ತಂಡದಲ್ಲಿ ಬೇರೆ ಒಳ್ಳೊಳ್ಳೆ ಆಟಗಾರರಿದ್ದಾರೆ; ಕೊಹ್ಲಿ ನಾಯಕತ್ವ ತ್ಯಜಿಸುತ್ತಿರುವುದರ ಬಗ್ಗೆ ಸುದೀಪ್ ಮಾತು

ಕನ್ನಡ ಚಲನಚಿತ್ರರಂಗದ ನಟ ಕಿಚ್ಚ ಸುದೀಪ್ ಅವರಿಗೆ ಕ್ರಿಕೆಟ್ ಎಂದರೆ ಅಚ್ಚುಮೆಚ್ಚು, ಈ ಹಿಂದೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಮತ್ತು ಇನ್ನಿತರ ಕ್ರಿಕೆಟ್ ಲೀಗ್‌ಗಳಲ್ಲಿ ಕಣಕ್ಕಿಳಿದ ಅನುಭವವಿರುವ ಕಿಚ್ಚ ಸುದೀಪ್ ಇತ್ತೀಚಿಗಷ್ಟೆ ದುಬೈ ಪ್ರಯಾಣವನ್ನು ಕೈಗೊಂಡು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆದ ಪಂದ್ಯಗಳನ್ನು ವೀಕ್ಷಿಸಿದ್ದರು.

ಪಂಜಾಬ್ vs ರಾಜಸ್ಥಾನ್: ಪಂದ್ಯ ಗೆದ್ದರೂ 12 ಲಕ್ಷ ದಂಡ ತೆತ್ತ ಸಂಜು ಸ್ಯಾಮ್ಸನ್ಪಂಜಾಬ್ vs ರಾಜಸ್ಥಾನ್: ಪಂದ್ಯ ಗೆದ್ದರೂ 12 ಲಕ್ಷ ದಂಡ ತೆತ್ತ ಸಂಜು ಸ್ಯಾಮ್ಸನ್

ಹೌದು ತಮ್ಮ ವೈಯಕ್ತಿಕ ಕೆಲಸಗಳ ನಿಮಿತ್ತ ಯುಎಇಯಲ್ಲಿ ಬೀಡುಬಿಟ್ಟಿರುವ ಕನ್ನಡ ಚಲನಚಿತ್ರರಂಗದ ನಟ ಕಿಚ್ಚ ಸುದೀಪ್ ಇತ್ತೀಚೆಗಷ್ಟೇ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವನ್ನು ವೀಕ್ಷಿಸಲು ಮೈದಾನಕ್ಕೆ ಬೆಂಗಳೂರು ತಂಡದ ಜೆರ್ಸಿಯನ್ನು ತೊಟ್ಟು ಬಂದಿದ್ದರು. ಕಿಚ್ಚ ಸುದೀಪ್ ಜತೆಗೆ ಅವರ ಪತ್ನಿ ಪ್ರಿಯಾ ಸುದೀಪ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೆರ್ಸಿಯನ್ನು ತೊಟ್ಟು ಮೈದಾನಕ್ಕೆ ಆಗಮಿಸಿ ಪಂದ್ಯವನ್ನು ವೀಕ್ಷಿಸಿ ಬೆಂಗಳೂರು ತಂಡಕ್ಕೆ ಬೆಂಬಲವನ್ನು ನೀಡಿದ್ದರು.

ಪಂಜಾಬ್ ತಂಡಕ್ಕೆ ಮಣ್ಣು ಮುಕ್ಕಿಸಿ ಹೀರೋಗಳಾದ ರಾಜಸ್ಥಾನ್ ರಾಯಲ್ಸ್‌ನ ಇಬ್ಬರು ಆಟಗಾರರಿವರುಪಂಜಾಬ್ ತಂಡಕ್ಕೆ ಮಣ್ಣು ಮುಕ್ಕಿಸಿ ಹೀರೋಗಳಾದ ರಾಜಸ್ಥಾನ್ ರಾಯಲ್ಸ್‌ನ ಇಬ್ಬರು ಆಟಗಾರರಿವರು

ಹೀಗೆ ದುಬೈನಲ್ಲಿ ಬೀಡು ಬಿಟ್ಟಿರುವ ಕಿಚ್ಚ ಸುದೀಪ್ ಅವರನ್ನು ಗಲ್ಫ್ ನ್ಯೂಸ್ ಚಾನೆಲ್ ಸಂದರ್ಶನವನ್ನು ಮಾಡಿದ್ದು ಈ ಸಂದರ್ಶನದಲ್ಲಿ ಕಿಚ್ಚ ಸುದೀಪ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಐಪಿಎಲ್ ಹಾಗೂ ಟೀಮ್ ಇಂಡಿಯಾ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಮನಬಿಚ್ಚಿ ಮಾತನಾಡಿದ್ದಾರೆ. ಕ್ರಿಕೆಟ್ ಬಗ್ಗೆ ಅಪಾರ ಒಲವನ್ನು ಹೊಂದಿರುವ ಕಿಚ್ಚ ಸುದೀಪ್ ಸಂದರ್ಶನದಲ್ಲಿ ವಿವಿಧ ವಿಷಯಗಳ ಕುರಿತು ಮನಬಿಚ್ಚಿ ಮಾತನಾಡಿದ್ದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯವರ ಕುರಿತು ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಟಿ ಟ್ವೆಂಟಿ ತಂಡದ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ಹೇಳಿಕೆ ನೀಡಿರುವುದರ ಕುರಿತು ಕಿಚ್ಚ ಸುದೀಪ್ ಈ ಕೆಳಕಂಡಂತೆ ಪ್ರತಿಕ್ರಿಯಿಸಿದ್ದಾರೆ.

ನಾಯಕತ್ವ ತ್ಯಜಿಸುವ ಕೊಹ್ಲಿ ನಿರ್ಧಾರಕ್ಕೆ ಸುದೀಪ್ ಬೆಂಬಲ

ನಾಯಕತ್ವ ತ್ಯಜಿಸುವ ಕೊಹ್ಲಿ ನಿರ್ಧಾರಕ್ಕೆ ಸುದೀಪ್ ಬೆಂಬಲ

ಇತ್ತೀಚಿಗಷ್ಟೇ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯ ಮೂಲಕ ಪತ್ರವೊಂದನ್ನು ಹಂಚಿಕೊಂಡಿದ್ದ ವಿರಾಟ್ ಕೊಹ್ಲಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಣೆ ಮಾಡಿದ್ದರು. ಈ ಕುರಿತು ಸಂದರ್ಶನದಲ್ಲಿ ಮಾತನಾಡಿರುವ ನಟ ಕಿಚ್ಚ ಸುದೀಪ್ ವಿರಾಟ್ ಕೊಹ್ಲಿ ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿಯೇ ಇರುತ್ತದೆ, ಅವರು ಆಟವನ್ನು ಮತ್ತಷ್ಟು ಬಲಪಡಿಸುವುದಕ್ಕೋಸ್ಕರ ಈ ನಿರ್ಧಾರ ಕೈಗೊಂಡಿರುವುದರಿಂದ ಅವರ ನಿರ್ಧಾರಕ್ಕೆ ಬೆಂಬಲ ಇದೆ ಎಂದು ಕಿಚ್ಚ ಸುದೀಪ್ ಹೇಳಿದರು.

ಈ ತಂಡದಲ್ಲಿ ಒಳ್ಳೊಳ್ಳೆ ಆಟಗಾರರಿದ್ದಾರೆ ಎಂದ ಸುದೀಪ್

ಈ ತಂಡದಲ್ಲಿ ಒಳ್ಳೊಳ್ಳೆ ಆಟಗಾರರಿದ್ದಾರೆ ಎಂದ ಸುದೀಪ್

ಇನ್ನು ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸಿದರೆ ಹೆಚ್ಚೇನೂ ಚಿಂತಿಸುವ ಅಗತ್ಯವಿಲ್ಲ ಏಕೆಂದರೆ ಪ್ರಸ್ತುತ ಭಾರತ ತಂಡದಲ್ಲಿ ಇರುವ ಆಟಗಾರರೆಲ್ಲರೂ ಉತ್ತಮರೇ, ಅವರಲ್ಲಿ ಯಾರು ನಾಯಕರಾದರೂ ಉತ್ತಮ ಕಾರ್ಯವನ್ನು ನಿರ್ವಹಿಸಲಿದ್ದಾರೆ ಎಂದು ಕಿಚ್ಚ ಸುದೀಪ್ ವಿಶ್ವಾಸ ವ್ಯಕ್ತಪಡಿಸಿದರು.

ಟೀಮ್ ಇಂಡಿಯಾದಲ್ಲಿ ರಿಷಬ್ ಪಂತ್ ಜವಾಬ್ದಾರಿ ಬಗ್ಗೆ ಹೇಳಿದ ರಿಕಿ ಪಾಂಟಿಂಗ್ | Oneindia Kannada
ಕೊಲ್ಕತ್ತಾ ವಿರುದ್ಧದ ಬೆಂಗಳೂರು ಸೋಲಿನ ಕುರಿತು ಮಾತನಾಡಿದ ಸುದೀಪ್

ಕೊಲ್ಕತ್ತಾ ವಿರುದ್ಧದ ಬೆಂಗಳೂರು ಸೋಲಿನ ಕುರಿತು ಮಾತನಾಡಿದ ಸುದೀಪ್

ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ ಕೇವಲ 92 ರನ್‌ಗಳಿಗೆ ಆಲ್ ಔಟ್ ಆಯಿತು, ಈ ಪಂದ್ಯದಲ್ಲಿ 10 ಓವರ್‌ಗಳಲ್ಲಿ 94 ರನ್ ಬಾರಿಸಿ 9 ವಿಕೆಟ್‍ಗಳ ಭರ್ಜರಿ ಜಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಆಚರಿಸಿಕೊಂಡಿತು. ಹೀಗೆ ಕೋಲ್ಕತ್ತಾ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ ಸೋತ ಪಂದ್ಯವನ್ನು ಸ್ವತಃ ಕಿಚ್ಚ ಸುದೀಪ್ ಅವರೇ ಮೈದಾನಕ್ಕೆ ತೆರಳಿ ತಮ್ಮ ಪತ್ನಿ ಜೊತೆ ವೀಕ್ಷಿಸಿದ್ದರು. ಈ ಕುರಿತು ಮಾತನಾಡಿದ ಕಿಚ್ಚ ಸುದೀಪ್ ಪಂದ್ಯವೆಂದಮೇಲೆ ಸೋಲು ಗೆಲುವು ಮಾಮೂಲು, ಆ ದಿನದಂದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಉತ್ತಮ ಆಟವನ್ನಾಡಿದ ಕಾರಣ ಗೆಲುವನ್ನು ಸಾಧಿಸಿತು ಹಾಗೂ ಆ ತಂಡದಲ್ಲಿರುವ ಹಲವಾರು ಆಟಗಾರರು ನಮ್ಮ ಭಾರತೀಯರೇ ಆಗಿರುವ ಕಾರಣ ಪ್ರಶಂಸಿಸೋಣ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Wednesday, September 22, 2021, 17:12 [IST]
Other articles published on Sep 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X