Afg Vs Pak T20: ಮೊಟ್ಟ ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಗೆದ್ದು ಇತಿಹಾಸ ನಿರ್ಮಿಸಿದ ಅಫ್ಘಾನಿಸ್ತಾನ

ಅಫ್ಘಾನಿಸ್ತಾನ ಮೊಟ್ಟ ಮೊದಲ ಬಾರಿಗೆ ಪಾಕಿಸ್ತಾನ ತಂಡದ ವಿರುದ್ಧ ಗೆದ್ದು ಸಂಭ್ರಮಿಸಿದೆ. ಶಾರ್ಜಾದಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿದ ಅಫ್ಘಾನಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ರಚಿಸಿದೆ.
ಯುಎಇಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ಐತಿಹಾಸಿಕ ಜಯ ದಾಖಲಿಸಿದೆ. ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ, ಅಫ್ಘಾನಿಸ್ತಾನದ ಶಿಸ್ತಿನ ಬೌಲಿಂಗ್ ಮುಂದೆ ರನ್ ಗಳಿಸಲು ಪರದಾಡಿತು.
ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್, ಶಹೀನ್ ಅಫ್ರಿದಿ, ಹ್ಯಾರಿಸ್ ರೌಫ್‌ರಂತಹ ಪ್ರಮುಖ ಆಟಗಾರರು ಸರಣಿಯಲ್ಲಿ ಆಡದೇ ಇರುವುದು ಪಾಕಿಸ್ತಾನ ತಂಡಕ್ಕೆ ಮುಳುವಾಯಿತು. ಆರಂಭಿಕ ಆಟಗಾರ ಸೈಮ್ ಅಯೂಬ್ 15 ಎಸೆತಗಳಲ್ಲಿ 17 ರನ್ ಗಳಿಸಿ ಔಟಾದರು, ಮೊಹಮ್ಮದ್ ಹ್ಯಾರಿಸ್ 11 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.
ಅಬ್ದುಲ್ಲಾ ಶಫೀಕ್ ಮತ್ತು ಅಜಮ್ ಖಾನ್ ಶೂನ್ಯಕ್ಕೆ ಔಟಾಗುವ ಮೂಲಕ ಪಾಕಿಸ್ತಾನ ಒತ್ತಡಕ್ಕೆ ಸಿಲುಕಿತು. ತಯ್ಯಬ್ ತಾಹಿರ್ 9 ಎಸೆತಗಳಲ್ಲಿ 16 ರನ್ ಗಳಿಸಿದರೂ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ. ಇಮಾದ್ ವಾಸಿಂ 32 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. ನಾಯಕ ಶದಾಬ್ ಖಾನ್ ಕೂಡ 18 ಎಸೆತಗಳಲ್ಲಿ 12 ರನ್ ಗಳಿಸಿದರು. ಅಂತಿಮವಾಗಿ ಪಾಕಿಸ್ತಾನ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 92 ರನ್‌ಗಳನ್ನು ಮಾತ್ರ ಕಲೆಹಾಕಿತು.

ಅತ್ಯುತ್ತಮ ಬೌಲಿಂಗ್ ಮಾಡಿದ ಅಫ್ಘಾನಿಸ್ತಾನ
ವೇಗದ ಬೌಲರ್ ಫಜಲ್ಹಕ್ ಫಾರೂಕಿ 4 ಓವರ ಗಳಲ್ಲಿ 13 ರನ್ ನೀಡಿ 2 ವಿಕೆಟ್ ಪಡೆದರು. ಮುಜೀಬ್ ಉರ್ ರೆಹಮಾನ್ ಮತ್ತು ಮೊಹಮ್ಮದ್ ನಬಿ ಕೂಡ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ಅಜ್ಮತುಲ್ಲಾ ಒಮರ್ಝೈ, ನವೀನ್-ಉಲ್-ಹಕ್ ಮತ್ತು ನಾಯಕ ರಶೀದ್ ಖಾನ್ ತಲಾ ಒಂದು ವಿಕೆಟ್ ಪಡೆದರು.

ತಾಳ್ಮೆಯ ಆಟವಾಡಿ ಗೆಲ್ಲಿಸಿದ ಮೊಹಮ್ಮದ್ ನಬಿ
ಸುಲಭದ ಸವಾಲನ್ನು ಬೆನ್ನತ್ತಿದ ಅಫ್ಘಾನಿಸ್ತಾನ ಎಚ್ಚರಿಕೆಯಿಂದಲೇ ಬ್ಯಾಟಿಂಗ್ ಆರಂಭಿಸಿತು. ಆದರೆ ಯುವ ಬೌಲರ್ ಇನ್ಶಾನುಲ್ಲಾ ಎರಡು ವಿಕೆಟ್ ಪಡೆಯುವ ಮೂಲಕ ಅಫ್ಘಾನಿಸ್ತಾನಕ್ಕೆ ಆಘಾತ ನೀಡಿದರು. 23 ರನ್ ಗಳಿಸಿದ್ದಾಗಲೇ ಎರಡು ವಿಕೆಟ್ ಪತನಗೊಂಡವು. ಇಬ್ರಾಹಿಂ ಝದ್ರಾನ್ 9 ರನ್ ಗಳಿಸಿ ಔಟಾದರು. ಗುಲ್ಬದಿನ್ ನೈಬ್ ಶೂನ್ಯಕ್ಕೆ ಔಟಾದರು.
ರಹಮಾನುಲ್ಲಾ ಗುರ್ಬಾಜ್ 16 ರನ್ ಗಳಿಸಿದರೆ, ಕರೀಮ್ ಜನತ್ 7 ರನ್‌ಗಳಿಗೆ ಔಟಾದರು. ಮೊಹಮ್ಮದ್ ನಬಿ ಮಾತ್ರ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು. 38 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 38 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ನಬಿಗೆ ಜೊತೆಯಲ್ಲಿ ತಾಳ್ಮೆಯ ಆಟವಾಡಿದ ನಜಿಬುಲ್ಲಾ ಝದ್ರಾನ್ 23 ಎಸೆತಗಳಲ್ಲಿ ಅಜೇಯ 17 ರನ್ ಗಳಿಸಿದರು. 17.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿದ ಅಫ್ಘಾನಿಸ್ತಾನ ಪಾಕಿಸ್ತಾನ ವಿರುದ್ಧ ಮೊದಲ ಜಯ ಸಾಧಿಸಿ ಸಂಭ್ರಮಿಸಿದೆ. ಎರಡು ವಿಕೆಟ್ ಪಡೆದು, ಅಜೇಯ 38 ರನ್ ಗಳಿಸಿದ ಮೊಹಮ್ಮದ್ ನಬಿ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದುಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications