For Quick Alerts
ALLOW NOTIFICATIONS  
For Daily Alerts
 

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಪಂಜಾಬ್ ದಾಖಲೆ: ಅಭಿಶೇಕ್ ಶರ್ಮಾ ಅಮೋಘ ಶತಕ

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಪಂಜಾಬ್ ಆಂದ್ರಪ್ರದೇಶದ ವಿರುದ್ಧ ದಾಖಲೆಯ ಪ್ರದರ್ಶನ ನೀಡಿದೆ. ಅಕ್ಟೋಬರ್ 17 ಮಂಗಳವಾರ ನಡೆದ ಪಂಜಾಬ್ ಹಾಗೂ ಆಂಧ್ರಪ್ರದೇಶ ವಿರುದ್ಧದ ಪಂದ್ಯದಲ್ಲಿ ಮಂದೀಪ್ ಸಿಂಗ್ ನಾಯಕತ್ವದ ಪಂಜಾಬ್ ಅಬ್ಬರಿಸಿದೆ. ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಕೇವಲ 6 ವಿಕೆಟ್ ಕಳೆದುಕೊಂಡು 275 ರನ್‌ಗಳನ್ನು ಕಲೆಹಾಕುವ ಮೂಲಕ ದಾಖಲೆ ಬರೆದಿದೆ.

ಈ ಮೂಲಕ ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಈ ಹಿಂದಿನ ದಾಖಲೆಯನ್ನು ಮುರಿದಿದೆ. ಇದಕ್ಕೂ ಮುನ್ನ 2019ರಲ್ಲಿ ಮುಂಬೈ ತಂಡ ಸಿಕ್ಕಿಮ್ ವಿರುದ್ಧ 258 ರನ್‌ಗಳನ್ನು ಗಳಿಸಿದ್ದು ಈವರೆಗಿನ ದಾಖಲೆಯಾಗಿತ್ತು. ಈ ದಾಖಲೆಯನ್ನು ಪಂಜಾಬ್ ಈಗ ತನ್ನ ಹೆಸರಿಗೆ ಬರೆದುಕೊಂಡಿದೆ.

Abhishek Sharmas Heroics Propel Punjab to Record Total in Syed Mushtaq Ali Trophy

ಇನ್ನು ಒಟ್ಟಾರೆಯಾಗಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆಯನ್ನು ನೇಪಾಳ ಹೊಂದಿದ್ದು ಹ್ಯಾಂಗ್‌ಝೌನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್‌ನಲ್ಲಿ ಈ ಸಾಧನೆ ಮಾಡಿತ್ತು. ಮೂರು ವಿಕೆಟ್‌ಗೆ 314 ರನ್ ಗಳಿಸುವ ಮೂಲಕ ಈ ವಿಶ್ವದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತ್ತು. ಅಫ್ಘಾನಿಸ್ತಾನ (2019 ರಲ್ಲಿ ಐರ್ಲೆಂಡ್ ವಿರುದ್ಧ 278/3), ಜೆಕ್ ರಿಪಬ್ಲಿಕ್ (2019 ರಲ್ಲಿ ಟರ್ಕಿ ವಿರುದ್ಧ 278/4) ಮತ್ತು ಮೆಲ್ಬೋರ್ನ್ ಸ್ಟಾರ್ಸ್ (2022 ರಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ 273/2) ಮೊದಲ ಮೂರು ಸ್ಥಾನಗಳನ್ನು ಹೊಂದಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಪಂಜಾಬ್ ಭಾರತ ತಂಡದ ಟಿ20 ಅತ್ಯಧಿಕ ಮೊತ್ತದ ಭಾರತದ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದೆ. ಡಿಸೆಂಬರ್ 2017 ರಂದು ಇಂದೋರ್‌ನಲ್ಲಿ ಶ್ರೀಲಂಕಾ ವಿರುದ್ಧ ಭಾರತ ಐದು ವಿಕೆಟ್ ನಷ್ಟಕ್ಕೆ 260 ರನ್ ಗಳಿಸಿದ್ದು ಭಾರತದ ಅತಿ ಹೆಚ್ಚಿನ ಸ್ಕೋರ್ ಎನಿಸಿಕೊಂಡಿದೆ.

ಇನ್ನು ಪಂಜಾಬ್ ಹಾಗೂ ಆಂಧ್ರಪ್ರದೇಶ ತಂಡದ ವಿರುದ್ಧದ ಪಂದ್ಯದಲ್ಲಿ ಮೊದಲು ಪಂಜಾನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಿಮದಲೇ ಅಬ್ಬರದ ಪ್ರದರ್ಶನಕ್ಕೆ ಮುಂದಾದ ಪಂಜಾಬ್ ಪರವಾಗಿ ಅಭಿಷೇಕ್ ಶರ್ಮಾ ಸ್ಪೋಟಕ ಶತಕ ಸಿಡಿಸಿದ್ದಾರೆ. ಕೇವಲ 51 ಎಸೆತಗಳಲ್ಲಿ ಒಂಬತ್ತು ಬೌಂಡರಿ ಹಾಗೂ ಸಿಕ್ಸರ್‌ಗಳ ನೆರವಿನಿಂದ 112 ರನ್ ಗಳಿಸಿದರು. ಅನ್ಮೋಲ್‌ಪ್ರೀತ್ ಸಿಂಗ್ 26 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಒಂಬತ್ತು ಸಿಕ್ಸರ್‌ಗಳ ನೆರವಿನಿಂದ 87 ರನ್ ಸಿಡಿಸಿ ಅಬ್ಬರಿಸಿದರು. ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ ಪೃಥ್ವಿ ರಾಜ್ ಯರ್ರಾ ಎರಡು ವಿಕೆಟ್ ಪಡೆದರೂ 63 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ.

ನಂತರ ಪಂಜಾಬ್ ಬೌಲಿಂಗ್‌ನಲ್ಲಿಯೂ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು ಆಂಧ್ರವನ್ನು 20 ಓವರ್‌ಗಳಲ್ಲಿ 170/7ಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಈ ಪಂದ್ಯದಲ್ಲಿ ಪಂಜಾಬ್ ತಂಡ ಭರ್ಜರಿ 105 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಆಂಧ್ರ ಪರವಾಗಿ ರಿಕಿ ಭುಯಿ ಏಕಾಂಗಿ ಹೀಗಾಟ ನಡೆಸಿದ್ದು 52 ಎಸೆತಗಳಲ್ಲಿ 104 ರನ್ ಗಳಿಸಿದರಾದರೂ ಈ ಹೋರಾಟ ವ್ಯರ್ಥವಾಗಿದೆ.

Story first published: Tuesday, October 17, 2023, 17:52 [IST]
Other articles published on Oct 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+