T20 World Cup 2026: ಮಾರ್ಕ್ರಾಮ್‌ಗೆ ನಾಯಕತ್ವ: ರಬಾಡಗೆ ಸ್ಥಾನ
ವೆಸ್ಟ್ ಇಂಡೀಸ್ ಹಾಗೂ ಅಮೆರಿಕದ ಆತಿಥ್ಯದಲ್ಲಿ ನಡೆದಿದ್ದ ಟಿ20 ವಿಶ್ವಕಪ್ 2024ರಲ್ಲಿ ರನ್ನರ್ ಅಪ್ ಸ್ಥಾನವನ್ನು ಪಡೆದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು, ಮುಂಬರುವ ಟಿ20 ವಿಶ್ವಕಪ್‌ಗೆ ಹರಿಣಿಗಳ ತಂಡವನ್ನು ಪ್ರಕಟಿಸಲಾಗಿದೆ. ಈ ಮೆಗಾ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಭರವಸೆಯ ಆಟಗಾರ ಐಡೆನ್ ಮಾರ್ಕ್ರಾಮ್ ಮುನ್ನಡೆಸಲಿದ್ದಾರೆ. ಹಲವು ಅನುಭವಿಗಳು ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.
ಸ್ಟಾರ್ ವೇಗದ ಬೌಲರ್ ಕಗಿಸೋ ರಬಾಡ ಸಂಪೂರ್ಣ ಫಿಟ್ ಆಗಿದ್ದು ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾದರೆ, ರಿಯಾಲ್ ರಿಕಲ್ಟನ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕಗಿಸೊ ರಬಾಡ ಬಹುದಿನಗಳಿಂದ ಪಕ್ಕೆಲುಬಿನ ಗಾಯದಿಂದ ಬಳಲುತ್ತಿದ್ದರು. ಇವರು ಸಂಪೂರ್ಣ ಫಿಟ್ ಆಗಿದ್ದು ತಂಡದಲ್ಲಿ ಇವರನ್ನು ಸೇರಿಸಿಕೊಳ್ಳಲಾಗಿದೆ. ರಬಾಡ ಅವರೊಂದಿಗೆ ವೇಗದ ಬೌಲಿಂಗ್ ವಿಭಾಗವನ್ನು ಅನ್ರಿಚ್ ನಾರ್ಟ್ಜೆ, ಮಾರ್ಕೊ ಜೆನ್ಸನ್, ಕಾರ್ಬಿನ್ ಬಾಷ್, ಲುಂಗಿ ಎನ್‌ಗಿಡಿ ಮತ್ತು ಕ್ವೆನಾ ಎಂಫಕಾ ಸ್ಥಾನ ಉಳಿಸಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾದ ತಂಡದಲ್ಲಿ ಸ್ಟಾರ್ ಬ್ಯಾಟರ್‌ಗಳು ಸ್ಥಾನ ಪಡೆದಿದ್ದಾರೆ. ಇತ್ತೀಚಿಗೆ ನಿವೃತ್ತಿಯಿಂದ ಯು-ಟರ್ನ್ ಹೊಡೆದ ಕ್ವಿಂಟನ್ ಡಿಕಾಕ್ ಅವರಿಗೂ ತಂಡದಲ್ಲಿ ಸ್ಥಾನ ಲಭಿಸಿದೆ. ಯುವ ಆಟಗಾರ ಡೆವಾಲ್ಡ್ ಬ್ರೂಯಿಸ್, ಟೋನಿ ಡಿ ಜೋರ್ಜಿ, ಜೇಸನ್ ಸ್ಮಿತ್ ಮತ್ತು ಆಲ್‌ರೌಂಡರ್‌ಗಳಾದ ಜಾರ್ಜ್ ಲಿಂಡೆ ಮತ್ತು ಡೊನೊವನ್ ಫೆರೇರಾ, ಅನುಭವಿ ಡೇವಿಡ್ ಮಿಲ್ಲರ್ ಸಹ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರೀಜಾ ಹೆಂಡ್ರಿಕ್ಸ್, ಒಟ್ನೀಲ್ ಬಾರ್ಟ್‌ಮನ್, ಜೆರಾಲ್ಡ್ ಕೋಟ್ಜೀ, ಬ್ಜೋರ್ನ್ ಫೋರ್ಟುಯಿನ್ ಅವರಂತ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿಲ್ಲ.
ದಕ್ಷಿಣ ಆಫ್ರಿಕಾಕ್ಕೆ ನಿರಾಸೆ
ದಕ್ಷಿಣ ಆಫ್ರಿಕಾ ತಂಡ ಕಳೆದ ಬಾರಿಯ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 170 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಒಂದು ಹಂತದಲ್ಲಿ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಭಾರತ ತಂಡದ ಬಿಗುವಿನ ದಾಳಿಯ ನೆರವಿನಿಂದ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲಿ ಸೋಲು ಕಂಡಿತು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಸೇರಿಸಿ ನಿರಾಸೆ ಅನುಭವಿಸಿತ್ತು.

ಟಿ20 ವಿಶ್ವಕಪ್‌ಗಾಗಿ ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೂಯಿಸ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೋನಿ ಡಿ ಜೋರ್ಜಿ, ಡೊನೊವನ್ ಫೆರೇರಾ, ಮಾರ್ಕೊ ಜಾನ್ಸೆನ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಕ್ವೆನಾ ಎಂಫಕಾ, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ಜೇಸನ್ ಸ್ಮಿತ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications