2024ರ ಟಿ20 ವಿಶ್ವಕಪ್‌ಗೆ ಕೆಎಲ್ ರಾಹುಲ್ ಕೈಬಿಡಲು ಕಾರಣ ತಿಳಿಸಿದ ಅಜಿತ್ ಅಗರ್ಕರ್
ಇದೇ ಜೂನ್ 2ರಿಂದ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ಆರಂಭವಾಗಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) 15 ಸದಸ್ಯರ ಭಾರತ ತಂಡವನ್ನು ಮಂಗಳವಾರ, ಏಪ್ರಿಲ್ 30ರಂದು ಪ್ರಕಟಿಸಿತು.
ಭಾರತದ ಟಿ20 ವಿಶ್ವಕಪ್ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್‌ಗಳಾಗಿ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದಾರೆ. ಇಬ್ಬರು ಕೀಪರ್‌ಗಳ ಆಯ್ಕೆಯು ಅಷ್ಟೇನೂ ಗೊಂದಲಕ್ಕೀಡಾಗಿಲ್ಲ.

ಕಳೆದ ವರ್ಷದ ಅಂತ್ಯದಿಂದ ಸಂಜು ಸ್ಯಾಮ್ಸನ್ ವೈಟ್-ಬಾಲ್ ತಂಡದ ಭಾಗವಾಗಿದ್ದಾರೆ ಮತ್ತು ರಿಷಭ್ ಪಂತ್ ಐಪಿಎಲ್ 2024ರಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದಾರೆ. ಗಮನಾರ್ಹವಾಗಿ, 15 ತಿಂಗಳ ವಿಶ್ರಾಂತಿ ನಂತರ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದಾರೆ.
ಗುರುವಾರ, ಮೇ 2ರಂದು ಸುದ್ದಿಗೋಷ್ಠಿ ನಡೆಸಿದ ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರು ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡುವ ಬದಲು ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಅವರನ್ನು ಆಯ್ಕೆ ಮಾಡುವ ಹಿಂದಿನ ಕಾರಣವನ್ನು ಬಹಿರಂಗಪಡಿಸಿದರು.

ಈಗಾಗಲೇ 15 ಸದಸ್ಯರ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಯಶಸ್ವಿ ಜೈಸ್ವಾಲ್ ಅವರಲ್ಲಿ ಆರಂಭಿಕ ಆಯ್ಕೆಗಳನ್ನು ಹೊಂದಿದ್ದರಿಂದ, ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್‌ನನ್ನು ಆಯ್ಕೆ ಮಾಡಲಾಗಿಲ್ಲ ಎಂದು ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದರು.
ಭಾರತದ ಗೆಲುವಿಗೆ ಬೇಕಾಗಿದ್ದನ್ನು ಆಯ್ಕೆ ಮಾಡಿದೆವು; ಅಜಿತ್ ಅಗರ್ಕರ್
ಕೆಎಲ್ ರಾಹುಲ್ ನಂಬಲಾಗದಷ್ಟು ಪ್ರತಿಭಾವಂತ ಆಟಗಾರ. ಆದರೆ ಇದೀಗ ಭಾರತೀಯ ಕ್ರಿಕೆಟ್ ತಂಡವು ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳನ್ನು ಬೇಡುತ್ತದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹೇಳಿದರು.
ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಇಬ್ಬರೂ ಬ್ಯಾಟಿಂಗ್ ಕ್ರಮಾಂಕದಲ್ಲಿ ಎಲ್ಲಿ ಬೇಕಾದರೂ ಬ್ಯಾಟ್ ಮಾಡಬಹುದು. ಆದರೆ ಕೆಎಲ್ ರಾಹುಲ್ ಐಪಿಎಲ್ 2024ರ ಆರಂಭದಿಂದಲೂ ಆರಂಭಿಕರಾಗಿ ಆಡುತ್ತಿದ್ದಾರೆ ಎಂದು 2024ರ ಟಿ20 ವಿಶ್ವಕಪ್ ತಂಡದ ಪ್ರಕಟಣೆ ಪತ್ರಿಕಾಗೋಷ್ಠಿಯಲ್ಲಿ ಅಜಿತ್ ಅಗರ್ಕರ್ ತಿಳಿಸಿದರು.
"ಕೆಎಲ್ ರಾಹುಲ್ ಕ್ಲಾಸ್ ಮತ್ತು ನಂಬಲಾಗದ ಆಟಗಾರ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಅತ್ಯುತ್ತಮವಾದ್ದನ್ನು ಮಾಡುತ್ತಿದ್ದಾರೆ ಮತ್ತು ಅವರು ನಮಗೆ ಮಧ್ಯಮ ಕ್ರಮಾಂಕದಲ್ಲಿ ಪರಿಪೂರ್ಣರಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ".
"ಕೆಎಲ್ ರಾಹುಲ್ ಈ ಐಪಿಎಲ್‌ನಲ್ಲಿ ಆರಂಭಿಕರಾಗಿದ್ದಾರೆ. ನಾವು ಮುಖ್ಯವಾಗಿ ಮಧ್ಯಮ ಕ್ರಮಾಂಕದ ಆಯ್ಕೆಗಳನ್ನು ಹುಡುಕುತ್ತಿದ್ದೇವೆ. ಹಾಗಾಗಿ, ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಅದಕ್ಕೆ ಸೂಕ್ತ ಎಂದು ಭಾವಿಸಿದ್ದೇವೆ. ಸ್ಯಾಮ್ಸನ್ ಕ್ರಮಾಂಕದಲ್ಲಿ ಎಲ್ಲಿ ಬೇಕಾದರೂ ಬ್ಯಾಟ್ ಮಾಡಬಹುದು. ಹೀಗಾಗಿ, ಇದು ತಂಡಕ್ಕೆ ಬೇಕಾದುದನ್ನು ಮಾತ್ರವೇ ಆಯ್ಕೆ ಮಾಡಲಾಗಿದೆಯೇ ಹೊರತು, ಬೇರೆ ಯಾವ ಉದ್ದೇಶವೂ ಇಲ್ಲ," ಎಂದರು ಅಜಿತ್ ಅಗರ್ಕರ್ ಬಹಿರಂಗಪಡಿಸಿದರು.
2024ರ ಟಿ20 ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಸಿರಾಜ್.
ಮೀಸಲು ಆಟಗಾರು: ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications