T20 world cup 2024: ಟೀಮ್ ಇಂಡಿಯಾಕ್ಕೆ ರಿಂಕು ಸಿಂಗ್ ಆಯ್ಕೆಯಾಗದ ಬಗ್ಗೆ ಮೌನ ಮುರಿದ ಅಜಿತ್ ಅಗರ್ಕರ್
ಮುಂಬರುವ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಆಡುವ 15 ಜನ ಸದಸ್ಯರನ್ನು ಏಪ್ರಿಲ್ 30 ರಂದು ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ಈ ತಂಡದಿಂದ ಹಲವು ಆಟಗಾರರನನ್ನು ಬಿಸಿಸಿಐ ಆಯ್ಕೆ ಸಮಿತಿ ಕೈ ಬಿಟ್ಟಿದೆ. ಭಾರೀ ನಿರೀಕ್ಷೆಯಲ್ಲಿದ್ದ ಆಟಗಾರರಿಗೆ ಈ ಆಯ್ಕೆ ಪ್ರಕ್ರಿಯೆ ಅಚ್ಚರಿ ತಂದಿದೆ.
ಕಳೆದ ವರ್ಷದಿಂದ ಅದ್ಭುತ ಪ್ರದರ್ಶನದ ಜೊತೆ ಉತ್ತಮ ಫಾರ್ಮ್‌ನಲ್ಲಿದ್ದ ರಿಂಕು ಸಿಂಗ್ ಅವರನ್ನು ಟಿ20 ವಿಶ್ವಕಪ್‌ಗೆ ಆಯ್ಕೆ ಮಾಡಿಲ್ಲ. ಇದು ಕ್ರಿಕೆಟ್ ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿದ್ದು, ಏಕೆ ರಿಂಕ್ ಸಿಂಗ್ ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಿಲ್ಲ ಎಂಬ ಆನೇಕ ಕುತೂಹಲಗಳು ಮೂಡಿವೆ.

ಇದೆ ಸಂದರ್ಭದಲ್ಲಿ ಟಿ20 ವಿಶ್ವಕಪ್‌ಗೆ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಹೆಸರಿಸಿದ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿರುವ ಅಜಿತ್ ಅಗರ್ಕರ್, ಅಮೆರಿಕ ಮತ್ತು ವೆಸ್ಟ್ ಇಂಡೀಸ್ ನಡೆಯಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಆಲ್‌ರೌಂಡರ್ ರಿಂಕು ಸಿಂಗ್ ಸ್ಥಾನ ಪಡೆಯುವ ಅವಕಾಶವನ್ನು ಕಳೆದುಕೊಂಡಿರುವುದಕ್ಕೆ ತಂಡದ ಸಮತೋಲನವೇ ಕಾರಣ. ಜೊತೆಗೆ ಬಿಸಿಸಿಐ ಯಾವಾಗಲೂ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲಿರಿಸಲು ಬಯಸುತ್ತದೆ ಮತ್ತು ಅದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬಹಿರಂಗಪಡಿಸಿದ್ದಾರೆ.
ಎಡಗೈ ಬ್ಯಾಟರ್ ರಿಂಕು ಸಿಂಗ್ 89 ರ ಸರಾಸರಿ ಮತ್ತು 176.23 ರ ಸ್ಟ್ರೈಕ್ ರೇಟ್‌ನೊಂದಿಗೆ ಕಡಿಮೆ ಸಮಯದಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ರಾಷ್ಟ್ರೀಯ ತಂಡಕ್ಕೆ ಆಡುವಾಗ ಅದ್ಭುತವಾಗಿದೆ. ರಿಂಕು ಸಿಂಗ್ ಕೈಬಿಡಲು ತಂಡದ ಸಮತೋಲನವೇ ಕಾರಣ. ಇದು ಅವನ ತಪ್ಪು ಅಲ್ಲ. ಅವನು ಇನ್ನೂ ಟೀಮ್ ಇಂಡಿಯಾ ಜೊತೆ ಪ್ರಯಾಣಿಸುವ ಆಟಗಾರರಲ್ಲಿ ಒಬ್ಬನಾಗಿದ್ದಾನೆ. ಟಿ20 ವಿಶ್ವಕಪ್‌ಗೆ ಆಯ್ಕೆಯಾಗದಿರುವುದು ಅವನಿಗೆ ಸ್ವಲ್ಪ ನೋವವಾಗಿರಬಹುದು. ನಾವು ಹೆಚ್ಚುವರಿ ಸ್ಪಿನ್ನರ್ ಅನ್ನು ತಂಡದಲ್ಲಿ ಆಡಲು ಬಯಸಿದ್ದೇವೆ ಎಂದು ಅಜಿತ್ ಅಗರ್ಕರ್ ತಿಳಿಸಿದ್ದಾರೆ.
2024ರ ಟಿ20 ವಿಶ್ವಕಪ್‌ಗೆ ಭಾರತ ತಂಡ :
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಸಿರಾಜ್.
ಮೀಸಲು ಆಟಗಾರು : ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications