For Quick Alerts
ALLOW NOTIFICATIONS  
For Daily Alerts
 

ಭಾರತ ತಂಡದ ಕ್ರಿಕೆಟರ್ ಅಜಿಂಕ್ಯ ರಹಾನೆ ತಂದೆ ಬಂಧನ

ಕೊಲ್ಹಾಪುರ (ಮಹಾರಾಷ್ಟ್ರ), ಡಿಸೆಂಬರ್ 15: ಭಾರತ ಕ್ರಿಕೆಟ್ ತಂಡದ ಆಟಗಾರ ಅಜಿಂಕ್ಯ ರಹಾನೆ ಅವರ ತಂದೆ ಮಧುಕರ್ ಬಾಬುರಾವ್ ರಹಾನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ಮಧುಕರ್ (54) ಅವರು ಚಲಾಯಿಸುತ್ತಿದ್ದ ಕಾರು ಮಹಾರಾಷ್ಟ್ರದ ಕೊಲ್ಹಾಪುರದ ಕಾಗಲ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಹಿಳೆಗೆ ಡಿಕ್ಕಿ ಹೊಡಿದಿದೆ. ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರು ಚಲಾಯಿಸುತ್ತಿದ್ದ ರಹಾನೆ ಅವರ ತಂದೆ ಮಧುಕರ್ ಅವರನ್ನು ವಶಕ್ಕೆ ಪಡೆದರು.

Ajinkya Rahane’s father arrested after car runs over elderly woman in Kolhapur

ಮಧುಕರ್ ಅವರು ಹುಂಡೈ ಐ20 ಕಾರಿನಲ್ಲಿ ಹೋಗುತ್ತಿದ್ದ ವೇಳೆ ಕಾಗಲ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಆಶಾತಾಯ್ ಕಾಂಬ್ಳೆ ಎಂಬ ಮಹಿಳೆಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಶಾತಾಯ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಶಾತಾಯ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಘಟನೆಗೆ ಸಂಬಂಧಿಸಿದಂತೆ ಕೊಲ್ಹಾಪುರ ಪೊಲೀಸರು ಮಧುಕರ್ ಅವರನ್ನು ವಶಕ್ಕೆ ಪಡೆದು ಐಪಿಸಿ ಸೆಕ್ಷನ್ 304ಎ, 337, 338, 279 ಹಾಗೂ 184ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+