ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ತಂಡದಲ್ಲಿ ಆತ ಇನ್ನೂ ಇರುವುದು ಆತನ ಅದೃಷ್ಟ ಎಂದ ಗೌತಮ್ ಗಂಭೀರ್

Ajinkya Rahane is pretty fortunate that he’s still got place in Team India says Gautam Gambhir

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ತಂಡ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಮೊದಲಿಗೆ ಇತ್ತಂಡಗಳ ನಡುವೆ ಟಿ ಟ್ವೆಂಟಿ ಸರಣಿ ನಡೆದಿದ್ದು ಟೀಮ್ ಇಂಡಿಯಾ 3-0 ಅಂತರದಲ್ಲಿ ಸರಣಿಯಲ್ಲಿ ಜಯ ಸಾಧಿಸುವುದರ ಮೂಲಕ ವೈಟ್ ವಾಷ್ ಮಾಡಿದೆ.

ಅಂತಿಮವಾಗಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 73 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತು. ಹೀಗೆ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟ್ವೆಂಟಿ ಪಂದ್ಯಗಳ ಸರಣಿಯಲ್ಲಿ ಭಾರತ ವೈಟ್ ವಾಶ್ ಸಾಧನೆ ಮಾಡಿ ಇದೀಗ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.

ಐಪಿಎಲ್ 2022: ಎಬಿ ಡಿವಿಲಿಯರ್ಸ್ ಸ್ಥಾನ ತುಂಬಬಲ್ಲ 5 ಆಟಗಾರರುಐಪಿಎಲ್ 2022: ಎಬಿ ಡಿವಿಲಿಯರ್ಸ್ ಸ್ಥಾನ ತುಂಬಬಲ್ಲ 5 ಆಟಗಾರರು

ನವೆಂಬರ್‌ 25ರಂದು ಕಾನ್ಪುರದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಲಿದ್ದು ಈಗಾಗಲೇ ಇತ್ತಂಡಗಳ ಆಟಗಾರರು ಅಭ್ಯಾಸಗಳನ್ನು ಆರಂಭಿಸಿದ್ದಾರೆ. ಈ ಪಂದ್ಯದಲ್ಲಿ ಭಾರತದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಭ್ ಪಂತ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಶಾರ್ದೂಲ್ ಠಾಕೂರ್ ವಿಶ್ರಾಂತಿಗಾಗಿ ಹೊರಗುಳಿದಿದ್ದಾರೆ. ಹೀಗಾಗಿ ಈ ಆಟಗಾರರ ಸ್ಥಾನವನ್ನು ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಯಾರು ತುಂಬಲಿದ್ದಾರೆ ಎಂಬ ಪ್ರಶ್ನೆ ಇದೀಗ ಎದ್ದಿದೆ. ಇದರ ನಡುವೆಯೇ ತಂಡದಲ್ಲಿ ಸ್ಥಾನ ದೊರೆತಿರುವ ಆಟಗಾರರ ಕುರಿತು ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮಾತನಾಡಿದ್ದು ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

ಭಾರತ ತಂಡದಲ್ಲಿ ಅಜಿಂಕ್ಯಾ ರಹಾನೆ ಇನ್ನೂ ಸ್ಥಾನ ಪಡೆದುಕೊಂಡಿರುವುದು ಆತನ ಅದೃಷ್ಟ

ಭಾರತ ತಂಡದಲ್ಲಿ ಅಜಿಂಕ್ಯಾ ರಹಾನೆ ಇನ್ನೂ ಸ್ಥಾನ ಪಡೆದುಕೊಂಡಿರುವುದು ಆತನ ಅದೃಷ್ಟ

"ಭಾರತದ ಪರ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬೇಕು. ನಾಲ್ಕನೇ ಕ್ರಮಾಂಕದಲ್ಲಿ ಶುಭ್ ಮನ್ ಗಿಲ್ ಆಡಲಿದ್ದಾರೆ. ಹಾಗೂ ತಂಡದಲ್ಲಿ ಅಜಿಂಕ್ಯ ರಹಾನೆ ಈಗಲೂ ಸ್ಥಾನ ಪಡೆದುಕೊಂಡಿರುವುದು ಆತನ ಅದೃಷ್ಟ. ಈ ಅವಕಾಶವನ್ನು ಆತ ಸದುಪಯೋಗಪಡಿಸಿಕೊಳ್ಳಬೇಕು" ಎಂದು ಗೌತಮ್ ಗಂಭೀರ್ ಹೇಳಿಕೆ ನೀಡಿದ್ದಾರೆ. ಈ ಮೂಲಕ ಅಜಿಂಕ್ಯಾ ರಹಾನೆ ಕಳಪೆ ಫಾರ್ಮ್‌ನಿಂದ ಆಚೆ ಬರುವುದಕ್ಕೆ ಇದು ಸರಿಯಾದ ಅವಕಾಶ ಎಂದು ಗೌತಮ್ ಗಂಭೀರ್ ಎಚ್ಚರಿಸಿದ್ದಾರೆ.

ಕಳಪೆ ಫಾರ್ಮ್‌ನಲ್ಲಿರುವ ಅಜಿಂಕ್ಯಾ ರಹಾನೆ

ಕಳಪೆ ಫಾರ್ಮ್‌ನಲ್ಲಿರುವ ಅಜಿಂಕ್ಯಾ ರಹಾನೆ

ಅಜಿಂಕ್ಯ ರಹಾನೆ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದರೂ ಸಹ ಓರ್ವ ಆಟಗಾರನಾಗಿ ಹಲವಾರು ತಿಂಗಳುಗಳಿಂದ ಕಳಪೆ ಫಾರ್ಮ್ ಎದುರಿಸುತ್ತಿದ್ದಾರೆ. ಕಳೆದ ಬಾರಿಯ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಆಡಲು ಭಾರತ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದ್ದಾಗ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯ ನೆಲದಲ್ಲಿಯೇ ಆಸ್ಟ್ರೇಲಿಯಕ್ಕೆ ಅಜಿಂಕ್ಯ ರಹಾನೆ ನಾಯಕತ್ವದ ಟೀಮ್ ಇಂಡಿಯಾ ಮಣ್ಣು ಮುಕ್ಕಿಸಿತ್ತು. ಈ ಸರಣಿಯಲ್ಲಿ ಅಜಿಂಕ್ಯಾ ರಹಾನೆ ತಮ್ಮ ಕೊನೆಯ ಟೆಸ್ಟ್ ಶತಕವನ್ನು ಬಾರಿಸಿದ್ದರು. ಇದಾದ ನಂತರ ಕೇವಲ ಒಂದೇ ಒಂದು ಅರ್ಧಶತಕವನ್ನು ಬಾರಿಸಿರುವ ಅಜಿಂಕ್ಯ ರಹಾನೆ ಗಮನ ಸೆಳೆಯುವಂತಹ ಪ್ರದರ್ಶನ ನೀಡಲಾಗದೇ ಕಳಪೆ ಫಾರ್ಮ್‌ ಎದುರಿಸುತ್ತಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವ ವಿಶ್ವಾಸ ವ್ತಕ್ತಪಡಿಸಿದ ರಹಾನೆ

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವ ವಿಶ್ವಾಸ ವ್ತಕ್ತಪಡಿಸಿದ ರಹಾನೆ

ಇತ್ತೀಚೆಗಷ್ಟೇ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟಿ ಟ್ವೆಂಟಿ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ವೈಟ್ ವಾಷ್ ಸಾಧನೆ ಮಾಡಿದ ನಂತರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ ಅಜಿಂಕ್ಯ ರಹಾನೆ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ವಿಜಯಕ್ಕೆ ಶುಭ ಕೋರಿದರು. ಇದರ ಜೊತೆಗೆ ಇನ್ನೂ ಗೆಲುವುಗಳು ಟೀಮ್ ಇಂಡಿಯಾಗೆ ಬರಲಿದೆ ಎಂದು ಅಜಿಂಕ್ಯಾ ರಹಾನೆ ಬರೆದುಕೊಂಡಿದ್ದರು. ಈ ಮೂಲಕ ಮುಂಬರಲಿರುವ ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ತಮ್ಮ ನಾಯಕತ್ವದ ಭಾರತ ತಂಡ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಅಜಿಂಕ್ಯ ರಹಾನೆ ವ್ಯಕ್ತಪಡಿಸಿದ್ದರು.

ಆಡಮ್ ಝಂಪಾ ತಮ್ಮ ಹ್ಯಾಟ್ರಿಕ್ ತಪ್ಪಿಸಿದ್ದಕ್ಕೆ ಕಾಲೆಳದದ್ದು ಹೀಗೆ | Oneindia Kannada

Story first published: Tuesday, November 23, 2021, 10:17 [IST]
Other articles published on Nov 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X