Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Retirement: ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಅಫ್ಘಾನಿಸ್ತಾನದ ಸ್ಟಾರ್ ಆಲ್‌ರೌಂಡರ್

ಕ್ರಿಕೆಟ್‌ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದು ಹೊರ ಬಿದ್ದಿದೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕ ಅಫ್ಘಾನಿಸ್ತಾನದ ಸ್ಟಾರ್ ಆಲ್‌ರೌಂಡರ್ ಏಕದಿನ ಕ್ರಿಕೆಟ್‌ಗೆ ಗುಡ್ ಬೈ ಹೇಳಲಿದ್ದಾರೆ. ಏಕದಿನ ಕ್ರಿಕೆಟ್‌ನಿಂದ ದೂರ ಸರಿಯುವ ಬಗ್ಗೆ ಸ್ಟಾರ್ ಆಟಗಾರ ಅಫ್ಘಾನಿಸ್ತಾನ ಮಂಡಳಿಗೆ ತಿಳಿಸಿದ್ದಾರೆ. ನಿವೃತ್ತಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ಈ ಆಟಗಾರ ಕ್ರಿಕೆಟ್‌ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಈ ಆಟಗಾರ ಬೇರೆ ಯಾರು ಅಲ್ಲ, ಅಫ್ಘಾನಿಸ್ತಾನದ ಸ್ಟಾರ್ ಆಲ್ ರೌಂಡರ್ ಮೊಹಮ್ಮದ್ ನಬಿ.

ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಬಳಿಕ ಮೊಹಮ್ಮದ್ ನಬಿ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ನಸೀಬ್ ಖಾನ್ ಶುಕ್ರವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಾಂಪಿಯನ್ಸ್ ಟ್ರೋಫಿ ನಂತರ ಮೊಹಮ್ಮದ್ ನಬಿ ಕೇವಲ ಟಿ20 ಕ್ರಿಕೆಟ್‌ನಲ್ಲಿ ಅಫ್ಘಾನಿಸ್ತಾನ ಪರ ಆಡಲಿದ್ದಾರೆ.

Afghanistan star all-rounder has announced his retirement from ODI cricket

ಕೆಲವು ತಿಂಗಳ ಹಿಂದೆ ನನಗೆ ಚಾಂಪಿಯನ್ಸ್ ಟ್ರೋಫಿ 2025ರ ನಂತರ ಮೊಹಮ್ಮದ್ ನಬಿ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಬಗ್ಗೆ ತಿಳಿಸಿದ್ದರು. ಅವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಅವರು ತಮ್ಮ ಟಿ20 ವೃತ್ತಿಜೀವನವನ್ನು ಮುಂದುವರಿಸುತ್ತಾರೆ ಎಂದುಕೊಂಡಿದ್ದೇನೆ ಎಂದು ನಸೀಬ್ ಖಾನ್ ಹೇಳಿದ್ದಾರೆ.

39 ವರ್ಷದ ಮೊಹಮ್ಮದ್ ನಬಿ ಅಫ್ಘಾನಿಸ್ತಾನದ ಏಕದಿನ ತಂಡ ಅನುಭವಿ ಆಟಗಾರರಲ್ಲಿ ಒಬ್ಬರು. ಮೊಹಮ್ಮದ್ ನಬಿ 2009 ರಲ್ಲಿ ಸ್ಕಾಟ್ಲೆಂಡ್ ವಿರುದ್ಧ ತಮ್ಮ ಚೊಚ್ಚಲ ಏಕದಿನ ಅರ್ಧಶತಕ ಗಳಿಸುವ ಮೂಲಕ ಗುರುತಿಸಿಕೊಂಡರು. ಮೊಹಮ್ಮದ್ ನಬಿ ಇದುವರೆಗೆ 165 ಏಕದಿನ ಪಂದ್ಯಗಳಲ್ಲಿ 3549 ರನ್ ಗಳಿಸಿದ್ದು, 171 ವಿಕೆಟ್ ಕೂಡ ಪಡೆದಿದ್ದಾರೆ. ಇತ್ತೀಚೆಗೆ, ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ಮೊಹಮ್ಮದ್ ನಬಿ 82 ರನ್ ಗಳನ್ನು ಬಾರಿಸಿ ಅಫ್ಘಾನಿಸ್ತಾನ ಗೆಲುವಿಗೆ ಕಾರಣವಾಗಿದ್ದರು.

ಐಪಿಎಲ್‌ನಲ್ಲಿಯೂ ಮಿಂಚು

ಅಫ್ಘಾನಿಸ್ತಾನ ತಂಡದ ಹಿರಿಯ ಆಲ್‌ರೌಂಡರ್ ಮೊಹಮ್ಮದ್ ನಬಿ 2019 ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಮೊಹಮ್ಮದ್ ನಬಿ ಅಫ್ಘಾನಿಸ್ತಾನ ಪರ 3 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದಲ್ಲದೇ ಐಪಿಎಲ್‌ನಲ್ಲಿಯೂ 24 ಪಂದ್ಯಗಳನ್ನು ಆಡಿದ್ದಾರೆ. ಮೊಹಮ್ಮದ್ ನಬಿ ಐಪಿಎಲ್‌ನಲ್ಲಿ 143.33 ಸ್ಟ್ರೈಕ್ ರೇಟ್‌ನಲ್ಲಿ 215 ರನ್ ಗಳಿಸಿದ್ದಾರೆ. ಬೌಲಿಂಗ್‌ನಲ್ಲಿಯೂ 15 ವಿಕೆಟ್‌ಗಳನ್ನು ಪಡೆದಿದ್ದಾರೆ. ಮೊಹಮ್ಮದ್ ನಬಿ ತಮ್ಮ ಅನುಭವ ಮತ್ತು ಆಲ್‌ರೌಂಡ್ ಆಟದಿಂದ ಅಫ್ಘಾನಿಸ್ತಾನ ಕ್ರಿಕೆಟ್ ತಂಡವನ್ನು ಹಲವು ಸಂದರ್ಭಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದಾರೆ.

Story first published: Friday, November 8, 2024, 16:50 [IST]
Other articles published on Nov 8, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+