Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN: ಬಾಂಗ್ಲಾದೇಶ ಟೆಸ್ಟ್ ಸರಣಿಗೆ ಭಾರತ ತಂಡದ ಮ್ಯಾಚ್ ವಿನ್ನರ್ ವಾಪಸ್?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾವನ್ನು ಇನ್ನೂ ಪ್ರಕಟಿಸಿಲ್ಲ.

ಈ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಅಜಿಂಕ್ಯ ರಹಾನೆ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಶತಕ ಬಾರಿಸುವ ಮೂಲಕ ತಂಡಕ್ಕೆ ಮರಳುವ ದೊಡ್ಡ ಸಂದೇಶ ಕೊಟ್ಟಿದ್ದಾರೆ.
ಇತ್ತೀಚೆಗೆ ಅವರು ಏಕದಿನ ಕಪ್‌ನಲ್ಲಿ ಲೀಸೆಸ್ಟರ್‌ಶೈರ್ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಎರಡು ಪಂದ್ಯದಲ್ಲಿ ಕಾರ್ಡಿಫ್‌ನಲ್ಲಿ ಗ್ಲಾಮೊರ್ಗನ್ ವಿರುದ್ಧ ಲೀಸೆಸ್ಟರ್‌ಶೈರ್‌ ಪರ ಎರಡನೇ ಇನ್ನಿಂಗ್ಸ್‌ನಲ್ಲಿ 102 ರನ್ ಗಳಿಸಿದ್ದಾರೆ.

Ajinkya Rahane likely to return to Bangladesh Test series

ರಹಾನೆ ಶತಕ

ಅಜಿಂಕ್ಯ ರಹಾನೆ ಅವರು ತಮ್ಮ 40ನೇ ಪ್ರಥಮ ದರ್ಜೆ ಶತಕವನ್ನು ಪೂರೈಸಿದ್ದಾರೆ. ಕೌಂಟಿ ಚಾಂಪಿಯನ್‌ಶಿಪ್‌ನ ಗ್ಲಾಮೊರ್ಗನ್ ವಿರುದ್ಧದ ಪಂದ್ಯದಲ್ಲಿ 192 ಎಸೆತಗಳಲ್ಲಿ 102 ರನ್ ಗಳಿಸಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ 13 ಬೌಂಡರಿ ಮತ್ತು 1 ಸಿಕ್ಸರ್‌ ಅನ್ನು ಬಾರಿಸಿದ್ದಾರೆ.

ನಾಲ್ಕನೇ ವಿಕೆಟ್‌ಗೆ ಆಸ್ಟ್ರೇಲಿಯಾದ ಪೀಟರ್ ಹ್ಯಾಂಡ್ಸ್‌ಕಾಂಬ್ ಅವರೊಂದಿಗೆ ಜೊತೆಯಾದ ರಹಾನೆ 183 ರನ್‌ಗಳ ಮಹತ್ವದ ಜೊತೆಯಾಟವಾಡಿದ್ದಾರೆ. ಈ ಶತಕದೊಂದಿಗೆ ರಹಾನೆ ಕೂಡ ಟೀಮ್ ಇಂಡಿಯಾಗೆ ಮರಳುವ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಟೀಮ್ ಇಂಡಿಯಾಕ್ಕೆ ವಾಪಸ್?

ಮುಂಬರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಇನ್ನೂ ಪ್ರಕಟಿಸಲಾಗಿಲ್ಲ. ಈ ನಿಟ್ಟಿನಲ್ಲಿ ರಹಾನೆ ಅವರ ಈ ಶತಕ ಅತ್ಯಂತ ಸರಿಯಾದ ಸಮಯದಲ್ಲಿ ಬಂದಿದೆ. ಕಳೆದ ವರ್ಷ ಜುಲೈನಿಂದ ರಹಾನೆ ಭಾರತ ಟೆಸ್ಟ್ ತಂಡದ ಭಾಗವಾಗಿಲ್ಲ. ಅವರು ಜುಲೈ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು.

ಅಂದಿನಿಂದ ಅವರನ್ನು ನಿರಂತರವಾಗಿ ರಹಾನೆ ಅವರನ್ನು ತಂಡದಿಂದ ಕೈಬಿಡಲಾಗುತ್ತಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ಬಾರ್ಡರ್ -ಗವಾಸ್ಕರ್ ಟ್ರೋಫಿಗೆ ರಹಾನೆ ಭಾರತ ತಂಡದಲ್ಲಿ ಸ್ಥಾನ ಪಡೆಯುವುದರ ಮೇಲೆ ಕಣ್ಣಿಟ್ಟಿದ್ದಾರೆ.

ರಹಾನೆ ಇದುವರೆಗೆ ಆಡಿರುವ 85 ಟೆಸ್ಟ್ ಪಂದ್ಯಗಳಲ್ಲಿ 5077 ರನ್ ಗಳಿಸಿದ್ದಾರೆ. ಅವರು 188 ರನ್‌ಗಳ ಅತ್ಯುತ್ತಮ ಸ್ಕೋರ್‌ನೊಂದಿಗೆ ಒಟ್ಟು 12 ಶತಕಗಳನ್ನು ಹೊಡೆದಿದ್ದಾರೆ.

Story first published: Sunday, September 1, 2024, 23:02 [IST]
Other articles published on Sep 1, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+