IND vs SL: ಅಭಿಷೇಕ್, ತಿಲಕ್ ಬ್ಯಾಟಿಂಗ್ ಸೊಗಸು: ಲಂಕಾಗೆ 203 ರನ್ ಗುರಿ ನೀಡಿದ ಭಾರತ
ಭರವಸೆಯ ಬ್ಯಾಟರ್ ಅಭಿಷೇಕ್ ಶರ್ಮಾ ಹಾಗೂ ತಿಲಕ್ ವರ್ಮಾ ಅವರ ಸಮಯೋಚಿತ ಆಟದ ನೆರವಿನಿಂದ ಏಷ್ಯಾ ಕಪ್ ಟಿ20 ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ, ಶ್ರೀಲಂಕಾ ವಿರುದ್ಧ ಸ್ಪರ್ಧಾತ್ಮಕ ಮೊತ್ತವನ್ನು ಕಲೆ ಹಾಕಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ಸ್ಟಾರ್ ಆಟಗಾರ ಶುಭಮನ್ ಗಿಲ್ (4) ಜವಾಬ್ದಾರಿಯನ್ನು ಮರೆತರು. 15 ರನ್‌ಗಳಿಗೆ ಒಂದು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಮ್ ಇಂಡಿಯಾಗೆ ಅಭಿಷೇಕ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಜೋಡಿ ಆಧಾರವಾಯಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಲಂಕಾ ಬೌಲರ್‌ಗಳು ವಿಫಲರಾದರು. ಈ ಜೋಡಿ ಪವರ್ ಪ್ಲೇನಲ್ಲಿ ವಿಕೆಟ್‌ಗಳು ಬೀಳದಂತೆ ನೋಡಿಕೊಂಡಿತು. ಅಲ್ಲದೆ 71 ರನ್ ಸಿಡಿಸಿತು. ಈ ವೇಳೆ ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ (14) ವನಿಂದು ಹಸರಂಗ್ ತೋಡಿದ ಖೆಡ್ಡಾಗೆ ಬಲಿಯಾದರು.

ಎರಡನೇ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ ಹಾಗೂ ಅಭಿಷೇಕ್ ಜೋಡಿ 33 ಎಸೆತಗಳಲ್ಲಿ 59 ರನ್ ಸಿಡಿಸಿದರು. ಅಭಿಷೇಕ್ ಶರ್ಮಾ ತಮ್ಮ ಕಲಾತ್ಮಕ ಬ್ಯಾಟಿಂಗ್ ಪ್ರದರ್ಶನವನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲೂ ಮುಂದುವರೆಸಿದರು. ಇವರು 196.77ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿ ಅಬ್ಬರಿಸಿದರು. ಅಲ್ಲದೆ ಬ್ಯಾಕ್ ಟು ಬ್ಯಾಕ್ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡರು. ಇವರು 31 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ನೆರವಿನಿಂದ 61 ರನ್ ಸಿಡಿಸಿ ಅಬ್ಬರಿಸಿದರು.
ತಿಲಕ್ ಆರ್ಭಟ
92 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಸಂಜು ಸ್ಯಾಮ್ಸನ್ ಹಾಗೂ ತಿಲಕ್ ವರ್ಮಾ ಜೋಡಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿತು. ಈ ಜೋಡಿ ಮಧ್ಯಮ ಕ್ರಮಾಂಕದಲ್ಲಿ ಅಮೋಘ ಬ್ಯಾಟಿಂಗ್ ನಡೆಸಿತು. ಈ ಜೋಡಿ 42 ಎಸೆತಗಳಲ್ಲಿ 66 ರನ್ ಸೇರಿಸಿತು. ಸಂಜು ಸ್ಯಾಮ್ಸನ್ 23 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್ ಸಹಾಯದಿಂದ 39 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ (2) ರನ್ ಕಲೆ ಹಾಕುವಲ್ಲಿ ವಿಫಲರಾದರು.

ತಿಲಕ್ ವರ್ಮಾ ಹಾಗೂ ಅಕ್ಷರ್ ಪಟೇಲ್ ಜೋಡಿ 6ನೇ ವಿಕೆಟ್‌ಗೆ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 23 ಎಸೆತಗಳಲ್ಲಿ ಅಜೇಯ 40 ರನ್‌ಗಳ ಜೊತೆಯಾಟ ನೀಡಿತು. ತಿಲಕ್ ವರ್ಮಾ ತಂಡದ ಹಿತಕ್ಕಾಗಿ ಬ್ಯಾಟ್ ಮಾಡಿ ಮಿಂಚಿದರು. ಇವರು 34 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 49 ರನ್ ಸಿಡಿಸಿದರು. ಅಕ್ಷರ್ ಪಟೇಲ್ 1 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 21 ರನ್ ಬಾರಿಸಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 202 ರನ್ ಸೇರಿಸಿತು.
ಶ್ರೀಲಂಕಾದ ಪರ ಮಹೇಶ್ ತೀಕ್ಷಣ, ದುಷ್ಮಂತ ಚಮೀರ, ವನಿಂದು ಹಸರಂಗ, ದಾಸುನ್ ಶನಕ ಚರಿತ್ ಅಸಲಂಕಾ ತಲಾ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications