
ಪಾಕಿಸ್ತಾನ ಹಾಗೂ ಅಪ್ಘಾನಿಸ್ತಾನ ತಂಡಗಳ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯ ಶಾರ್ಜಾದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪಾಕಿಸ್ತಾನ ತಂಡ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಎರಡು ತಂಡಗಳು ಕೂಡ ತಲಾ ಎರಡೆರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿವೆ. ಪಾಕಿಸ್ತಾನ ತಂಡವನ್ನು ಶದಬ್ ಖಾನ್ ಮುನ್ನಡೆಸುತ್ತಿದ್ದರೆ ಅಫ್ಘಾನಿಸ್ತಾನ ತಂಡದ ನಾಯಕತ್ವವನ್ನು ರಶೀದ್ ಖಾನ್ ವಹಿಸಿಕೊಂಡಿದ್ದಾರೆ.
Live ಸ್ಕೋರ್ ಹೀಗಿದೆ:
ಇನ್ನು ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಅಫ್ಘಾನಿಸ್ತಾನ ಪಾಕಿಸ್ತಾನ ತಂಡವನ್ನು ಭರ್ಜರಿಯಾಗಿ ಮಣಿಸಿದ್ದು ಸರಿಯನ್ನು ಈಗಾಗಲೇ ತನ್ನ ವಶಕ್ಕೆ ಪಡೆದುಕೊಂಡಿದೆ. ಇದೀಗ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ವೈಟ್‌ವಾಶ್ ಮೂಲಕ ವಶಕ್ಕೆ ಪಡೆಯುವ ವಿಶ್ವಾಸದಲ್ಲಿದೆ ಅಫ್ಘಾನಿಸ್ತಾನ ತಂಡ. ಈ ಸರಣಿಯ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಭರ್ಜರಿ 6 ವಿಕೆಟ್‌ಗಳ ಅಂತರದಿಂದ ಗೆಲುವು ಕಂಡಿದ್ದರೆ ಎರಡನೇ ಪಂದ್ಯದಲ್ಲಿ 7 ವಿಕೆಟ್‌ಗಳಾಂತರದಿಂದ ಗೆಲುವು ಸಾಧಿಸಿತ್ತು.
ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಉಸ್ಮಾನ್ ಘನಿ, ಇಬ್ರಾಹಿಂ ಜದ್ರಾನ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಸೇದಿಕುಲ್ಲಾ ಅಟಲ್, ರಶೀದ್ ಖಾನ್ (ನಾಯಕ), ಮುಜೀಬ್ ಉರ್ ರೆಹಮಾನ್, ಫಜಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್
ಬೆಂಚ್: ಅಜ್ಮತುಲ್ಲಾ ಒಮರ್ಜಾಯ್, ನವೀನ್-ಉಲ್-ಹಕ್, ಗುಲ್ಬದಿನ್ ನೈಬ್, ಅಫ್ಸರ್ ಝಜೈ, ಶರಫುದ್ದೀನ್ ಅಶ್ರಫ್, ನೂರ್ ಅಹ್ಮದ್
ಪಾಕಿಸ್ತಾನ ಆಡುವ ಬಳಗ: ಸೈಮ್ ಅಯೂಬ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಅಬ್ದುಲ್ಲಾ ಶಫೀಕ್, ತಯ್ಯಬ್ ತಾಹಿರ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್ (ನಾಯಕ), ಇಮಾದ್ ವಾಸಿಂ, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಜಮಾನ್ ಖಾನ್, ಇಹ್ಸಾನುಲ್ಲಾ
ಬೆಂಚ್: ಅಜಂ ಖಾನ್, ನಸೀಮ್ ಶಾ, ಶಾನ್ ಮಸೂದ್, ಫಹೀಂ ಅಶ್ರಫ್