ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ಸಾಧ್ಯತೆ: ಇಂಗ್ಲೆಂಡ್ ತಂಡದ ಪಾಕಿಸ್ತಾನ ಪ್ರವಾಸವೂ ಅನುಮಾನ

After New Zealand cancellation series England T20 tour of Pakistan in doubt

ಪಾಕಿಸ್ತಾನ ಪ್ರವಾಸ ಕೈಗೊಂಡ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಸರಣಿಯ ಆರಂಭಕ್ಕೆ ಕೆಲವೇ ಕ್ಷಣಗಳಿರುವಾಗ ಭದ್ರತಾ ಕಾರಣಗಳಿಂದಾಗಿ ಸರಣಿಯಿಂದ ಹಿಂದಕ್ಕೆ ಸರಿದಿದೆ. ಹೀಗಾಗಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿ ಸೀಮಿತ ಓವರ್‌ಗಳ ಸರಣಿ ಮುಂದೂಡಿಕೆಯಾಗಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಮತ್ತೊಂದು ಕಹಿ ಸುದ್ದಿ ಬರುವ ಸಾಧ್ಯತೆಯಿದೆ. ಮುಂದಿನ ತಿಂಗಳು ಇಂಗ್ಲೆಂಡ್ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಬೇಕಿದ್ದು ಸೀಮಿತ ಓವರ್‌ಗಳ ಸರಣಿಯಲ್ಲಿ ಭಾಗಿಯಾಗಬೇಕಿತ್ತು. ಆದರೆ ಇಂಗ್ಲೆಂಡ್ ಕ್ರಿಕೆಟ್ ತಂಡ ಕೂಡ ಪಾಕಿಸ್ತಾನ ಪ್ರವಾಸವನ್ನು ಕೈಬಿಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಐಪಿಎಲ್: ನಾಯಕ ಯಾರು ಎಂಬ ಗೊಂದಲಕ್ಕೆ ತೆರೆ ಎಳೆದ ಡೆಲ್ಲಿ ಕ್ಯಾಪಿಟಲ್ಸ್ಐಪಿಎಲ್: ನಾಯಕ ಯಾರು ಎಂಬ ಗೊಂದಲಕ್ಕೆ ತೆರೆ ಎಳೆದ ಡೆಲ್ಲಿ ಕ್ಯಾಪಿಟಲ್ಸ್

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂದು ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮೊದಲ ಪಂದ್ಯದಲ್ಲಿ ಆಡಲು ಇಳಿಯಬೇಕಾಗಿತ್ತು. ಆದರೆ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಗೆ ತುರ್ತು ಭದ್ರತಾ ಸಲಹೆಗಳನ್ನು ಸ್ವೀಕರಿಸಿದ ಬಳಿಕ ಕ್ರಿಕೆಟ್ ತಂಡ ಇಂದು ಹೋಟೆಲ್ ಬಿಟ್ಟು ಹೊರಗೆ ಬರಲಿಲ್ಲ. ಯಾವುದೇ ಪ್ರೇಕ್ಷಕರಿಗೂ ಕೂಡ ಕ್ರೀಡಾಂಗಣಕ್ಕೆ ಅವಕಾಶವನ್ನು ನೀಡಲಿಲ್ಲ.

ಮೊದಲ ಏಕದಿನ ಪಂದ್ಯ ಅಹರ್ನಿಶಿಯಾಗಿ ನಡೆಯಲಿದ್ದ ಕಾರಣ 2:30ರ ವೇಳೆಗೆ ಪಂದ್ಯದ ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು ಆದರೆ ಈ ಸಂದರ್ಭದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ಭದ್ರತಾ ಕಾರಣಗಳಿಂದಾಗಿ ತವರಿಗೆ ವಾಪಾಸಾಗಲು ನಿರ್ಧರಿಸಿರುವುದನ್ನು ಖಚಿತಪಡಿಸಲಾಯಿತು. ಈ ಮೂಲಕ ಒಂದೇ ಒಂದು ಎಸೆತಗಳು ಇಲ್ಲದೆ ಸರಣಿಯನ್ನು ಮುಂದೂಡಲಾಗಿದೆ.

ಟೀಮ್ ಇಂಡಿಯಾಗೆ ಈ ಆಟಗಾರರು ನೂತನ ನಾಯಕ ಮತ್ತು ಉಪನಾಯಕರಾಗಬೇಕೆಂದು ಸೂಚಿಸಿದ ಕೊಹ್ಲಿಟೀಮ್ ಇಂಡಿಯಾಗೆ ಈ ಆಟಗಾರರು ನೂತನ ನಾಯಕ ಮತ್ತು ಉಪನಾಯಕರಾಗಬೇಕೆಂದು ಸೂಚಿಸಿದ ಕೊಹ್ಲಿ

ನ್ಯೂಜಿಲೆಂಡ್ ಕ್ರಿಕೆಟ್ ತಂಡ ದಿಢೀರ್ ಆಗಿ ತೆಗೆದುಕೊಂಡ ಈ ನಿರ್ಧಾರದಿಂದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಂಗೆಟ್ಟು ಹೋಗಿದೆ. ಈ ಮಧ್ಯೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಪಾಕಿಸ್ತಾನ ಪ್ರವಾಸದ ಬಗ್ಗೆಯೂ ಅನುಮಾನಗಳು ಎದ್ದಿದೆ. ಮುಂದಿನ ತಿಂಗಳು ವಿಶ್ವಕಪ್‌ನ ಆರಂಭಕ್ಕೂ ಮುನ್ನ ಪಾಕಿಸ್ತಾನಕ್ಕೆ ಇಂಗ್ಲೆಂಡ್ ತಂಡ ಪ್ರವಾಸ ಕೈಗೊಂಡು ಎರಡು ಪಂದ್ಯಗಳ ಚುಟುಕು ಟಿ20 ಸರಣಿಯಲ್ಲಿ ಭಾಗಿಯಾಗಬೇಕಿತ್ತು. ಅಕ್ಟೋಬರ್ 14-15ರಂದು ಈ ಪಂದ್ಯಗಳನ್ನು ನಿಗದಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ಮಹಿಳಾ ತಂಡ ಕೂಡ ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವ ನಿರ್ಧಾರ ಮಾಡಲಾಗಿದೆ. ಆದರೆ ಈ ಸರಣಿಯೂ ನಡೆಯುವುದು ಈಗ ಅನುಮಾನವಾಗಿದೆ.

ಇನ್ನು ನ್ಯೂಜಿಲೆಂಡ್ ಸರಣಿಯಿಂದ ಹಿಂದಕ್ಕೆ ಸರಿಯಲು ನಿರ್ಧಾರ ಕೈಗೊಂಡ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭದ್ರತಾ ವಿಚಾರವಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ. "ಮೂರ್ಖರನ್ನಾಗಿಸಲು ಸಾಧ್ಯವಿಲ್ಲದಂತಾ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ" ಎಂದು ಟ್ವೀಟ್ ಮಾಡಿ ತಿಳಿಸಿದೆ.

ಟಿ20 ವಿಶ್ವಕಪ್‌ ಸೋತ್ರೆ ಏಕದಿನ ನಾಯಕತ್ವವೂ ತ್ಯಜಿಸುತ್ತಾರಾ ವಿರಾಟ್ ಕೊಹ್ಲಿ!?ಟಿ20 ವಿಶ್ವಕಪ್‌ ಸೋತ್ರೆ ಏಕದಿನ ನಾಯಕತ್ವವೂ ತ್ಯಜಿಸುತ್ತಾರಾ ವಿರಾಟ್ ಕೊಹ್ಲಿ!?

"ಪಾಕಿಸ್ತಾನದ ಪ್ರಧಾನ ಮಂತ್ರಿ ಖುದ್ದಾಗಿ ನ್ಯೂಜಿಲೆಂಡ್‌ನ ಪ್ರಧಾನಿ ಜೊತೆಗೆ ಮಾತನಾಡಿದ್ದು ವಿಶ್ವದ ಶ್ರೇಷ್ಠ ಗುಪ್ತಚರ ಸಂಸ್ಥೆಗಳಲ್ಲಿ ನಮ್ಮದು ಕೂಡ ಒಂದಾಗಿದ್ದು ಪ್ರವಾಸಿ ನ್ಯೂಜಿಲೆಂಡ್ ತಂಡಕ್ಕೆ ಯಾವುದೇ ರೀತಿಯ ಭದ್ರತಾ ಬೆದರಿಕೆಗಳು ನ್ಯೂಜಿಲೆಂಡ್ ತಂಡಕ್ಕೆ ಇಲ್ಲ" ಎಂದು ತಿಳಿಸಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ಟ್ವೀಟ್‌ನಲ್ಲಿ ಮಾಹಿತಿ ನೀಡಿದೆ.

ಯಾರಾಗ್ತಾರೆ ಟೀಮ್ ಇಂಡಿಯಾ ಮುಂದಿನ ಉಪ ನಾಯಕ?; ರೇಸ್‌ನಲ್ಲಿದ್ದಾರೆ ಈ ಮೂವರು ಆಟಗಾರರುಯಾರಾಗ್ತಾರೆ ಟೀಮ್ ಇಂಡಿಯಾ ಮುಂದಿನ ಉಪ ನಾಯಕ?; ರೇಸ್‌ನಲ್ಲಿದ್ದಾರೆ ಈ ಮೂವರು ಆಟಗಾರರು

ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಡೇವಿಡ್ ವೈಟ್ ನ್ಯೂಜಿಲೆಂಡ್ ಕ್ರಿಕೆಟ್‌ನ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಭದ್ರತಾ ವಿಚಾರವಾಗಿ ತಾನು ಸ್ವೀಕರಿಸಿದ ಸಲಹೆಯ ಕಾರಣದಿಂದಾಗಿ ಈ ಪ್ರವಾಸವನ್ನು ಮುಂದುವರಿಸಲು ಸಾಧ್ಯವೇ ಇಲ್ಲ ಎಂದು ಅವರು ವಿವರಿಸಿದ್ದಾರೆ. "ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಇದು ಹಿನ್ನಡೆಯಾಗುತ್ತದೆ ನನಗೆ ಗೊತ್ತಿದೆ . ನಮಗೆ ಅವರು ಅದ್ಭುತವಾದ ಆತಿಥ್ಯವನ್ನು ನೀಡಿದ್ದಾರೆ. ಆದರೆ ನಮ್ಮ ಆಟಗಾರರ ಸುರಕ್ಷತೆ ನಮಗೆ ಪ್ರಾಥಮಿಕ ಆದ್ಯತೆಯಾಗಿದೆ. ಈಗ ನಮಗಿರುವ ಜವಾಬ್ಧಾರಿಯುತ ಆಯ್ಕೆಯೆಂದರೆ ಇದೊಂದೇ ಎಂದು ನಾನು ಭಾವಿಸಿದ್ದೇನೆ" ಎಂದು ಡೇವಿಡ್ ವೈಟ್ ವಿವರಿಸಿದ್ದಾರೆ.

Story first published: Friday, September 17, 2021, 19:01 [IST]
Other articles published on Sep 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X