ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

WTC Final: ಆ ಆಟಗಾರ ತಂಡದಲ್ಲಿ ಇಲ್ಲದಿರುವುದು ಭಾರತಕ್ಕೆ ಸಮಸ್ಯೆಯಾಗಬಹುದು ಎಂದ ಮಾಜಿ ಕ್ರಿಕೆಟಿಗ

Absence Of Hardik Pandya Will Be Felt In The WTC Final says Venkatapathy Raju

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಆಗಸ್ಟ್ 4ರಿಂದ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಹೀಗಾಗಿ ಈ ಇಂಗ್ಲೆಂಡ್ ಪ್ರವಾಸಕ್ಕೆ 20 ಸದಸ್ಯರನ್ನೊಳಗೊಂಡ ಭಾರತ ತಂಡ ಜೂನ್ 3ರಂದು ಪ್ರಯಾಣ ಬೆಳೆಸಲಿದೆ.

ಮುಂಬೈ ತಂಡದಲ್ಲಿದ್ದಾಗ ಅವಕಾಶ ಸಿಗದೇ ಕಡೆಗಣಿಸಲ್ಪಟ್ಟ ಈ ಆಟಗಾರರು ಇಂದು ಸ್ಟಾರ್ ಪ್ಲೇಯರ್ಸ್!

ಬಿಸಿಸಿಐ ಇಂಗ್ಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾವನ್ನು ಪ್ರಕಟಿಸಿದಾಗ ಸಾಕಷ್ಟು ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾದವು. ಇದೀಗ ಭಾರತದ ಮಾಜಿ ಎಡಗೈ ಸ್ಪಿನ್ನರ್ ಎಸ್ ವೆಂಕಟಪತಿ ರಾಜು ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಲಿರುವ ಟೀಮ್ ಇಂಡಿಯಾ ಕುರಿತು ಮಾತನಾಡಿದ್ದು ಹಾರ್ದಿಕ್ ಪಾಂಡ್ಯ ತಂಡದಲ್ಲಿ ಇಲ್ಲದೇ ಇರುವುದರಿಂದ ಕೊಹ್ಲಿ ಪಡೆ ಸಮಸ್ಯೆಯನ್ನು ಎದುರಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶ್ವಕಪ್‌ ವಿಜೇತ ಆಸ್ಟ್ರೇಲಿಯಾ ತಂಡದ ಆಟಗಾರ ಈಗ ಕಾರ್ಪೆಂಟರ್!

'ನ್ಯೂಜಿಲೆಂಡ್ ತಂಡ ಬಲಿಷ್ಠ ಬ್ಯಾಟ್ಸ್‌ಮನ್‌ಗಳಿಂದ ಕೂಡಿದ್ದು ಉತ್ತಮ ಆಲ್‌ರೌಂಡರ್ ಆಟಗಾರರನ್ನು ಒಳಗೊಂಡಿದೆ. ನ್ಯೂಜಿಲೆಂಡ್ ತಂಡದ ಕೈಲ್ ಜೆಮಿಸನ್ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಎತ್ತರದ ಆಟಗಾರನಾದ ಕಾರಣ ಬೌನ್ಸ್ ದಾಳಿಯ ಜೊತೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಬಲ್ಲವನಾಗಿದ್ದಾರೆ. ಹೀಗೆ ನ್ಯೂಜಿಲೆಂಡ್ ತಂಡ ವೇಗದ ಆಲ್‌ರೌಂಡರ್‌ಗಳಿಂದ ಕೂಡಿದ್ದು ಭಾರತ ತಂಡ ಸ್ಪಿನ್ ಆಲ್‌ರೌಂಡರ್‌ಗಳಿಂದ ಕೂಡಿದೆ. ಹೀಗಾಗಿ ವೇಗದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ತಂಡದಲ್ಲಿದ್ದಿದ್ದರೆ ಸಮತೋಲನವಾಗಿರುತ್ತಿತ್ತು, ಆತನ ಅಲಭ್ಯತೆ ತಂಡಕ್ಕೆ ಸಮಸ್ಯೆಯಾಗಬಹುದು' ಎಂದು ವೆಂಕಟಪತಿ ರಾಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವ ಪರಿಸ್ಥಿತಿಯಲ್ಲಿಲ್ಲ ಎಂದಿದ್ದ ಬಿಸಿಸಿಐ

ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವ ಪರಿಸ್ಥಿತಿಯಲ್ಲಿಲ್ಲ ಎಂದಿದ್ದ ಬಿಸಿಸಿಐ

ಇಂಗ್ಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟವಾದಾಗ ಹಾರ್ದಿಕ್ ಪಾಂಡ್ಯಗೆ ತಂಡದಲ್ಲಿ ಸ್ಥಾನ ನೀಡದೆ ಇರುವುದರ ಕುರಿತು ಚರ್ಚೆಗಳು ನಡೆದಿದ್ದವು. ಈ ಸಮಯದಲ್ಲಿ ಹಾರ್ದಿಕ್ ಪಾಂಡ್ಯ ಟೆಸ್ಟ್ ಕ್ರಿಕೆಟ್‍ನಲ್ಲಿ ಬೌಲಿಂಗ್ ಮಾಡುವ ಪರಿಸ್ಥಿತಿಯಲ್ಲಿ ಇಲ್ಲದೇ ಇರುವ ಕಾರಣ ಅವರನ್ನು ಆಯ್ಕೆ ಮಾಡಿಲ್ಲ ಎಂಬ ಸ್ಪಷ್ಟನೆಯನ್ನು ಬಿಸಿಸಿಐ ನೀಡಿತ್ತು.

ಇಂಗ್ಲೆಂಡ್ ಟೆಸ್ಟ್‌ನಲ್ಲಿಯೂ ತಂಡದಲ್ಲಿ ಸ್ಥಾನ ಸಿಕ್ಕಿರಲಿಲ್ಲ

ಇಂಗ್ಲೆಂಡ್ ಟೆಸ್ಟ್‌ನಲ್ಲಿಯೂ ತಂಡದಲ್ಲಿ ಸ್ಥಾನ ಸಿಕ್ಕಿರಲಿಲ್ಲ

ಕಳೆದ ಬಾರಿ ಇಂಗ್ಲೆಂಡ್ ಭಾರತದ ಪ್ರವಾಸ ಕೈಗೊಂಡಿದ್ದಾಗ ನಡೆದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿಯೂ ಹಾರ್ದಿಕ್ ಪಾಂಡ್ಯ ತಂಡದ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಳ್ಳದೆ ಬೆಂಚ್ ಕಾದಿದ್ದರು.

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಹಾರ್ದಿಕ್ ಪಾಂಡ್ಯ

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಭಾಗವಹಿಸಬಹುದಾಗಿದ್ದು ಸತತವಾಗಿ ನಾಲ್ಕೈದು ದಿನಗಳ ಕಾಲ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ಆಡುವುದು ಕಷ್ಟ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಅವಕಾಶ ಸಿಗದಿರಲು ಪ್ರಮುಖ ಕಾರಣ

ಅವಕಾಶ ಸಿಗದಿರಲು ಪ್ರಮುಖ ಕಾರಣ


ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಟೆಸ್ಟ್ ಪಂದ್ಯಗಳಲ್ಲಿ ದೀರ್ಘಕಾಲದವರೆಗೆ ಮೈದಾನದಲ್ಲಿ ಆಡಲು ಆಗದೆ ಇರುವುದೇ ತಂಡದಲ್ಲಿ ಸ್ಥಾನ ಸಿಗದಿರುವುದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಬೌಲಿಂಗ್ ಮಾತ್ರವಲ್ಲದೆ ಫೀಲ್ಡಿಂಗ್ ಹಾಗೂ ಬ್ಯಾಟಿಂಗ್ ಕೂಡ ಟೆಸ್ಟ್ ಪಂದ್ಯಗಳಲ್ಲಿ ಗಾಯಾಳು ಆಟಗಾರನಿಗೆ ದೊಡ್ಡ ಸವಾಲಾಗಿ ಪರಿಣಮಿಸಲಿದೆ.

Story first published: Tuesday, June 1, 2021, 14:17 [IST]
Other articles published on Jun 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X