Afg Vs Pak T20: ಪಾಕಿಸ್ತಾನದ ವಿರುದ್ಧ ಮೊದಲ ಬಾರಿಗೆ ಟಿ20 ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ ಅಫ್ಘಾನಿಸ್ತಾನ

ಯುಎಇಯ ಶಾರ್ಜಾ ಅಂಗಳದಲ್ಲಿ ಅಫ್ಘಾನಿಸ್ತಾನ ಹೊಸ ಇತಿಹಾಸ ಸೃಷ್ಟಿಸಿದೆ. ಪಾಕಿಸ್ತಾನದ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಕೂಡ ಗೆಲುವು ಸಾಧಿಸಿದ ಅಫ್ಘಾನಿಸ್ತಾನ ಮೊಟ್ಟ ಮೊದಲ ಬಾರಿಗೆ ಪಾಕ್ ವಿರುದ್ಧ ಸರಣಿ ಗೆದ್ದ ಸಾಧನೆ ಮಾಡಿದೆ.
ಇದೇ ಅಂಗಳದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನ 7 ವಿಕೆಟ್‌ಗಳ ಜಯ ಸಾಧಿಸಿತ್ತು. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಗೆದ್ದು ಬೀಗಿದೆ.
ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಅಫ್ಘಾನಿಸ್ತಾನ ಬೌಲರ್ ಗಳು ಎರಡನೇ ಪಂದ್ಯದಲ್ಲೂ ತಮ್ಮ ಪ್ರಾಬಲ್ಯ ಮುಂದುವರೆಸಿದರು. ಮೊದಲನೇ ಓವರ್ ನಲ್ಲೇ ಫಜಲ್ಹಕ್ ಫಾರೂಕಿ ಎರಡು ವಿಕೆಟ್ ಪಡೆದು ಪಾಕ್ ತಂಡಕ್ಕೆ ಶಾಕ್ ನೀಡಿದರು.
ಸೈಯಂ ಅಯ್ಯುಬ್ ಮತ್ತು ಅಬ್ದುಲ್ಲಾ ಶಫೀಕ್ ಇಬ್ಬರೂ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು. ಮೊಹಮ್ಮದ್ ಹ್ಯಾರಿಸ್ 9 ಎಸೆತಗಳಲ್ಲಿ 15 ರನ್ ಗಳಿಸಿ ಔಟಾದರು. ನಂತರ ಬಂದ ತಯ್ಯಬ್ ತಾಹಿರ್ ಕೂಡ 23 ಎಸೆತಗಳಲ್ಲಿ ಕೇವಲ 13 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ವಿಕೆಟ್ ಕೀಪರ್ ಬ್ಯಾಟರ್ ಆಜಾಂ ಖಾನ್ 1 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು.

ಇಮಾದ್ ವಾಸಿಂ-ಶಾದಾಬ್ ಖಾನ್ ಆಸರೆ
63 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡ ಪಾಕಿಸ್ತಾನ ಮತ್ತೆ ಕಡಿಮೆ ಮೊತ್ತಕ್ಕೆ ಕುಸಿಯುವ ಭೀತಿ ಅನುಭವಿಸಿತು. ಆದರೆ ಇಮಾದ್ ವಾಸಿಮ್ ಮತ್ತು ಶಾದಾಬ್ ಖಾನ್ 6ನೇ ವಿಕೆಟ್‌ಗೆ 67 ರನ್‌ಗಳನ್ನು ಕಲೆ ಹಾಕುವ ಮೂಲಕ ತಂಡಕ್ಕೆ ಆಸರೆಯಾದರು. ಇಮಾದ್ ವಾಸಿಂ 57 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ಸಹಿತ ಅಜೇಯ 64 ರನ್ ಗಳಿಸಿದರು. ಶಾದಾಬ್ ಖಾನ್ 25 ಎಸೆತಗಳಲ್ಲಿ 32 ರನ್ ಗಳಿಸಿದರು.
ಫಜಲ್ಹಕ್ ಫಾರೂಕಿ 4 ಓವರ್ ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ನವೀನ್ ಉಲ್ ಹಕ್, ರಶೀದ್ ಖಾನ್, ಕರೀಂ ಜನತ್ ತಲಾ ಒಂದು ವಿಕೆಟ್ ಪಡೆದರು. ಪಾಕಿಸ್ತಾನ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು.

7 ವಿಕೆಟ್‌ಗಳ ಗೆಲುವು ಸಾಧಿಸಿದ ಅಫ್ಘಾನಿಸ್ತಾನ
131 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಅಫ್ಘಾನಿಸ್ತಾನ ಆರಂಭದಲ್ಲಿ ಉಸ್ಮಾನ್ ಘನಿ ವಿಕೆಟ್ ಕಳೆದುಕೊಂಡರು, ರಹಮಾನುಲ್ಲಾ ಗುರ್ಬಾಜ್ ಮತ್ತು ಇಬ್ರಾಹಿಂ ಜರ್ದಾನ್ ಎಚ್ಚರಿಕೆಯ ಬ್ಯಾಟಿಂಗ್ ಮಾಡಿದರು. ಗುರ್ಬಾಜ್ 49 ಎಸೆತಗಳಲ್ಲಿ 44 ರನ್ ಗಳಿಸಿದರೆ, ಜರ್ದಾನ್ 40 ಎಸೆತಗಳಲ್ಲಿ 38 ರನ್ ಗಳಿಸಿದರು. ಎರಡನೇ ವಿಕೆಟ್‌ಗೆ ಈ ಜೋಡಿ 56 ರನ್ ಗಳಿಸಿತು.
ನಜೀಬುಲ್ಲಾ ಝರ್ದಾನ್ 12 ಎಸೆತಗಳಲ್ಲಿ 2 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 23 ರನ್ ಗಳಿಸಿದರು. ಮೊಹಮ್ಮದ್ ನಬಿ 9 ಎಸೆತಗಳಲ್ಲಿ 1 ಸಿಕ್ಸರ್ ಸಹಿತ ಅಜೇಯ 14 ರನ್ ಗಳಿಸಿದರು. 19.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದ ಅಫ್ಘಾನಿಸ್ತಾನ 7 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications