ಐಪಿಎಲ್ 2020: ಈ ಆವೃತ್ತಿಯ ಎರಡು ಅತ್ಯುತ್ತಮ ತಂಡಗಳನ್ನು ಹೆಸರಿಸಿದ ಅಜಿತ್ ಅಗರ್ಕರ್

13ನೇ ಆವೃತ್ತಿಯ ಐಪಿಎಲ್‌ನ ಲೀಗ್ ಹಂತದ ಮೊದಲಾರ್ಧದ ಪಂದ್ಯಗಳು ಮುಕ್ತಾಯವಾಗಿದೆ. ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಈ ಬಾರಿಯ ಟೂರ್ನಿಯಲ್ಲಿ ಅಭಿಮಾನಿಗಳು ಅದ್ಭುತ ಮನರಂಜನೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಹಂತದಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಈ ಬಾರಿಯ ಐಪಿಎಲ್‌ನ ಎರಡು ಅತ್ಯುತ್ತಮ ತಂಡಗಳನ್ನು ಹೆಸರಿಸಿದ್ದಾರೆ.
ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮೊದಲ ಮೂರು ಸ್ಥಾನಗಳಲ್ಲಿದೆ. ಆಡಿರುವ ಏಳು ಪಂದ್ಯಗಲ್ಲಿ ಈ ತಂಡಗಳು ತಲಾ ಐದರಲ್ಲಿ ಗೆಲುವು ಸಾಧಿಸಿ ಹತ್ತು ಅಂಕಗಳನ್ನು ಖಾತೆಯಲ್ಲಿಟ್ಟುಕೊಂಡಿದೆ. ನೆಟ್‌ರನ್‌ರೇಟ್ ಆಧಾರದಲ್ಲಿ ಡೆಲ್ಲಿ ಮೊದಲು ಮುಂಬೈ ಎರಡನೇ ಹಾಗೂ ಆರ್‌ಸಿಬಿ ಮೂರನೇ ಸ್ಥಾನದಲ್ಲಿದೆ.
ಅಜಿತ್ ಅಗರ್ಕರ್ ಪ್ಲೇ ಆಫ್‌ಗೆ ಸ್ಥಾನವನ್ನು ಪಡೆದುಕೊಳ್ಳುವ ತಂಡಗಳನ್ನು ಹೆಸರಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಖಂಡಿತಾ ಪ್ಲೇ ಆಫ್ ಪ್ರವೇಶಿಸಲಿದೆ. ಇನ್ನೊಂದು ಸ್ಥಾನಕ್ಕೆ ರಾಜಸ್ಥಾನ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಪೈಪೋಟಿ ನಡೆಯಲಿದೆ ಎಂದು ಹೇಳಿದ್ದಾರೆ. ಮುಂಬೈ ಇಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಷ್ಟೇ ಅಂಕವನ್ನು ಪಡೆದುಕೊಂಡಿರುವ ಆರ್‌ಸಿಬಿ ತಂಡವನ್ನು ಗಣನೆಗೆ ತೆಗೆದುಕೊಳ್ಳದಿರುವುದು ಅಚ್ಚರಿ ಮೂಡಿಸಿದೆ.
ಸ್ಟಾರ್ ಸ್ಪೊರ್ಟ್ಸ್‌ನ ಕ್ರಿಕೆಟ್ ಕನೆಕ್ಟೆಡ್ ಕಾರ್ಯಕ್ರಮದಲ್ಲಿ ಅಜಿತ್ ಅಗರ್ಕರ್ ಮಾತನಾಡಿದರು. ನಿಜಕ್ಕೂ ಇದು ಸಾಕಷ್ಟು ಪೈಪೋಟಿಯ ಟೂರ್ನಮೆಂಟ್ ಆಗಿದೆ. ಸಾಕಷ್ಟು ಏರಿಳಿತಗಳನ್ನು ಇಲ್ಲಿ ಕಂಡಿದ್ದೇವೆ. ಆದರೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಟೂರ್ನಿಯ ಅತ್ಯುತ್ತಮ ತಂಡಗಳಾಗಿದೆ ಎಂದು ಅಗರ್ಕರ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಇನ್ನು ಇದೇ ಕಾರ್ಯಕ್ರಮದಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಆಟಗಾರ ಗ್ರೇಮ್ ಸ್ವಾನ್ ಪಾಲ್ಗೊಂಡಿದ್ದರು. "ಈ ಬಾರಿಯ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಖಂಡಿತಾಗಿಯೂ ಪ್ಲೇಆಫ್ ಹಂತವನ್ನು ಪ್ರವೇಶಿಸುತ್ತದೆ ಎಂದು ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications