ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ ಅರ್ಧಶತಕ
ಚೆನ್ನೈ: ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಬಾರಿಸಿದ ಅರ್ಧಶತಕದ ಬಾರಿಸಿದ ಬಲದಿಂದ ಟಿ20 ವಿಶ್ವಕಪ್‌ನ ಸೂಪರ್ 8 ಹಂತದ ಪಂದ್ಯದಲ್ಲಿ ಭಾರತ, ಜಿಂಬಾಬ್ವೆ ವಿರುದ್ಧ 256 ರನ್ ಕಲೆ ಹಾಕಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಉತ್ತಮವಾಗಿತ್ತು. ಇಶಾನ್ ಕಿಶನ್ ಬದಲಿಗೆ ಇನಿಂಗ್ಸ್ ಆರಂಭಿಸುವ ಹೊಣೆಯನ್ನು ಹೊತ್ತುಕೊಂಡ ಸಂಜು ಸ್ಯಾಮ್ಸನ್ ತಂಡಕ್ಕೆ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಅಭಿಷೇಕ್ ಶರ್ಮಾ ಜೊತೆಗೆ ಇನಿಂಗ್ಸ್ ಆರಂಭಿಸಿದ ಸಂಜು ಸ್ಯಾಮ್ಸನ್ ಮೊದಲ ವಿಕೆಟ್‌ಗೆ 3.4 ಓವರ್‌ಗಳಲ್ಲಿ 48 ರನ್‌ಗಳನ್ನು ಸೇರಿಸಿತು. ಈ ಅವಧಿಯಲ್ಲಿ ಸಂಜು ಸ್ಯಾಮ್ಸನ್ 15 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ 24 ರನ್ ಬಾರಿಸಿ ಔಟ್ ಆದರು.

ಎರಡನೇ ವಿಕೆಟ್‌ಗೆ ಅಭಿಷೇಕ್ ಶರ್ಮಾ ಜೊತೆಗೂಡಿದ ಇಶಾಂತ್ ಕಿಶನ್ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಡ್ರೆಸ್ಸಿಂಗ್ ರೂಮ್‌ನಲ್ಲಿ ಹಾಕಿಕೊಂಡ ಗೇಮ್ ಪ್ಲ್ಯಾನ್ ನಂತೆ ಬ್ಯಾಟ್ ಮಾಡಿತು. ಈ ಜೋಡಿ ತಂಡದ ಪರ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ಸಫಲರಾದರು. ಈ ಜೋಡಿ 42 ಎಸೆತಗಳಲ್ಲಿ 72 ರನ್ ಗಳ ಜೊತೆಯಾಟವನ್ನು ನೀಡಿದರು. ಈ ಅವಧಿಯಲ್ಲಿ ಇಶಾನ್ ಕಿಶನ್ 24 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 38 ರನ್ ಬಾರಿಸಿ ಔಟ್ ಆದರು.
ನಾಯಕ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದರು. ಇವರು ಅಭಿಷೇಕ್ ಶರ್ಮಾ ಅವರೊಂದಿಗೆ 13 ಎಸೆತಗಳಲ್ಲಿ 30 ರನ್ ಸೇರಿಸಿದರು. ಅಭಿಷೇಕ್ ಶರ್ಮಾ ತಮ್ಮ ಬ್ಯಾಟಿಂಗ್ ವೈಖರಿಗೆ ವಿರುದ್ಧವಾಗಿ ಬ್ಯಾಟ್ ಮಾಡಿದ ಅಭಿಷೇಕ್ ಶರ್ಮಾ 4 ಬೌಂಡರಿ, 4 ಸಿಕ್ಸರ್ ಸಹಾಯದಿಂದ 55 ರನ್ ಸಿಡಿಸಿ ಔಟ್ ಆದರು.

ನಾಯಕ ಸೂರ್ಯಕುಮಾರ್ ಯಾದವ್ ಕೇವಲ 13 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 253ರ ಸ್ಟ್ರೈಕ್ ರೇಟ್‌ನಲ್ಲಿ 33 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು.
ಹಾರ್ದಿಕ್ ಪಾಂಡ್ಯ ಅಬ್ಬರ
5ನೇ ವಿಕೆಟ್‌ಗೆ ಹಾರ್ದಿಕ್ ಪಾಂಡ್ಯ ಹಾಗೂ ತಿಲಕ್ ವರ್ಮಾ ಜೋಡಿ ಆರ್ಭಟಿಸಿತು. ಈ ಜೋಡಿ ತಮ್ಮ ನೈಜ ಆಟವನ್ನು ಆಡಿ ಆರ್ಭಟಿಸಿತು. ಈ ಜೊಡಿ 31 ಎಸೆತಗಳಲ್ಲಿ ಅಜೇಯ 84 ರನ್ ಸಿಡಿಸಿ ಮಿಂಚಿದರು. ಟೀಮ್ ಇಂಡಿಯಾದ ಅನುಭವಿ ಆಟಗಾರ ಹಾರ್ದಿಕ್ ಪಾಂಡ್ಯ 217 ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿದರು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 2 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 50 ರನ್ ಸಿಡಿಸಿದರು. ತಿಲಕ್ ವರ್ಮಾ ಕೇವಲ 16 ಎಸೆತಗಳಲ್ಲಿ 275ರ ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 44 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲರಾದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications