ಕೆಟ್ಟ ಫಾರ್ಮ್‌ನ ಆ ಮೂವರಿಗಾಗಿ ಪಟ್ಟುಹಿಡಿದ ಕೊಹ್ಲಿ; ದ.ಆಫ್ರಿಕಾ ಪ್ರವಾಸಕ್ಕೆ ತಂಡ ಪ್ರಕಟಿಸುವಲ್ಲಿ ವಿಳಂಬ

ಇತ್ತೀಚೆಗಷ್ಟೇ ಮುಕ್ತಾಯವಾದ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಮತ್ತು ಟೆಸ್ಟ್ ಸರಣಿಗಳಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸುವುದರ ಮೂಲಕ ಯಶಸ್ಸಿನ ಹಾದಿಗೆ ಮರಳಿದೆ. ಹೌದು, ಈ ಬಾರಿ ನಡೆದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದ ನ್ಯೂಜಿಲೆಂಡ್ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಪ್ರವಾಸವನ್ನು ಕೈಗೊಂಡು 3 ಪಂದ್ಯಗಳ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಮೊದಲು ಸೆಣಸಾಟ ನಡೆಸಿತು. ಈ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ಎಲ್ಲಾ ಪಂದ್ಯಗಳಲ್ಲಿಯೂ ನ್ಯೂಜಿಲೆಂಡ್ ತಂಡಕ್ಕೆ ಸೋಲುಣಿಸುವುದರ ಮೂಲಕ ವೈಟ್ ವಾಷ್ ಬಳಿಯಿತು. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಲ್ಲಿ ಟೀಂ ಇಂಡಿಯಾ ಸರಣಿಯನ್ನು ಕೈವಶ ಮಾಡಿಕೊಂಡಿತು.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 372 ರನ್‌ಗಳ ಬೃಹತ್ ಗೆಲುವನ್ನು ದಾಖಲಿಸುವುದರ ಮೂಲಕ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಭಾರತ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು 3 ಪಂದ್ಯಗಳ ಟೆಸ್ಟ್ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಟ ನಡೆಸಲಿದೆ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಜಯ ಸಾಧಿಸುವುದರ ಮೂಲಕ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಟೀಮ್ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿ ಅಗ್ರಸ್ಥಾನವನ್ನು ಉಳಿಸಿಕೊಳ್ಳುವ ಯೋಜನೆಯಲ್ಲಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಉತ್ತಮ ಫಾರ್ಮ್ ಹೊಂದಿರುವ ಆಟಗಾರರನ್ನು ಆಯ್ಕೆ ಮಾಡುವತ್ತ ಆಯ್ಕೆ ಸಮಿತಿ ಚಿತ್ತ ನೆಟ್ಟಿದೆ. ಆದರೆ, ವಿರಾಟ್ ಕೊಹ್ಲಿ ಮತ್ತು ಕೋಚ್ ರಾಹುಲ್ ದ್ರಾವಿಡ್ ಇಬ್ಬರೂ ಸಹ ಪ್ರಸ್ತುತ ಕಳಪೆ ಫಾರ್ಮ್ ಹೊಂದಿರುವ ಮೂವರು ಆಟಗಾರರಿಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿಯೇ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟಿಸುವಲ್ಲಿ ವಿಳಂಬವಾಗುತ್ತಿದೆ ಎಂಬ ಮಾಹಿತಿ ಇದೆ. ಅಷ್ಟಕ್ಕೂ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ವಿರಾಟ್ ಕೊಹ್ಲಿ ಬೆಂಬಲಿಸುತ್ತಿರುವ ಆ ಮೂವರು ಆಟಗಾರರು ಯಾರು ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಕಳಪೆ ಫಾರ್ಮ್‌ನಲ್ಲಿರುವ ಆ ಮೂವರ ಬೆಂಬಲಕ್ಕೆ ನಿಂತ ಕೋಚ್ ಮತ್ತು ನಾಯಕ
ಸದ್ಯ ಟೆಸ್ಟ್ ಕ್ರಿಕೆಟ್‍ನಲ್ಲಿ ಭಾರತ ತಂಡದ ಪ್ರಮುಖ ಆಟಗಾರರಾದ ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ ಮತ್ತು ಇಶಾಂತ್ ಶರ್ಮಾ ಸಾಲು ಸಾಲು ಕಳಪೆ ಪ್ರದರ್ಶನಗಳನ್ನು ನೀಡುತ್ತಾ ಬಂದಿದ್ದಾರೆ. ಈ ಮೂವರು ಸಹ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂಬ ವಿಶ್ವಾಸದಲ್ಲಿರುವ ವಿರಾಟ್ ಕೊಹ್ಲಿ ಆ ಮೂವರಿಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಮಂಗಳವಾರವೇ ಪ್ರಕಟವಾಗಬೇಕಿತ್ತು ಭಾರತ ತಂಡ
ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಮೊದಲಿಗೆ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಡಿಸೆಂಬರ್ 26ರಂದು ಇತ್ತಂಡಗಳ ನಡುವೆ ಮೊದಲನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಮಂಗಳವಾರವೇ ಭಾರತ ತಂಡ ಪ್ರಕಟವಾಗಬೇಕಿತ್ತು. ಅತ್ತ ದಕ್ಷಿಣ ಆಫ್ರಿಕಾ ಕ್ರಿಕೆಟ್ ಬೋರ್ಡ್ ಮಂಗಳವಾರವೇ ಭಾರತ ವಿರುದ್ಧದ ಟೆಸ್ಟ್ ಸರಣಿಗೆ 21 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿತ್ತು. ಆದರೆ ಭಾರತ ತಂಡದ ಆಟಗಾರರ ಕುರಿತಾಗಿ ಆಯ್ಕೆಗಾರರು ಮತ್ತು ವಿರಾಟ್ ಕೊಹ್ಲಿ ಹಾಗೂ ರಾಹುಲ್ ದ್ರಾವಿಡ್ ನಡುವೆ ಚರ್ಚೆ ನಡೆದಿರುವ ಕಾರಣದಿಂದಾಗಿ ಭಾರತ ತಂಡ ಪ್ರಕಟಿಸುವಲ್ಲಿ ವಿಳಂಬವಾಗಿದೆ ಎನ್ನಲಾಗುತ್ತಿದೆ.

ಭಾರತ vs ದಕ್ಷಿಣ ಆಫ್ರಿಕಾ 3 ಪಂದ್ಯಗಳ ಟೆಸ್ಟ್ ಸರಣಿಯ ವೇಳಾಪಟ್ಟಿ
ಮೊದಲ ಟೆಸ್ಟ್: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್ ಟೌನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications