Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

AFG vs SA: 177 ರನ್‌ಗಳಿಂದ ದಕ್ಷಿಣ ಆಫ್ರಿಕಾ ಮಣಿಸಿ ಇತಿಹಾಸ ಸೃಷ್ಟಿಸಿದ ಅಫ್ಘಾನಿಸ್ತಾನ

ಅಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಆಫ್ಗನ್‌ ಇತಿಹಾಸ ಸೃಷ್ಟಿಸಿದೆ. ಏಕದಿನ ಸರಣಿಯಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾವನ್ನು ಸೋಲಿಸಿ, ದಾಖಲೆಯ ಪುಟಕ್ಕೆ ಎಂಟ್ರಿ ನೀಡಿದೆ.

ಅಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಫ್ಗಾನ್‌ 6 ವಿಕೆಟ್‌ಗಳಿಂದ ಜಯ ಸಾಧಿಸಿತ್ತು. ಎರಡನೇ ಏಕದಿನ ಪಂದ್ಯದಲ್ಲಿ 177 ರನ್‌ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ದಾಖಲೆ ನಿರ್ಮಿಸಿದೆ. ಮೊದಲು ಬ್ಯಾಟ್‌ ಮಾಡಿದ ಅಫ್ಘಾನಿಸ್ತಾನ 4 ವಿಕೆಟ್‌ಗೆ 311 ರನ್‌ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 134 ರನ್‌ಗಳಿಗೆ ಸರ್ವಪತನ ಕಂಡು ಆಘಾತ ಅನುಭವಿಸಿದೆ.

Afghanistan Clinches Historic ODI Series Win Over South Africa with 177-Run Victory

ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ರಿಜ್‌ ಹಸನ್‌ ಹಾಗೂ ರಹಮಾನುಲ್ಲಾ ಗುರ್ಬಾಜ್ ತಂಡಕ್ಕೆ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 88 ರನ್‌ ಸೇರಿಸಿತು. ರಿಜ್‌ ಹಸನ್‌ 29 ರನ್‌ಗಳಿಸಿ ನಿರಾಸೆ ಅನುಭವಿಸಿದರು.

ಎರಡನೇ ವಿಕೆಟ್‌ಗೆ ಶತಕದ ಜೊತೆಯಾಟ

ರಹಮಾನುಲ್ಲಾ ಗುರ್ಬಾಜ್ ಹಾಗೂ ರಹಮತ್ ಶಾ ಜೊತೆಗೂಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿ ಹಾಕಲು ದಕ್ಷಿಣ ಆಫ್ರಿಕಾ ತಂಡ ವಿಫಲವಾಯಿತು. ಈ ಜೋಡಿ ಎರಡನೇ ವಿಕೆಟ್‌ಗೆ ಶತಕದ ಜೊತೆಯಾಟವನ್ನು ನೀಡಿತು. ರಹಮಾನುಲ್ಲಾ ಗುರ್ಬಾಜ್ 110 ಎಸೆತಗಳಲ್ಲಿ 10 ಬೌಂಡರಿ, 3 ಸಿಕ್ಸರ್‌ ನೆರವಿನಿಂದ 105 ರನ್‌ ಸೇರಿಸಿ ಔಟ್ ಆದರು.

ರಹಮತ್ ಶಾ, ಅಜ್ಮತುಲ್ಲಾ ಅರ್ಧಶತಕ

ಅಫ್ಘಾನಿಸ್ತಾನದ ಮಧ್ಯಮ ಕ್ರಮಾಂಕದ ಆಟಗಾರರಾದ ರಹಮತ್ ಶಾ ಮತ್ತು ಅಜ್ಮತುಲ್ಲಾ ಒಮರ್ಜಾಯ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರಹಮತ್ ಶಾ 2 ಬೌಂಡರಿ ನೆರವಿನಿಂದ 50 ರನ್‌ ಬಾರಿಸಿದರೆ, ಅಜ್ಮತುಲ್ಲಾ ಒಮರ್ಜಾಯ್ 5 ಬೌಂಡರಿ, 6 ಸಿಕ್ಸರ್ ಸಹಾಯದಿಂದ ಅಜೇಯ 86 ರನ್‌ ಕಲೆ ಹಾಕಿದರು.

ಉತ್ತಮ ಆರಂಭ

ಸವಾಲಿನ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡದ ಆರಂಭ ಸೊಗಸಾಗಿತ್ತು. ತೆಂಬು ಬವುಮಾ (31) ಹಾಗೂ ಟೋನಿ ಡಿ ಜೋರ್ಜಿ (17) ಮೊದಲ ವಿಕೆಟ್‌ಗೆ 73 ರನ್‌ ಜೊತೆಯಾಟದ ಕಾಣಿಕೆ ನೀಡಿದರು. ಐಡೆನ್ ಮಾರ್ಕ್ರಾಮ್ (21) ದೊಡ್ಡ ಇನಿಂಗ್ಸ್‌ ಕಟ್ಟುವಲ್ಲಿ ವಿಫಲರಾದರು. ಉಳಿದಂತೆ ಯಾವೊಬ್ಬ ಬ್ಯಾಟರ್‌ ಡಬಲ್‌ ಡಿಜಿಟ್ ಮುಟ್ಟಲಿಲ್ಲ.

ರಶೀದ್‌ ಪಂಚ್

ಅಫ್ಘಾನಿಸ್ತಾನ ತಂಡದ ಪರ ರಶೀದ್‌ ಖಾನ್ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದರು. ಇವರು 9 ಓವರ್‌ಗಳಲ್ಲಿ 19 ರನ್‌ ನೀಡಿ 5 ವಿಕೆಟ್‌ ಪಡೆದರು. ನಂಗೆಯಲಿಯಾ ಖರೋಟೆ ಅವರು 26 ರನ್‌ ನೀಡಿ 4 ವಿಕೆಟ್‌ ಕಬಳಿಸಿದರು.

Story first published: Saturday, September 21, 2024, 8:53 [IST]
Other articles published on Sep 21, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+