ಬ್ಯಾಟಿಂಗ್ ಕೋಚ್ ಬಳಿಕ ಶ್ರೀಲಂಕಾದ ಡೇಟಾ ವಿಶ್ಲೇಷಕರಿಗೂ ಕೋವಿಡ್-19

ಕೊಲಂಬೋ: ಶ್ರೀಲಂಕಾ ಕ್ರಿಕೆಟ್ ತಂಡದ ದತ್ತಾಂಶ ವಿಶ್ಲೇಷಕ ಜಿಟಿ ನಿರೋಶನ್ ಅವರಿಗೆ ಕೋವಿಡ್-19 ಸೋಂಕು ತಗುಲಿದೆ. ಭಾರತ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೂ ಮುನ್ನವೇ ನಿರೋಶನ್ ಕೊರೊನಾ ಸೋಂಕಿಗೆ ತುತ್ತಾಗಿರುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಶುಕ್ರವಾರ (ಜುಲೈ 9) ತಿಳಿಸಿದೆ.
ಶ್ರೀಲಂಕಾ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಗ್ರ್ಯಾಂಟ್ ಫ್ಲವರ್‌ಗೆ ಕೋವಿಡ್-19 ಪಾಸಿಟಿವ್ ಬಂದಿತ್ತು. ಇದಕ್ಕೂ ಮುನ್ನ ಶ್ರೀಲಂಕಾ ತಂಡ ಇಂಗ್ಲೆಂಡ್ ಪ್ರವಾಸ ಸರಣಿಯಲ್ಲಿ ಪಾಲ್ಗೊಂಡಿತ್ತು. ಆ ವೇಳೆ ಇಂಗ್ಲೆಂಡ್‌ನ ಅನೇಕ ಆಟಗಾರರು ಸೋಂಕಿಗೆ ತುತ್ತಾಗಿದ್ದರು. ಈಗ ಶ್ರೀಲಂಕಾ ತಂಡದಲ್ಲೂ ಒಂದೊಂದೇ ಪ್ರಕರಣಗಳು ಕಾಣಿಸಲಾರಂಭಿಸಿದೆ.
ಸದ್ಯ ಭಾರತ ತಂಡ ಶ್ರೀಲಂಕಾದಲ್ಲಿದೆ. ಜುಲೈ 13ರಿಂದ ಜುಲೈ 25ರ ವರೆಗೆ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಮೂರು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ. ಇದಕ್ಕೂ ಮುನ್ನವೇ ಶ್ರೀಲಂಕಾ ತಂಡಕ್ಕೆ ಕೋವಿಡ್ ಭೀತಿ ಶುರುವಾಗಿದೆ. ಇತ್ತ ಭಾರತಕ್ಕೂ ಸೋಂಕಿನ ಭೀತಿ ಕಾಡಲಾರಂಭಿಸಿದೆ.
"ಶ್ರೀಲಂಕಾ ರಾಷ್ಟ್ರೀಯ ತಂಡದ ಡೇಟಾ ಎನಾಲಿಸ್ಟ್ ಜಿಟಿ ನಿರೋಶನ್‌ಗೆ ಕೋವಿಡ್-19 ಪಾಸಿಟಿವ್ ಬಂದಿದೆ," ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ. ರಾಷ್ಟ್ರೀಯ ಆಟಗಾರರು, ಕೋಚ್‌ಗಳು ಮತ್ತು ಸಿಬ್ಬಂದಿಗಳಿಗೆ ನಡೆಸಲಾದ ಕೋವಿಡ್ ಪರೀಕ್ಷೆಯ ವೇಳೆ ನಿರೋಶನ್‌ಗೆ ಸೋಂಕಿರುವುದು ಪತ್ತೆಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications