Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

AUS vs AFG Champions Trophy 2025: ಆಸ್ಟ್ರೇಲಿಯಾ ಎದುರು ಇತಿಹಾಸ ಸೃಷ್ಟಿಸಲು ಅಫ್ಘಾನಿಸ್ತಾನ ಸಜ್ಜು

ಫೆಬ್ರವರಿ 28, ಶುಕ್ರವಾರ ಇಂದು ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಬಿ ಗುಂಪಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಎರಡೂ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಕಾದಡಲಿವೆ. ಯಾವ ತಂಡ ಗೆದ್ದರೂ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಸೆಮಿಫೈನಲ್‌ನಲ್ಲಿ ಈ ತಂಡ ಭಾರತ ಅಥವಾ ನ್ಯೂಜಿಲೆಂಡ್ ಅನ್ನು ಎದುರಿಸಲಿದೆ.

ಇಂಗ್ಲೆಂಡ್ ವಿರುದ್ಧದ ಅದ್ಭುತ ಗೆಲುವಿನಿಂದ ಅಫ್ಘಾನಿಸ್ತಾನ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಮೊದಲ ಬಾರಿಗೆ ಸೆಮಿಫೈನಲ್ ತಲುಪುವ ನಿರೀಕ್ಷೆಯಲ್ಲಿದೆ. ಕಳೆದ ವರ್ಷ ನಡೆದ 2024ರ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐತಿಹಾಸಿಕ ಗೆಲುವಿನಿಂದ ಅಫ್ಘಾನಿಸ್ತಾನ ತಂಡದ ಆತ್ಮವಿಶ್ವಾಸ ಹೆಚ್ಚಾಗಿದೆ. 2024ರ ಟಿ20 ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ತಂಡ ಐದು ಬಾರಿಯ ವಿಶ್ವ ಚಾಂಪಿಯನ್‌ಗಳ ವಿರುದ್ಧ ತಮ್ಮ ಮೊದಲ ಗೆಲುವು ದಾಖಲಿಸಿತ್ತು.

Afghanistan ready to create history against Australia in Champions Trophy 2025

ಅಫ್ಘಾನಿಸ್ತಾನದ ಬ್ಯಾಟಿಂಗ್ ವಿಭಾಗವನ್ನು ಯುವ ಬ್ಯಾಟರ್ ಇಬ್ರಾಹಿಂ ಜದ್ರಾನ್ ಮುನ್ನಡೆಸಲಿದ್ದಾರೆ. ಅವರು ಇಂಗ್ಲೆಂಡ್ ವಿರುದ್ಧ 177 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿ ದಾಖಲೆ ಸೃಷ್ಟಿಸಿದ್ದರು. ಇದು ಈಗ ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಎರಡನೇ ಅತ್ಯಧಿಕ ವೈಯಕ್ತಿಕ ಸ್ಕೋರ್ ಆಗಿದೆ. ರಹಮಾನುಲ್ಲಾ ಗುರ್ಬಾಜ್ ಮತ್ತು ಹಶ್ಮತುಲ್ಲಾ ಶಾಹಿದಿ ಕೂಡ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಸ್ಟಾರ್ ಬೌಲರ್ ರಶೀದ್ ಖಾನ್ ಸ್ಪಿನ್ ದಾಳಿಯನ್ನು ಮುನ್ನಡೆಸುತ್ತಿರುವುದರಿಂದ, ಆಸ್ಟ್ರೇಲಿಯಾದ ಮೇಲೆ ಒತ್ತಡ ಹೇರಲು ಅಗತ್ಯವಿರುವ ಎಲ್ಲಾ ತಂತ್ರಗಳನ್ನು ಅಫ್ಘಾನಿಸ್ತಾನ ಹೊಂದಿದೆ.

ಆಸ್ಟ್ರೇಲಿಯಾ ಬ್ಯಾಟಿಂಗ್‌ನಲ್ಲಿ ಟ್ರಾವಿಸ್ ಹೆಡ್, ನಾಯಕ ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್‌ರಂತಹ ಅತ್ಯುತ್ತಮ ಆಟಗಾರರನ್ನು ಹೊಂದಿದೆ. ವಿಶೇಷವಾಗಿ ಮ್ಯಾಕ್ಸ್‌ವೆಲ್ ಅಫ್ಘಾನಿಸ್ತಾನ ಬೌಲಿಂಗ್ ವಿಭಾಗವನ್ನು ಧ್ವಂಸ ಮಾಡಿ ಇತಿಹಾಸ ಸೃಷ್ಟಿಸಿದ್ದರು. 2023 ರ ಏಕದಿನ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಮ್ಯಾಕ್ಸ್‌ವೆಲ್ ತಮ್ಮ ಅತ್ಯುತ್ತಮ ಏಕದಿನ ಇನ್ನಿಂಗ್ಸ್‌ಗಳಲ್ಲಿ ಒಂದನ್ನು ಆಡಿದರು. ಮುಂಬೈನಲ್ಲಿ ಅವರ ಅದ್ಭುತ ದ್ವಿಶತಕ ಬಾರಿಸಿ ಆಸ್ಟ್ರೇಲಿಯಾವನ್ನು ಸೋಲಿನ ಅಂಚಿನಿಂದ ಪಾರು ಮಾಡಿದ್ದರು. ಈ ಮೂಲಕ ಆಸ್ಟ್ರೇಲಿಯಾ ಫೈನಲ್‌ನಲ್ಲಿ ಭಾರತ ತಂಡವನ್ನು ಸೋಲಿಸಿ ಮತ್ತೊಂದು ಐಸಿಸಿ ಪ್ರಶಸ್ತಿಯನ್ನು ಗೆದ್ದಿತ್ತು.

ಹವಾಮಾನ ಮುನ್ಸೂಚನೆ

ಶುಕ್ರವಾರ ಲಾಹೋರ್‌ನಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ಆದರೆ ದ್ವಿತೀಯಾರ್ಧದಲ್ಲಿ ಹವಾಮಾನವು ಉತ್ತಮಗೊಳ್ಳುವ ನಿರೀಕ್ಷೆಯಿದೆ. ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾದರೆ, ಆಸ್ಟ್ರೇಲಿಯಾ ಉತ್ತಮ ನಿವ್ವಳ ರನ್ ದರ ಹೊಂದಿರುವ ಕಾರಣ ಸೆಮಿಫೈನಲ್‌ಗೆ ಅರ್ಹತೆ ಪಡೆಯಲದೆ. ಮತ್ತೊಂದೆಡೆ, ಇಂಗ್ಲೆಂಡ್ ತಂಡ ದಕ್ಷಿಣ ಆಫ್ರಿಕಾವನ್ನು ದೊಡ್ಡ ಅಂತರದಿಂದ ಸೋಲಿಸದರೆ, ರನ್ ರೇಟ್ ಮೂಲಕ ಅಫ್ಘಾನಿಸ್ತಾನ ಆರ್ಹತೆ ಪಡೆಯುವ ನಿರೀಕ್ಷೆಯಿದೆ.

ಹೆಡ್‌ ಟು ಹೆಡ್‌

ಆಸ್ಟ್ರೇಲಿಯಾ ತಂಡವು ಇದುವರೆಗೆ ಅಫ್ಘಾನಿಸ್ತಾನ ವಿರುದ್ಧ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, ಪ್ರತಿಯೊಂದರಲ್ಲೂ ಜಯಗಳಿಸಿದೆ. 2023 ರ ಏಕದಿನ ವಿಶ್ವಕಪ್‌ನಲ್ಲಿ ಉಭಯ ತಂಡಗಳ ನಡುವಿನ ಇತ್ತೀಚಿನ ರೋಚಕ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ 128 ಎಸೆತಗಳಲ್ಲಿ ಅಜೇಯ 201 ರನ್‌ಗಳ ಅದ್ಭುತ ಇನ್ನಿಂಗ್ಸ್‌ನೊಂದಿಗೆ ಅಫ್ಘಾನಿಸ್ತಾನವನ್ನು ಸೋಲಿಸಿದ್ದರು.

ಸಂಭಾವ್ಯ ಪ್ಲೇಯಿಂಗ್-11

ಅಫ್ಘಾನಿಸ್ತಾನ: ಇಬ್ರಾಹಿಂ ಝದ್ರಾನ್, ರೆಹಮಾನ್ ಉಲ್ಲಾ ಗುರ್ಬಾಜ್ (ವಿಕೆಟ್‌ಕೀಪರ), ಸೇದಿಖುಲ್ಲಾ ಅಟಲ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಉಮರ್ಜೈ, ಮೊಹಮ್ಮದ್ ನಬಿ, ಗುಲ್ಬಾದಿನ್ ನಯಬ್, ರಶೀದ್ ಖಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ.

ಆಸ್ಟ್ರೇಲಿಯಾ: ಮ್ಯಾಥ್ಯೂ ಶಾರ್ಟ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬಾಟ್/ಸ್ಪೆನ್ಸರ್ ಜಾನ್ಸನ್, ಬೆನ್ ದ್ವಾರಶಿಸ್, ನಾಥನ್ ಎಲ್ಲಿಸ್, ಆಡಮ್ ಜಂಪಾ.

Story first published: Friday, February 28, 2025, 7:01 [IST]
Other articles published on Feb 28, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+