For Quick Alerts
ALLOW NOTIFICATIONS  
For Daily Alerts
 

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಬೆನ್ನಲ್ಲೇ ಭಾರತಕ್ಕೆ ಅಫ್ಘಾನಿಸ್ತಾನ ಪ್ರವಾಸ: ವರದಿ

ಈ ಬಾರಿಯ ಐಪಿಎಲ್ ಟೂರ್ನಿ ಮುಕ್ತಾಯವಾಗುತ್ತಿದ್ದಂತೆಯೇ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನು ಆಡಲಿದೆ. ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಈ ಸೆಣೆಸಾಟ ಸಾಕಷ್ಟು ಕುತೂಹಲ ಮೂಡಿಸಿದೆ. ಲಂಡನ್‌ನ ಓವಲ್‌ನಲ್ಲಿ ಈ ಫೈನಲ್ ಪಂದ್ಯ ನಡೆಯಲಿದ್ದು ಇದು ಭಾರತ ತಂಡಕ್ಕೆ ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವಾಗಿದೆ. ಮೊದಲ ಆವೃತ್ತಿಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಸೆಣೆಸಾಡಿ ರನ್ನರ್‌ಅಪ್ ಸ್ಥಾನವನ್ನು ಪಡೆದುಕೊಂಡಿತ್ತು.

ಈ ಪ್ರತಿಷ್ಠಿತ ಫೈನಲ್ ಪಂದ್ಯ ಮುಕ್ತಾಯವಾದ ಬಳಿಕ ಭಾರತ ತವರಿನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಸರಣಿಯನ್ನಾಡುವ ಸಾಧ್ಯತೆಗಳು ಗೋಚರಿಸುತ್ತಿದೆ. ಜೂನ್ ತಿಂಗಳಿನಲ್ಲಿ ಅಫ್ಘಾನಿಸ್ತಾನ ತಂಡ ಭಾರತಕ್ಕೆ ಚುಟುಕು ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿದೆ. ಈ ವಿಚಾರವಾಗಿ ಎರಡು ದೇಶಗಳ ಕ್ರಿಕೆಟ್ ಮಂಡಳಿಗಳು ಮಾತುಕತೆಯನ್ನು ನಡೆಸಿದ್ದು ಬಿಸಿಸಿಐ ಅಥವಾ ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್(ಎಸಿಬಿ) ಶೀಘ್ರದಲ್ಲಿ ಅಧಿಕೃತ ಘೋಷಣೆ ಸಾಧ್ಯತೆಯಿದೆ.

Afghanistan team set to tour India after WTC Final match in June; Official announcement soon

ಈ ವಿಚಾರವಾಗಿ ಹೆಚ್ಚಿನ ಮಾಹಿತಿಯಿರುವ ಬಿಸಿಸಿಐನ ಅಧಿಕಾರಿಯೊಬ್ಬರು ಟೈಮ್ಸ್ ಆಫ್ ಇಂಡಿಯಾಗೆ ಮಾಹಿತಿ ನೀಡಿದ್ದಾರೆ. "ಹೌದು ಜೂನ್ ತಿಂಗಳಿನಲ್ಲಿ ಅಫ್ಘಾನಿಸ್ಥಾನ ತಂಡ ಭಾರತಕ್ಕೆ ಚುಟುಕು ಪ್ರವಾಸವನ್ನು ಕೈಗೊಳ್ಳಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಬಳಿಕ ಈ ಸರಣಿ ಆಯೋಜನೆಯಾಗಲಿದೆ" ಎಂದು ಮೂಲಗಳು ಮಾಹಿತಿ ಬಹಿರಂಗಪಡಿಸಿದೆ.

ಅಫ್ಘಾನಿಸ್ತಾನ ತಂಡ ಇದಕ್ಕೂ ಮುನ್ನ 2018ರಲ್ಲಿ ಭಾರತ ಪ್ರವಾಸವನ್ನು ಕೈಗೊಂಡಿತ್ತು. ಭಾರತದ ವಿರುದ್ಧ ಒಂದು ಟೆಸ್ಟ್ ಪಂದ್ಯವನ್ನು ಆಡಿದ್ದ ಅಫ್ಘಾನಿಸ್ತಾನ ಆ ಪಂದ್ಯದಲ್ಲಿ ಕೇವಲ ಎರಡು ದಿನದಲ್ಲಿ ಪಂದ್ಯವನ್ನು ಸೋತಿತ್ತು. ಭಾರತ ಇನ್ನಿಂಗ್ಸ್ ಹಾಗೂ 262 ರನ್‌ಗಳ ಅಂತರದಿಂದ ಈ ಪಂದ್ಯವನ್ನು ಗೆದ್ದುಕೊಂಡಿತ್ತು.

ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು ಭಾರತದ ಎಲ್ಲಾ ಕ್ರಿಕೆಟಿಗರು ಹಾಗೂ ಅಫ್ಘಾನಿಸ್ತಾನದ ಕೆಲ ಸ್ಟಾರ್ ಆಟಗಾರರು ಈ ಪ್ರತಿಷ್ಠಿತ ಟೂರ್ನಿಯಲ್ಲಿ ಸಕ್ರಿಯವಾಗಿದ್ದಾರೆ. ರಶೀದ್ ಖಾನ್ ಸೇರಿದಂತೆ ಕೆಲ ಆಟಗಾರರು ಈ ಬಾರಿಯ ಐಪಿಎಲ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ. ಈ ಆಟಗಾರರು ಭಾರತದ ವಾತಾವರಣವನ್ನು ಚೆನ್ನಾಗಿ ಬಲ್ಲವರಾಗಿರುವ ಕಾರಣ ಭಾರತ ವಿರುದ್ಧದ ಸರಣಿಯಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಕುತೂಹಕ ಮೂಡಿಸಿದೆ.

Story first published: Tuesday, April 11, 2023, 17:51 [IST]
Other articles published on Apr 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+