜರಿ ಜಯ ಸಾಧಿಸಿದೆ. ಯುಎಇ ವಿರುದ್ಧದ ಪಂದ್ಯದಲ್ಲಿ ಭಾರತ 9 ವಿಕೆಟ್‌ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸಂಘಟಿತ ಆಟ ಎಲ್ಲರ ಗಮನ ಸೆಳೆದಿದೆ. ಏಕ ಪಕ್ಷೀಯ ಗೆಲುವಿನಲ್ಲಿ ಭಾರತದ ಸ್ಟಾರ್ ಆಟಗಾರರು ಮಿಂಚಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್‌ ಅಭಿಷೇಕ್‌ ಶರ್ಮಾ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಅಭಿಷೇಕ್‌ ವಿಶೇಷ ಕ್ಲಬ್‌ಗೆ ಎಂಟ್ರಿ ನೀಡಿದ್ದಾರೆ.

ದುಬೈನಲ್ಲಿ ನಡೆದ ಏಷ್ಯಾ ಕಪ್‌ ಟಿ20 ಟೂರ್ನಿಯ ಎರಡನೇ ಪಂದ್ಯದಲ್ಲಿ ಯುಎಇ ತಂಡವನ್ನು ಭಾರತ 57 ರನ್‌ಗಳಿಗೆ ಕಟ್ಟಿ ಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ ಒಂದು ವಿಕೆಟ್‌ ಕಳೆದುಕೊಂಡು 4.3 ಓವರ್‌ಗಳಲ್ಲಿ ಗುರಿಯನ್ನು ಮುಟ್ಟಿ ಸಂಭ್ರಮಿಸಿತು. ಈ ವೇಳೆ ಟೀಮ್ ಇಂಡಿಯಾ ಪರ ಶಿವಂ ದುಬೆ ಹಾಗೂ ಕುಲ್‌ದೀಪ್‌ ಯಾದವ್ ಬೌಲಿಂಗ್ ನಲ್ಲಿ ಮಿಂಚಿದರೆ. ಇನ್ನು ಬ್ಯಾಟಿಂಗ್‌ನಲ್ಲಿ ಅಭಿಷೇಕ್‌ ಶರ್ಮಾ ಅಬ್ಬರದ ಆಟವನ್ನು ಆಡಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು.

Abhishek Sharma Joins Elite Club with a Six on First Ball in Asia Cup Win vs UAE

58 ರನ್‌ ಗಳ ಗುರಿಯನ್ನು ಹಿಂಬಾಲಿಸಿದ ಟೀಮ್ ಇಂಡಿಯಾ ಪರ ಅಭಿಷೇಕ್‌ ಶರ್ಮಾ ಇನಿಂಗ್ಸ್‌ ಆರಂಭಿಸಿದರು. ಈ ವೇಳೆ ತಾವು ಎದುರಿಸಿದ ಮೊದಲ ಎಸೆತವನ್ನು ಕವರ್ಸ್‌ ಮೇಲಿನಿಂದ ಸಿಕ್ಸರ್ ಬಾರಿಸಿದರು. ಈ ಮೂಲಕ ಅಭಿಷೇಕ್‌ ಶರ್ಮಾ ಹೊಸ ಹೊಸ ಇತಿಹಾಸ ನಿರ್ಮಿಸಿದರು. ಭಾರತದ ಪರ ಟಿ20 ಕ್ರಿಕೆಟ್‌ ಇತಿಹಾಸದಲ್ಲಿ ಎದುರಿಸಿದ ಮೊದಲ ಎಸೆತವನ್ನು ಸಿಕ್ಸರ್‌ ಬಾರಿಸಿದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂದಲು ಈ ದಾಖಲೆಯನ್ನು ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್‌ ಮಾಡಿದ್ದರು. ರನ್‌ ಚೇಸ್‌ ಮಾಡುವಾಗ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದು ಇದು ಮೊದಲು.

ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಭಾರತದ ಬ್ಯಾಟರ್ಸ್‌

ರೋಹಿತ್ ಶರ್ಮಾ - ಇಂಗ್ಲೆಂಡ್ ವಿರುದ್ಧ 2021, ಅಹಮದಾಬಾದ್
ಯಶಸ್ವಿ ಜೈಸ್ವಾಲ್ - ವಿರುದ್ಧ ಜಿಂಬಾಬ್ವೆ 2024, ಹರಾರೆ
ಸಂಜು ಸ್ಯಾಮ್ಸನ್ - ವಿರುದ್ಧ ಇಂಗ್ಲೆಂಡ್ 2025, ಮುಂಬೈ
ಅಭಿಷೇಕ್ ಶರ್ಮಾ - ವಿರುದ್ಧ ಯುಎಇ 2025, ದುಬೈ

ಭರ್ಜರಿ ಬ್ಯಾಟಿಂಗ್

ದುಬೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ ಕೇವಲ 16 ಎಸೆತಗಳಲ್ಲಿ 187ರ ಸ್ಟ್ರೈಕ್‌ ರೇಟ್‌ನಲ್ಲಿ 30 ರನ್‌ ಸಿಡಿಸಿದರು. ಇದರಲ್ಲಿ 2 ಬೌಂಡರಿ, 3 ಸಿಕ್ಸರ್‌ಗಳು ಸೇರಿವೆ. ಓಈ ಮೂಲಕ ಅಭಿಷೇಕ್‌ ಪಾಕ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಭರ್ಜರಿ ಫಾರ್ಮ್‌ ಕಂಡುಕೊಂಡಿದ್ದಾರೆ. ಇವರ ಫಾರ್ಮ್‌ ಸೆ.14 ರಂದು ನಡೆಯಲಿರುವ ಪಂದ್ಯಕ್ಕೂ ಮುನ್ನ ಪಾಕ್‌ ಆಟಗಾರರಿಗೆ ಭಯ ಹುಟ್ಟಿಸಿದೆ. ವಿಶ್ವದ ನಂಬರ್‌ 1 ಬ್ಯಾಟರ್‌ ಬ್ಯಾಟಿಂಗ್ ಧಾಟಿಯನ್ನು ಕಂಡು ಪಾಕ್‌ ಥಂಡಾ ಹೊಡೆದಿದೆ.

Story first published: Thursday, September 11, 2025, 13:38 [IST]
Other articles published on Sep 11, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+