ENG vs SL: 10 ವರ್ಷಗಳ ನಂತರ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಇತಿಹಾಸ
ಇತ್ತೀಚಿನ ದಿನಗಳಲ್ಲಿ ಶ್ರೀಲಂಕಾ ತಂಡದ ಅದೃಷ್ಟದ ಬಾಗಿಲು ತೆರೆದಿದೆ. ವಿಶ್ವದ ಬಲಿಷ್ಠ ತಂಡಗಳಿಗೆ
ಶ್ರೀಲಂಕಾ ಶಾಕ್ ನೀಡುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಭಾರತ ವಿರುದ್ಧ ಏಕದಿನ ಸರಣಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಈಗ ತವರಿನಲ್ಲಿ ಇಂಗ್ಲೆಂಡ್ ತಂಡಕ್ಕೆ ಶ್ರೀಲಂಕಾ ಖೆಡ್ಡಾ ತೋಡಿದೆ. ಉಭಯ ತಂಡಗಳ ನಡುವಿನ ಕೊನೆಯ ಟೆಸ್ಟ್ ಪಂದ್ಯ ಓವಲ್‌ನಲ್ಲಿ ನಡೆಯುತ್ತಿತ್ತು. ಈ ಪಂದ್ಯದಲ್ಲಿ ಶ್ರೀಲಂಕಾ 8 ವಿಕೆಟ್‌ಗಳಿಂದ ಗೆಲುವು ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ.

ಓವಲ್‌ನಲ್ಲಿ ಶ್ರೀಲಂಕಾ ಇತಿಹಾಸ
ಶ್ರೀಲಂಕಾ ಮತ್ತು ಇಂಗ್ಲೆಂಡ್ ನಡುವೆ ಓವಲ್‌ನಲ್ಲಿ ಇದುವರೆಗೆ ಕೇವಲ ಎರಡು ಟೆಸ್ಟ್ ಪಂದ್ಯಗಳು ಮಾತ್ರ ನಡೆದಿವೆ. ಶ್ರೀಲಂಕಾ ಎರಡೂ ಪಂದ್ಯಗಳನ್ನು ಗೆದ್ದಿದೆ. 1998ರಲ್ಲಿ ಕೊನೆಯ ಬಾರಿಗೆ ಶ್ರೀಲಂಕಾ ಈ ಮೈದಾನದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು.
ಇದೀಗ ಶ್ರೀಲಂಕಾ 10 ವರ್ಷಗಳ ನಂತರ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಗೆದ್ದಿದೆ. ಇದಕ್ಕೂ ಮುನ್ನ 1998, 2006 ಮತ್ತು 2014ರಲ್ಲಿ ಶ್ರೀಲಂಕಾ ತಂಡ ಇಂಗ್ಲೆಂಡ್ ವಿರುದ್ಧ ಟೆಸ್ಟ್‌ನಲ್ಲಿ ಸೋಲು ಕಂಡಿತ್ತು. ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಗೆಲುವಿನೊಂದಿಗೆ ಶ್ರೀಲಂಕಾ ಇತಿಹಾಸ ನಿರ್ಮಿಸಿದೆ.
ಇಂಗ್ಲೆಂಡ್‌ನ ಕನಸು ಭಗ್ನ
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಅದ್ಭುತವಾಗಿ ಆರಂಭಿಸಿತ್ತು. ಸತತ ಎರಡು ಟೆಸ್ಟ್ ಪಂದ್ಯಗಳನ್ನು ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡ ಶ್ರೀಲಂಕಾ ವಿರುದ್ಧ ವೈಟ್ ವಾಶ್ ಸಾಧನೆ ಮಾಡುವ ಕನಸು ಕಾಣುತ್ತಿತ್ತು. ಆದರೆ ಇಂಗ್ಲೆಂಡ್ ಕನಸು ನನಸಾಗಲಿಲ್ಲ.
2004ರಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ತಂಡವು ಶ್ರೀಲಂಕವನ್ನು ಕ್ಲೀನ್ ಸ್ವೀಪ್ ಮಾಡಿತ್ತು. ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ 5 ವಿಕೆಟ್‌ಗಳ ಜಯ ಸಾಧಿಸಿದರೆ, ಎರಡನೇ ಟೆಸ್ಟ್‌ನಲ್ಲಿ 190 ರನ್‌ಗಳ ಜಯ ಸಾಧಿಸಿತ್ತು. ಇಂಗ್ಲೆಂಡ್ ಸರಣಿ ಗೆದ್ದರೂ ಶ್ರೀಲಂಕಾದಿಂದ ತೀವ್ರ ಮುಖಭಂಗ ಅನುಭವಿಸಿದೆ.
ಗೆಲುವಿನ ಹೀರೋ ಪಾತುಮ್ ನಿಸ್ಸಾಂಕ
ಪಾತುಮ್ ನಿಸ್ಸಾಂಕ ಶ್ರೀಲಂಕಾದ ಗೆಲುವಿನ ಹೀರೋ ಆಗಿ ಮಿಂಚಿದರು. ಈ ಟೆಸ್ಟ್ ಪಂದ್ಯದಲ್ಲಿ ನಿಸ್ಸಾಂಕ ಒನ್ ಮ್ಯಾನ್ ಆರ್ಮಿ ಎಂದು ಸಾಬೀತಾಪಡಿಸಿದರು. ಅವರು ತಮ್ಮ ಏಕದಿನ ಕ್ರಿಕೆಟ್ ಶೈಲಿ ಆಟವನ್ನು ಪ್ರದರ್ಶಿಸಿ ಅತ್ಯುತ್ತಮ ಶತಕವನ್ನು ಗಳಿಸಿದರು. ಅವರು 124 ಎಸೆತಗಳಲ್ಲಿ 127 ರನ್ ಕಲೆ ಹಾಕಿದರು. ಈ ಮೂಲಕ0 ಶ್ರೀಲಂಕಾ 219 ರನ್‌ಗಳ ಗುರಿಯನ್ನು ಸಾಧಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications