India top scorers in WTC: ದಾಖಲೆ ಪಟ್ಟಿಯಲ್ಲಿ ಕೊಹ್ಲಿ, ರೋಹಿತ್ ಹಿಂದಿಕ್ಕಿದ ಅಜಿಂಕ್ಯ ರಹಾನೆ!

ನವದೆಹಲಿ: ದಾಖಲೆ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹೆಸರು ಇಲ್ಲದಿದ್ದರೆ ಆ ದಾಖಲೆ ಪಟ್ಟಿ ನಿಮಗೆ ಅಚ್ಚರಿ ಹುಟ್ಟಿಸಬಹುದು. ಯಾಕೆಂದರೆ ರೋಹಿತ್ ಮತ್ತು ಕೊಹ್ಲಿ ಅಷ್ಟರ ಮಟ್ಟಿಗೆ ಉತ್ತಮ ಬ್ಯಾಟ್ಸ್‌ಮನ್‌ಗಳು. ಆದರೆ ಐಸಿಸಿ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಧಿಕ ರನ್ ಪಟ್ಟಿಯಲ್ಲಿ ಅಜಿಂಕ್ಯ ರಹಾನೆ ಇಬ್ಬರನ್ನೂ ಹಿಂದಿಕ್ಕಿದ್ದಾರೆ.

ವಿಶ್ವಕಪ್‌ ವಿಜೇತ ಆಸ್ಟ್ರೇಲಿಯಾ ತಂಡದ ಆಟಗಾರ ಈಗ ಕಾರ್ಪೆಂಟರ್!

ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಉದ್ಘಾಟನಾ ಆವೃತ್ತಿಯಯಲ್ಲಿ ತಂಡ ಗೆಲ್ಲಲು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಗಮನಾರ್ಹ ಕೊಡುಗೆ ನೀಡಿದ್ದರಾದರೂ ಚಾಂಪಿಯನ್‌ಶಿಪ್‌ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯರಲ್ಲಿ ಅಜಿಂಕ್ಯ ರಹಾನೆ ಮೊದಲ ಸ್ಥಾನದಲ್ಲಿದ್ದಾರೆ.

ವರ್ಲ್ಡ್‌ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್

ವರ್ಲ್ಡ್‌ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್

ಜೂನ್ 3ಕ್ಕೆ ಇಂಗ್ಲೆಂಡ್‌ಗೆ ಹೋಗಲಿರುವ ಟೀಮ್ ಇಂಡಿಯಾ ಅಲ್ಲಿ ನ್ಯೂಜಿಲೆಂಡ್ ವಿರುದ್ಧ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯ ಆಡಲಿದೆ. ಜೂನ್ 18-22ರ ವರೆಗೆ ಈ ಪಂದ್ಯ ನಡೆಯಲಿದೆ. ಅದಾಗಿ ಇಂಗ್ಲೆಂಡ್-ಭಾರತ ನಡುವಣ ಐದು ಪಂದ್ಯಗಳ ಟೆಸ್ಟ್‌ ಸರಣಿ ನಡೆಯಲಿದೆ.

ಅಜಿಂಕ್ಯ ರಹಾನೆ ಮೊದಲಿಗ

ಅಜಿಂಕ್ಯ ರಹಾನೆ ಮೊದಲಿಗ

ಐಸಿಸಿ ಟಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯರಲ್ಲಿ ಅಜಿಂಕ್ಯ ರಹಾನೆ ಈಗ ಮೊದಲ ಸ್ಥಾನದಲ್ಲಿದ್ದಾರೆ. 17 ಪಂದ್ಯಗಳಲ್ಲಿ ರಹಾನೆ 1095 ರನ್ ಗಳಿಸಿದ್ದಾರೆ. ಇದರಲ್ಲಿ ಪ್ರಮುಖ ಮೂರು ಶತಕಗಳು ಮತ್ತು 6 ಅರ್ಧ ಶತಕಗಳು ಸೇರಿವೆ. ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ 1000 ರನ್ ಬಾರಿಸಿದ ಇಬ್ಬರೇ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ರಹಾನೆ.

ಲ್ಯಬುಶೇನ್ ಮೀರಿಸೋಕ್ಕಾಗಲ್ಲ

ಲ್ಯಬುಶೇನ್ ಮೀರಿಸೋಕ್ಕಾಗಲ್ಲ

ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಆಯ್ಕೆಯಾಗಿಲ್ಲ. ಆದರೂ ಆಸ್ಟ್ರೇಲಿಯಾದ ಮಾರ್ನಸ್ ಲ್ಯಬುಶೇನ್ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಅತ್ಯಧಿಕ ರನ್ ಗಳಿಸಿದವರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಲೀಗ್‌ ಹಂತದ ಪಂದ್ಯಗಳಲ್ಲಿ ಲ್ಯಬುಶೇನ್ 1675 ರನ್ ಗಳಿಸಿದ್ದರು.

ಕೊಹ್ಲಿ, ರೋಹಿತ್‌ಗೆ ಯಾವ ಸ್ಥಾನ?

ಕೊಹ್ಲಿ, ರೋಹಿತ್‌ಗೆ ಯಾವ ಸ್ಥಾನ?

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕ್ರಮವಾಗಿ 2ನೇ ಮತ್ತು 3ನೇ ಸ್ಥಾನ ಪಡೆದುಕೊಂಡಿದ್ದಾರೆ. ರೋಹಿತ್ 1030 ರನ್ ಗಳಿಸಿದ್ದರೆ, ಕೊಹ್ಲಿ 877 ರನ್ ಗಳಿಸಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Tuesday, June 1, 2021, 11:38 [IST]
Other articles published on Jun 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X