Allan Border: ರೋಹಿತ್ ಶರ್ಮಾ ನಂತರ ಭಾರತ ತಂಡದ ನಾಯಕ ಇವರೇ; ಅಲನ್ ಬಾರ್ಡರ್ ಭವಿಷ್ಯ!
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವ ಬಗ್ಗೆ ಸುದ್ದಿಗಳ ಹರಿದಾಡುತ್ತಿವೆ. ಈ ಬಗ್ಗೆ ರೋಹಿತ್ ಶರ್ಮಾ ಯಾವುದೇ ಸುಳಿವು ಬಿಟ್ಟು ಕೊಟ್ಟಿಲ್ಲ. ಇದರ ನಡುವೆಯೂ ಅವರ ವೃತ್ತಿಜೀವನದ ನಿವೃತ್ತಿ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ರೋಹಿತ್ ಶರ್ಮಾ ಕಳಪೆ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದ ದಿಗ್ಗಜ ಬ್ಯಾಟರ್ ಅಲನ್ ಬಾರ್ಡರ್ ಅವರು ರೋಹಿತ್ ಶರ್ಮಾ ನಂತರ ಭಾರತ ತಂಡದ ನಾಯಕನ ಬಗ್ಗೆ ಭವಿಷ್ಯ ನುಡಿದ್ದಾರೆ.
ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಶ್ಲಾಘಿಸಿರುವ ಅಲನ್ ಬಾರ್ಡರ್ ಅವರು ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿ ಎಂದು ಹೇಳಿದ್ದಾರೆ. ಜಸ್ಪ್ರೀತ್ ಬುಮ್ರಾ ಭಾರತದ ನಾಯಕನಾಗಿ ಮುಂದುವರಿಯುವ ಸಾಮರ್ಥ್ಯ ಹೊಂದಿದ್ದಾರೆ ಎಂದಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಬಾರ್ಡರ್, ಜಸ್ಪ್ರೀತ್ ಬುಮ್ರಾ ಅವರ ಬಗ್ಗೆ ಗುಣಗಾನ ಮಾಡಿದ್ದಾರೆ. ಬುಮ್ರಾ ಅದ್ಭುತವವಾಗಿ ಬೌಲಿಂಗ್ ಮಾಡುತ್ತಾರೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕರಾಗಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದರು. ನಾಯಕತ್ವದ ವಿಷಯದಲ್ಲಿ ಅವರಲ್ಲಿ ಯಾವುದೇ ದೋಷವಿಲ್ಲ ಎಂದು ಹೇಳಿದ್ದಾರೆ.
ಜಸ್ಪ್ರೀತ್ ಬುಮ್ರಾ ಇತರ ಬೌಲರ್‌ಗಳಿಗಿಂತ ಭಿನ್ನವಾಗಿದ್ದು, ಹೆಚ್ಚು ಪರಿಣಾಮಕಾರಿ ಎಂದು ಸಾಬೀತುಪಡಿಸಿದ್ದಾರೆ. ಅವರ ವಿಶಿಷ್ಟ ಬೌಲಿಂಗ್ ಆಕ್ಷನ್ ಮತ್ತು ರನ್ ಅಪ್‌ನಿಂದಾಗಿ ಬ್ಯಾಟರ್‌ಗಳಿಗೆ ಅವರನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟಕರವಾಗಿದೆ ಎಂದು ಬುಮ್ರಾ ಅವರ ಬೌಲಿಂಗ್ ಆಕ್ಷನ್ ಬಗ್ಗೆ ಬಾರ್ಡರ್ ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಪರ್ತ್ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ತಮ್ಮ ನಾಯಕತ್ವದ ಕೌಶಲ್ಯದಿಂದ ಎಲ್ಲರ ಮನ ಗೆದ್ದಿದ್ದರು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 295 ರನ್‌ಗಳಿಂದ ಗೆಲುವು ಸಾಧಿಸಿತ್ತು. ಪರ್ತ್ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಎಂಟು ವಿಕೆಟ್‌ಗಳನ್ನು ಕಬಳಿಸಿದ್ದರು. ಪ್ರಸ್ತುತ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಬುಮ್ರಾ ಅವರು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಮೂರು ಟೆಸ್ಟ್ ಪಂದ್ಯಗಳಲ್ಲಿ ಅವರು 2.60 ಎಕಾನಮಿಯಲ್ಲಿ 21 ವಿಕೆಟ್‌ಗಳನ್ನು ಪಡೆದಿದ್ದಾರೆ. ಬ್ರಿಸ್ಬೇನ್‌ನ ಗಬ್ಬಾದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ 6 ವಿಕೆಟ್‌ಗಳನ್ನು ಕಬಳಿಸಿದ್ದರು. ಈ ಮೂಲಕ ಬ್ರಿಸ್ಬೇನ್ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಲು ಭಾರತಕ್ಕೆ ನೆರವಾಗಿದ್ದರು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2022ರಲ್ಲಿ ಬುಮ್ರಾ ಭಾರತ ತಂಡವನ್ನು ಮುನ್ನಡೆಸಿದ್ದರು. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಸೋಲು ಕಂಡಿತ್ತು. ಆದರೆ ಪರ್ತ್‌ನಲ್ಲಿ ಆರಂಭಿಕ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ನಾಯಕತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು 295 ರನ್‌ಗಳಿಂದ ಸೋಲಿಸಿತ್ತು. ಇದು ಅವರು ನಾಯಕರಾಗಿ ತಮ್ಮ ಮೊದಲ ಗೆಲುವು ದಾಖಲಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications