Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Arrest: ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ ತನಿಖೆ ನಡೆಯುತ್ತಿದೆ. ಈ ದಾಳಿಯ ನಂತರ ಭಾರತ ಸರ್ಕಾರ ಪಾಕಿಸ್ತಾನ ವಿರುದ್ಧ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ. ಪಹಲ್ಗಾಮ್ ಉಗ್ರರ ದಾಳಿ ಬಳಿಕ ಅದೇ ದಿನ ಟೀಮ್ ಇಂಡಿಯಾದ ಹೆಡ್‌ಕೋಚ್ ಗೌತಮ್ ಗಂಭೀರ್ ಅವರಿಗೆ ಜೀಬ ಬೆದರಿಕೆ ಬಂದಿತು. ಅವರಿಗೆ ಇಮೇಲ್ ಮೂಲಕ ಜೀವ ಬೆದರಿಕೆಯ ಸಂದೇಶವನ್ನು ಕಳುಹಿಸಲಾಗಿತು.

ಗೌತಮ್ ಗಂಭೀರ್ ತಕ್ಷಣವೇ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರ ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಳಂಬ ಮಾಡದೆ ತನಿಖೆಯನ್ನು ಪ್ರಾರಂಭಿಸಿದರು. ಈ ಪ್ರಕರಣದಲ್ಲಿ ಕೊನೆಗೂ ದೆಹಲಿ ಪೊಲೀಸರಿಗೆ ದೊಡ್ಡ ಯಶಸ್ಸು ಸಿಕ್ಕಿದೆ.

Accused arrested for threatening to kill Gautam Gambhir

ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆಯ ಸಂದೇಶ ಕಳುಹಿಸಿದ ಗುಜರಾತ್ ಮೂಲದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನದ ನಂತರ ಆರೋಪಿ ಮತ್ತು ಆತನ ಹಿನ್ನಲ್ಲೆಯನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಗೌತಮ್ ಗಂಭೀರ್ ಅವರು ಏಪ್ರಿಲ್ 24 ರಂದು ದೆಹಲಿ ಪೊಲೀಸರಿಗೆ ದೂರ ನೀಡಿದ್ದರು. ಅವರು ತಮ್ಮಗೆ ಜೀವ ಬೆದರಿಕೆಯ ಎರಡು ಇಮೇಲ್ ಸಂದೇಶ ಬಂದಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದರು. ಬೆದರಿಕೆ ಹಾಕಿದ ಆರೋಪಿ ತನ್ನನ್ನು ಕಾಶ್ಮೀರದ ಐಸಿಸ್ ಉಗ್ರ ಸಂಘಟನಯವನು ಎಂದು ಹೇಳಿಕೊಂಡಿದ್ದನು.

ಗೌತಮ್ ಗಂಭೀರ್ ನೀಡಿದ ದೂರಿನ ಮೇಗೆ ಕಾರ್ಯ ಪ್ರವೃತ್ತರಾದ ಕೇಂದ್ರ ಜಿಲ್ಲಾ ಪೊಲೀಸರು ಗುಜರಾತ್ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಗಂಭೀರ್ ಅವರಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ ಆರೋಪಿಯನ್ನು ಜಿಗ್ನೇಶ್ ಸಿಂಗ್ ಪರ್ಮಾರ್ ಎಂದು ಗುರುತಿಸಲಾಗಿದೆ.

ದೆಹಲಿ ಪೊಲೀಸರು ಮಾಧ್ಯಮಗಳಿಗೆ ನೀಡಿರುವ ಮಾಹಿತಿ ಪ್ರಕಾರ, ಜಿಗ್ನೇಶ್ ಸಿಂಗ್‌ 21 ವಯಸ್ಸಿನವರಾಗಿದ್ದು, ಗುಜರಾತ್‌ನಲ್ಲಿ ವಾಸಿಸುತ್ತದ್ದಾರೆ. ಆರೋಪಿ ಎಂಜಿನಿಯರಿಂಗ್ ವಿದ್ಯಾರ್ಥಿ. ಬಂಧನದ ನಂತರ ಆರೋಪಿಯನ್ನು ವಿಚಾರಣೆ ನಡೆಸಿರುವ ಪೊಲೀಸರಿಗೆ ಜೀವ ಬೆದರಿಕೆ ಹಾಕಲು ಕಾರಣವೇನು? ಎಂಬುದಕ್ಕೆ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಆದರೆ, ಆರೋಪಿ ಕುಟುಂಬಸ್ಥರು ನೀಡಿರುವ ಮಾಹಿತಿ ಪ್ರಕಾರ, ಜಿಗ್ನೇಶ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ. ಆದಾಗ್ಯೂ, ದೆಹಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇಮೇಲ್‌ನಲ್ಲಿ ಏನಿದೆ?

ಏಪ್ರಿಲ್ 22 ರಂದು ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆಯ ಇಮೇಲ್ ಬಂದಿತ್ತು. "ನಾನು ನಿನ್ನನ್ನು ಕೊಲ್ಲುತ್ತೇನೆ' ಎಂಬ ಮೂರು ಪದಗಳಿದ್ದ ಇಮೇಲ್‌ ಅನ್ನು ಕಳುಹಿಸಲಾಗಿತ್ತು. ಇದಕ್ಕೂ ಮೊದಲು, ಗೌತಮ್ ಗಂಭೀರ್ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ, ಮೃತರಿಗಾಗಿ ಪ್ರಾರ್ಥಿಸಿದ್ದರು. ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, "ಮೃತರ ಕುಟುಂಬಗಳಿಗಾಗಿ ಪ್ರಾರ್ಥಿಸುತ್ತೇನೆ. ಇದಕ್ಕೆ ಕಾರಣರಾದವರು ಬೆಲೆ ತೆರಬೇಕಾಗುತ್ತದೆ. ಭಾರತ ದಾಳಿ ಮಾಡುತ್ತದೆ ಎಂದು ಬರೆದುಕೊಂಡಿದ್ದರು.

Story first published: Sunday, April 27, 2025, 17:50 [IST]
Other articles published on Apr 27, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+