Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಏಷ್ಯಾ ಕಪ್ 2023: ಪಾಕಿಸ್ತಾನ ಇಲ್ಲದೆ ನಡೆಯಲಿದೆಯಾ ಪ್ರತಿಷ್ಠಿತ ಟೂರ್ನಿ; ಶ್ರೀಲಂಕಾಗೆ ಆತಿಥ್ಯ ಸಾಧ್ಯತೆ!

ಏಷ್ಯಾ ಕಪ್ ಟೂರ್ನಿ ಆಯೋಜನೆ ವಿಚಾರವಾಗಿ ನಡೆಯುತ್ತಿರುವ ಹಗ್ಗಜಗ್ಗಾಟ ಅಂತಿಮ ಹಂತಕ್ಕೆ ತಲುಪಿದಂತಿದೆ. ಟೂರ್ನಿಯ ಆತಿಥ್ಯದ ಹೊಣೆಹೊತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಭಾರತ ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿರುವ ಕಾರಣ ಹೈಬ್ರಿಡ್ ಮಾದರಿಯಲ್ಲಿ ಆಯೋಜನೆಗೆ ಪ್ರಸ್ತಾವನೆ ಕಳುಹಿಸಿತ್ತು. ಈ ಪ್ರಸ್ತಾವನೆಯನ್ನು ಏಷ್ಯಾ ಕ್ರಿಕೆಟ್ ಕೌನ್ಸಿಲ್(ಎಸಿಸಿ) ಒಪ್ಪಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಶ್ರೀಲಂಕಾದಲ್ಲಿ ಏಷ್ಯಾ ಕಪ್ ಟೂರ್ನಿ ಆಯೋಜನೆಯಾಗುವ ಸಾಧ್ಯತೆಯಿದೆ.

ಟೆಲಿಗ್ರಾಫ್ ಇಂಡಿಯಾ ವರದಿ ಮಾಡಿರುವ ಪ್ರಕಾರ ಎಸಿಸಿ ಮುಖ್ಯಸ್ಥರಾಗಿರುವ ಜಯ್‌ ಶಾ ಉಳಿದ ಕ್ರಿಕೆಟ್ ಮಂಡಳಿಗಳಿಗೆ ಪಿಸಿಬಿ ಪ್ರಸ್ತಾಪಿಸಿರುವ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಟೂರ್ನಿಯ ಆಯೋಜಿಸಲು ಶ್ರೀಲಂಕಾಗೆ ಅವಕಾಶ ದೊರೆಯುವ ಸಾಧ್ಯತೆಯಿದೆ.

ACC likely reject PCBs hybrid model, Pakistan may pull out, Sri Lanka to host tournament

ಇನ್ನು ಉಳಿದ ಕ್ರಿಕೆಟ್ ಮಂಡಳಿಗಳು ಕೂಡ ಶ್ರೀಲಂಕಾದಲ್ಲಿ ಟೂರ್ನಿಯನ್ನು ಆಡಲು ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಹೀಗಾಗಿ ಎಸಿಸಿಯ ಮುಂದಿನ ಎಕ್ಸಿಕ್ಯೂಟಿವ್ ಬೋರ್ಡ್ ಸಭೆಯಲ್ಲಿ ಈ ವಿಚಾರವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಮನವರಿಕೆ ಮಾಡುವ ಸಾಧ್ಯತೆಯಿದೆ. ಇನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಏಷ್ಯಾ ಕಪ್ ಟೂರ್ನಿಯಿಂದ ಸಂಪೂರ್ಣವಾಗಿ ಹೊರಗುಳಿಯುವ ಬೆದರಿಕೆಯನ್ನು ಹಾಕುತಿದ್ದು ಇದೇ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಈ ವಿಚಾರವಾಗಿ ತಮ್ಮ ಮಂಡಳಿಯ ನಿಲುವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಹೈಬ್ರಿಡ್ ಮಾದರಿಯನ್ನು ತಿರಸ್ಕರಿಸಿದರೆ ಪಾಕಿಸ್ತಾನ ಏಷ್ಯಾ ಕಪ್ ಟೂರ್ನಿಯನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೂ ಪಾಕಿಸ್ತಾನ ತಂಡ ಪ್ರಯಾಣಿಸುವುದಿಲ್ಲ ಎಂದಿದ್ದಾರೆ. ಇನ್ನು ಈ ಮಧ್ಯೆ ಐಸಿಸಿ ಮುಖ್ಯಸ್ಥ ಗ್ರೆಗ್ ಬಾರ್ಕ್ಲೆ ಹಾಗೂ ಸಿಇಒ ಜಾಫ್ ಅಲರ್ಡೈಸ್ ಪಾಕಿಸ್ತಾನಕ್ಕೆ ತೆರಳಿದ್ದು ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ಥಾನದ ಪಾಲ್ಗೊಳ್ಳುವಿಕೆಯ ಬಗ್ಗೆ ಖಚಿತಪಡಿಸಿಕೊಳ್ಳಲು ಮುಂದಾಗಿದ್ದಾರೆ.

ಇನ್ನು ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ಭಾಗವಹಿಸದಿದ್ದರೆ ಆಗ ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ನೇಪಾಳ ತಂಡಗಳು ಮಾತ್ರವೇ ಆಡಬೇಕಾಗುತ್ತದೆ. ಆದರೆ ಈ ವಿಚಾರವಾಗಿ ಈವರೆಗೆ ಯಾವುದು ಕೂಡ ಅಧಿಕೃತವಾಗಿಲ್ಲ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಹಾಗೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಈ ಬಗ್ಗೆ ಶೀಘ್ರವೇ ನಿರ್ಧಾರವನ್ನು ತೆಗೆದುಕೊಳ್ಳಬೇಕಿದ್ದು ಯಾವ ಹೆಜ್ಜೆ ಮುಂದಿಡಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

Story first published: Thursday, June 1, 2023, 14:11 [IST]
Other articles published on Jun 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+