ಅಭಿಷೇಕ್ ಶರ್ಮಾ ಮಿಂಚು: ಭಾರತಕ್ಕೆ 48 ರನ್ ಜಯ, ಸರಣಿಯಲ್ಲಿ ಮುನ್ನಡೆ
ನಾಗ್ಪುರ: ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಬಿರುಸಿನ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಸಂಘಟಿತ ಆಟದ ಬಲದಿಂದ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 48 ರನ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ, ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಸಾಧಾರಣವಾಗಿತ್ತು. ಬಹುದಿನಗಳ ಬಳಿಕ ತಂಡದ ಪರ ಆರಂಭಿಕರಾಗಿ ಬ್ಯಾಟ್ ಮಾಡಿದ ಸಂಜು ಸ್ಯಾಮ್ಸನ್ (10) ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ದೇಶೀಯ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿ ರಾಷ್ಟ್ರೀಯ ತಂಡ ಸೇರಿಕೊಂಡಿದ್ದ ಇಶಾನ್ ಕಿಶನ್ (8) ಸಹ ಜವಾಬ್ದಾರಿಯುತ ಬ್ಯಾಟ್ ಮಾಡುವಲ್ಲಿ ವಿಫಲರಾದರು.

27 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಜೋಡಿ ಆಧಾರವಾಯಿತು. ಈ ಜೋಡಿ ಆರಂಭದಲ್ಲಿ ಎಚ್ಚರಿಕೆಯಿಂದ ಬ್ಯಾಟ್ ಮಾಡಿ ಬಳಿಕ ಕೆಟ್ಟ ಎಸೆತಗಳನ್ನು ದಂಡಿಸುತ್ತಾ ಸಾಗಿತು. ಈ ಜೋಡಿ ತಂಡಕ್ಕೆ 99 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿ ತಂಡಕ್ಕೆ ಆಧಾರವಾಯಿತು. ಈ ವೇಳೆ ನಾಯಕ ಸೂರ್ಯಕುಮಾರ್ ಯಾದವ್ 4 ಬೌಂಡರಿ, 1 ಸಿಕ್ಸರ್ ನೆರವಿನಿಂದ 32 ರನ್ ಸಿಡಿಸಿದರು.
ಅಭಿಷೇಕ್ ಶರ್ಮಾ ಬಿರುಸಿನ ಬ್ಯಾಟಿಂಗ್
ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಇವರ ಆಟಕ್ಕೆ ಬ್ರೇಕ್ ಹಾಕುವಲ್ಲಿ ಕಿವೀಸ್ ಬೌಲರ್‌ಗಳು ವಿಫಲರಾದರು. ಅಭಿಷೇಕ್ ಶರ್ಮಾ 35 ಎಸೆತಗಳಲ್ಲಿ 5 ಬೌಂಡರಿ, 8 ಸಿಕ್ಸರ್ ಸಹಾಯದಿಂದ 84 ರನ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 25 ರನ್ ಸಿಡಿಸಿದರು. ಫಿನಿಷರ್ ರಿಂಕು ಸಿಂಗ್ ಅಜೇಯ 44 ರನ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲರಾದರು. ಇವರ ಕ್ಲಾಸ್ ಇನಿಂಗ್ಸ್‌ನಲ್ಲಿ 4 ಬೌಂಡರಿ, 3 ಸಿಕ್ಸರ್ ಸೇರಿವೆ. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 238 ರನ್ ಸೇರಿಸಿತು.

ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಡೆವೊನ್ ಕಾನ್ವೆ ಹಾಗೂ ರಚಿನ್ ರವಿಂದ್ರ ಜವಾಬ್ದಾರಿ ಮರೆತರು. ಮೂರನೇ ವಿಕೆಟ್‌ಗೆ ಆರಂಭಿಕ ಟಿಮ್ ರಾಬಿನ್ಸನ್ ಮತ್ತು ಗ್ಲೆನ್ ಫಿಲಿಪ್ಸ್ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಹಂತದಲ್ಲಿ ಅರ್ಧಶತಕ ಬಾರಿಸಿ ಮುನ್ನುಗುತ್ತಿದ್ದಾಗ ಟಿಮ್ ರಾಬಿನ್ಸನ್ 21 ರನ್‌ಗಳಿಗೆ ಆಟ ಮುಗಿಸಿದರು.
ಫಿಲಿಪ್ಸ್ ಏಕಾಂಗಿ ಹೋರಾಟ
ಮಧ್ಯಮ ಕ್ರಮಾಂಕದ ಫಿಲಿಪ್ಸ್ ಅವರನ್ನು ಸೇರಿಕೊಂಡ ಮಾರ್ಕ್ ಚಾಪ್ಮನ್ (39) ಜೋಡಿ 42 ಎಸೆತಗಳಲ್ಲಿ 79 ರನ್ ಸೇರಿಸಿತು. ಏಕದಿನ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಡ್ಯಾರಿಲ್ ಮಿಚಲ್ (28), ಮಿಚಲ್ ಸ್ಯಾಂಟ್ನರ್ (ಅಜೇಯ 20) ತಂಡಕ್ಕೆ ಕೊಂಚ ಆಧಾರವಾದರು. ಗ್ಲೆನ್ ಫಿಲಿಪ್ಸ್ 40 ಎಸೆತಗಳಲ್ಲಿ 4 ಬೌಂಡರಿ, 6 ಸಿಕ್ಸರ್ ಸಹಾಯದಿಂದ 78 ರನ್ ಬಾರಿಸಿದರು. ಅಂತಿಮವಾಗಿ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 190 ರನ್ ಸೇರಿಸಿ ಸೋಲು ಕಂಡಿತು. ಭಾರತದ ಪರ ಶಿವಂ ದುಬೆ, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications