ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಸೂರ್ಯಕುಮಾರ್ ಯಾದವ್ ಅನುಮಾನ!

After IPL 2022 Suryakumar Yadav is set to miss t20 series against South Africa

ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಕಳಪೆ ಪ್ರದರ್ಶನ ನೀಡಿದ್ದರೂ ತಂಡದ ಪರವಾಗಿ ಉತ್ತಮ ಪ್ರದರ್ಶನ ನೀಡಿ ಮಿಂಚಿದ ಆಟಗಾರ ಸೂರ್ಯಕುಮಾರ್ ಯಾದವ್. ಆದರೆ ಟೂರ್ನಿಯ ಅಂತಿಮ ಹಂತಕ್ಕೆ ಬಂದಿರುವ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್ ಗಾಯಗೊಂಡಿದ್ದು ಉಳಿದ ಪಂದ್ಯಗಳಿಗೆ ಅಲಭ್ಯವಾಗಿದ್ದಾರೆ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಸೂರ್ಯಕುಮಾರ್ ಯಾದವ್ ಅನುಮಾನ ಎನ್ನಲಾಗಿದೆ.

ಮುಂಬೈ ಇಂಡಿಯನ್ಸ್ ಪರವಾಗಿ ಮಧ್ಯಮ ಕ್ರಮಾಂಕದಲ್ಲಿ ಮಿಂಚಿರುವ ಸೂರ್ಯಕುಮಾರ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಇದೇ ಕಾರಣದಿಂದಾಗು ಮುಂದಿನ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟಿ20 ಸರಣಿಗೂ ಯಾದವ್ ಅಲಭ್ಯವಾಗುವ ಸಾಧ್ಯತೆಯಿದೆ. ವಿಶ್ರಾಂತಿ ಅಗತ್ಯವಾಗಿರುವ ಕಾರಣ ಅವರು ಆಯ್ಕೆಗೆ ಲಭ್ಯವಿರುವುದು ಅನುಮಾನವಾಗಿದೆ.

ಕೆಕೆಆರ್ ವಿರುದ್ಧ ಸೋಲು: ಬ್ಯಾಟರ್‌ಗಳ ಪ್ರದರ್ಶನವೇ ಸೋಲಿಗೆ ಕಾರಣ ಎಂದ ರೋಹಿತ್ ಶರ್ಮಾಕೆಕೆಆರ್ ವಿರುದ್ಧ ಸೋಲು: ಬ್ಯಾಟರ್‌ಗಳ ಪ್ರದರ್ಶನವೇ ಸೋಲಿಗೆ ಕಾರಣ ಎಂದ ರೋಹಿತ್ ಶರ್ಮಾ

ಈ ವಿಚಾರವಾಗಿ ಆಯ್ಕೆ ಸಮಿತಿಯ ಸದಸ್ಯರೊಬ್ಬರು ಇನ್‌ಸೈಡ್ ಸ್ಪೋರ್ಟ್‌ಗೆ ಮಾಹಿತಿಯನ್ನು ನೀಡಿದ್ದಾರೆ. "ಅವರ ಗಾಯದ ತೀವ್ರತೆ ಸ್ವಲ್ಪ ಹೆಚ್ಚಿನದಾಗಿದೆ. ಹೀಗಾಗಿ ಅವರಿಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದೆ. ಈ ಕ್ಷಣದಲ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಲಭ್ಯವಾಗುವ ಸಾಧ್ಯತೆ ಇಲ್ಲ. ಅಲ್ಲದೆ ನಾವು ಅವರ ಮರಳುವಿಕೆಗಾಗಿ ಆತುರ ಪಡುತ್ತಿಲ್ಲ. ಯಾಕೆಂದರೆ ಅದು ಮತ್ತಷ್ಟು ಉಲ್ಬಣಿಸುವ ಸಾಧ್ಯತೆಗಳು ಇರುತ್ತದೆ" ಎಂದು ಆಯ್ಕೆ ಸಮಿತಿಯ ಸದಸ್ಯರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮೇ 6ರಂದು ನಡೆದ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಗಾಯಕ್ಕೆ ತುತ್ತಾದರು. ಅದಾದ ಬಳಿಕ ಐಪಿಎಲ್‌ನ ಉಳಿದ ಎಲ್ಲಾ ಪಂದ್ಯಗಳಿಂದಲೂ ಅವರು ಹೊರ ಬಿದ್ದಿದ್ದಾರೆ. ಇದು ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತಷ್ಟು ಹಿನ್ನಡೆಯುಂಟು ಮಾಡಿದೆ.

ಮಾಹಿತಿಯ ಪ್ರಕಾರ ಸೂರ್ಯಕುಮಾರ್ ಯಾದವ್ ಇನ್ನು ಕೂಡ ಮುಂಬೈ ಇಂಡಿಯನ್ಸ್ ತಂಡದ ವೈದ್ಯಕೀಯ ತಂಡದ ನಿಗಾದಲ್ಲಿದ್ದಾರೆ. ಮುಂದಿನ ವಾರ ಅವರು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ರಿಹ್ಯಾಬಿಲಿಟೇಶನ್‌ಗೆ ಸೇರಿಕೊಳ್ಳುವ ನಿರೀಕ್ಷೆಯಿದೆ.

"ಐಪಿಎಲ್ 2022ರ ಅತಿ ಕೆಟ್ಟ ರೀಟೆನ್ಶನ್ ಇದು": ಮುಂಬೈ ಇಂಡಿಯನ್ಸ್ ಸೋಲಿನ ಬಳಿಕ ಅಭಿಮಾನಿಗಳ ಆಕ್ರೋಶ

ಈ ಬಾರಿಯ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲಿನ ಮೇಲೆ ಸೋಲು ಅನುಭವಿಸಿದೆ. ಆಡಿರುವ 11 ಪಂದ್ಯಗಳ ಪೈಕಿ ರೋಹಿತ್ ಶರ್ಮಾ ನೇತೃತ್ವದ ಎಂಐ 9 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಎರಡು ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿದೆ. ಹೀಗಾಗಿ ಟೂರ್ನಿಯಿಂದ ಈಗಾಗಲೇ ಎಂಐ ಹೊರಬಿದ್ದಿದೆ.

ಮುಂಬೈ ಇಂಡಿಯನ್ಸ್ ಸ್ಕ್ವಾಡ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್, ಟ್ರಿಸ್ಟನ್ ಸ್ಟಬ್ಸ್

Story first published: Wednesday, May 11, 2022, 9:22 [IST]
Other articles published on May 11, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X