Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Adam Gilchrist: ಬುಮ್ರಾ-ಗಿಲ್ ಅಲ್ಲ.. ಈತನೇ ಟೀಮ್ ಇಂಡಿಯಾ ಟೆಸ್ಟ್ ನಾಯಕ; ಗಿಲ್‌ಕ್ರಿಸ್ಟ್ ಭವಿಷ್ಯ

ಆಸ್ಟ್ರೇಲಿಯಾದ ಮಾಜಿ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ಆಡಮ್ ಗಿಲ್‌ಕ್ರಿಸ್ಟ್ ಟೀಮ್ ಇಂಡಿಯಾದ ಮುಂದಿನ ಟೆಸ್ಟ್ ನಾಯಕನ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ವೃತ್ತಿಜೀವನದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಇಂತಹ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದಿನ ಟೆಸ್ಟ್ ನಾಯಕನ ಹುಡುಕಾಟದಲ್ಲಿದೆ. ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಅವರನ್ನು ಟೀಮ್ ಇಂಡಿಯಾದ ಮುಂದಿನ ಟೆಸ್ಟ್ ನಾಯಕನನ್ನಾಗಿ ಮಾಡಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಸಜ್ಜಾಗಿದೆ. ಆದರೆ, ಆಡಮ್ ಗಿಲ್‌ಕ್ರಿಸ್ಟ್ ಅವರು ಟೀಮ್ ಇಂಡಿಯಾ ಮುಂದಿನ ಟೆಸ್ಟ್ ನಾಯಕನನ್ನು ಹೆಸರಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಅವರನ್ನು ಟೆಸ್ಟ್ ನಾಯಕರನ್ನಾಗಿ ಮಾಡುವುದರ ಬಗ್ಗೆ ಆಡಮ್ ಗಿಲ್‌ಕ್ರಿಸ್ಟ್ ಕಳವಳ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ನಾಯಕನ ಪಾತ್ರವನ್ನು ವಹಿಸಲು ಒಪ್ಪಿಕೊಂಡರೆ ಆಶ್ಚರ್ಯವಿಲ್ಲ ಎಂದು ಆಡಮ್ ಗಿಲ್‌ಕ್ರಿಸ್ಟ್ ಹೇಳಿದ್ದಾರೆ.

Adam Gilchrist also revealed the name of Team India next Test captain

ಗಿಲ್‌ಕ್ರಿಸ್ಟ್ ಹೇಳಿದ್ದೇನು?

ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತಷ್ಟು ಯಶಸ್ಸು ಸಾಧಿಸುತ್ತಾರೆ ಎಂಬ ನಂಬಿಕೆ ಇಲ್ಲ. ಬಹುಶಃ ಅವರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಅವಕಾಶ ಸಿಗಬಹುದು ಎಂದು ನಾನು ಭಾವಿಸುತ್ತೇನೆ. ಅವರು ಇಂಗ್ಲೆಂಡ್ ವಿರುದ್ಧ ಕೆಲವು ಪಂದ್ಯಗಳನ್ನು ಆಡಬೇಕಿದೆ. ನಂತರ ಅವರು ಚಾಂಪಿಯನ್ಸ್ ಟ್ರೋಫಿಗೆ ಹೋಗಬಹುದ ಅಥವಾ ತಂಡದಿಂದ ಔಟ್ ಆಗಬಹುದು.

ಬುಮ್ರಾ ಅವರನ್ನು ಪೂರ್ಣ ಸಮಯದ ಟೆಸ್ಟ್ ನಾಯಕನನ್ನಾಗಿ ಮಾಡಬೇಕೇ ಅಥವಾ ಬೇಡವೇ ಎಂಬುದು ನನಗೆ ತಿಳಿದಿಲ್ಲ. ಇದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ಗೆ ಸ್ವಲ್ಪ ಸವಾಲಾಗಿದೆ. ಭಾರತದ ಟೆಸ್ಟ್ ನಾಯಕತ್ವ ಮತ್ತೊಮ್ಮೆ ವಿರಾಟ್ ಕೊಹ್ಲಿಗೆ ಮರಳಿದರೆ ನಾನು ಆಶ್ಚರ್ಯಪಡುವುದಿಲ್ಲ. ಅವರು ಕೂಡ ಅದೇ ರೀತಿ ಮಾಡಲು ಯಾವುದೇ ಅಭ್ಯಂತರವಿಲ್ಲ. ಭಾರತಕ್ಕೆ ಇದು ಸವಾಲಿನ ಸಮಯ ಎಂದು ಗಿಲ್‌ಕ್ರಿಸ್ಟ್ ನುಡಿದ್ದಾರೆ.

ಇದೇ ವೇಳೆ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ವಿಭಿನ್ನ ಸಲಹೆ ನೀಡಿದ್ದಾರೆ. ಮೈಕಲ್ ವಾನ್ ಅವರು ಟೆಸ್ಟ್ ನಾಯಕತ್ವವನ್ನು ಜಸ್ಪ್ರೀತ್ ಬುಮ್ರಾ ಅವರಿಗೆ ಹಸ್ತಾಂತರಿಸಬೇಕೆಂದು ಹೇಳಿದ್ದಾರೆ. ಜೊತೆಗೆ ಶುಭಮನ್ ಗಿಲ್ ಅವರನ್ನು ಉಪನಾಯಕನ್ನಾಗಿ ಮಾಡಬೇಕು ಎಂದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ 1-3 ಅಂತರದಿಂದ ಸೋಲನುಭವಿಸಿದ್ದು, ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಬ್ಯಾಟರ್‌ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫಾರ್ಮ್‌ನಲ್ಲಿ ಇರಲಿಲ್ಲ. ಹೀಗಾಗಿ ಸರಣಿಯಲ್ಲಿ ಭಾರತ 1-3 ಅಂತರಿಂದ ಸೋತಿತು. ರೋಹಿತ್ ಶರ್ಮಾ ತಮ್ಮ ಕಳಪೆ ಫಾರ್ಮ್‌ನಿಂದ ಐದನೇ ಟೆಸ್ಟ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದರು. ಆದರೆ ಅವರು ನಿವೃತ್ತಿಯ ಬಗ್ಗೆ ಯೋಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ಮರಳುವ ಸುಳಿವು ನೀಡಿದ್ದರು.

ಮತ್ತೊಂದೆಡೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) 2025ರ ಫೈನಲ್‌ ರೇಸ್‌ನಿಂದ ಹೊರಗುಳಿದ ನಂತರ, ಭಾರತ ತಂಡದ ಮುಂದಿನ ಟೆಸ್ಟ್ ನಾಯಕನನ್ನು ನೇಮಿಸುವ ಬಗ್ಗೆ ಚರ್ಚೆ ತೀವ್ರಗೊಂಡಿದೆ. ಟೀಮ್ ಇಂಡಿಯಾದ ಮುಂದಿನ ಟೆಸ್ಟ್ ನಿಯೋಜನೆ ಇಂಗ್ಲೆಂಡ್‌ನಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯಾಗಿದ್ದು, ಇದು ಜೂನ್ 20, 2025 ರಿಂದ ಪ್ರಾರಂಭವಾಗಲಿದೆ. ರೋಹಿತ್ ಇಂಗ್ಲೆಂಡ್‌ಗೆ ಹೋಗುವುದು ಅನುಮಾನ ಎಂದು ಆಡಮ್ ಗಿಲ್‌ಕ್ರಿಸ್ ಹೇಳಿದ್ದಾರೆ.

Story first published: Thursday, January 9, 2025, 11:20 [IST]
Other articles published on Jan 9, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+