For Quick Alerts
ALLOW NOTIFICATIONS  
For Daily Alerts
 

Champions Trophy: ಭಾರತ vs ಪಾಕಿಸ್ತಾನ ಮಹಾ ಯುದ್ಧ; ಸ್ಟಾರ್ ಪ್ಲೇಯರ್ಸ್ ಮೇಲೆ ಎಲ್ಲರ ಚಿತ್ತ!

ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಹೈವೋಲ್ಟೇಜ್ ಪಂದ್ಯ ಇಂದು ಅಂದರೆ ಭಾನುವಾರ ಮಧ್ಯಾಹ್ನ 2:30 ಗಂಟೆಗೆ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಬಹು ನಿರೀಕ್ಷಿತ ಪಂದ್ಯವನ್ನು ವೀಕ್ಷಿಸಲು ಇಡೀ ಜಗತ್ತು ಕಾದು ಕುಳಿತಿದೆ. ಸ್ಟಾರ್ ಆಟಗಾರರಿಂದ ತುಂಬಿರುವ ಭಾರತ ತಂಡ ಮತ್ತೊಮ್ಮೆ ಪಾಕಿಸ್ತಾನವನ್ನು ಸೋಲಿಸಲು ಸಿದ್ಧವಾಗಿದೆ. ಪ್ರಮುಖವಾಗಿ ವಿರಾಟ್ ಕೊಹ್ಲಿ vs ಶಾಹೀನ್ ಅಫ್ರಿದಿ ಜೊತೆಗೆ, ಈ ಪಂದ್ಯದಲ್ಲಿ ರೋಹಿತ್ ಶರ್ಮಾ vs ಹ್ಯಾರಿಸ್ ರೌಫ್ ಕೂಡ ಮುಖಾಮುಖಿಯಾಗಲಿದ್ದಾರೆ. ಈ ಆಟಗಾರರ ನಡುವಿನ ಪೈಪೋಟಿ ರೋಮಾಂಚಕಾರಿಯಾಗಿದೆ.

ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಭಾರತ ಗೆದ್ದರೆ, 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿದೆ. ಇತ್ತ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಪ್ರಯಾಣವು ಕೊನೆಗೊಳ್ಳಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ತನ್ನ ಅಭಿಯಾನಕ್ಕೆ ಉತ್ತಮ ಆರಂಭವನ್ನು ನೀಡಿದರೆ, ಪಾಕಿಸ್ತಾನ ತಂಡ ನ್ಯೂಜಿಲೆಂಡ್ ವಿರುದ್ಧ 60 ರನ್‌ಗಳ ಹೀನಾಯ ಸೋಲನ್ನು ಎದುರಿಸಬೇಕಾಯಿತು.

All eyes are on the star players in India and Pakistan match of the Champions Trophy

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕೊನೆಯ ಪಂದ್ಯವು 2017ರ ಫೈನಲ್‌ನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಗೆದ್ದ ಪಾಕಿಸ್ತಾನ ತಂಡವು ಪ್ರಶಸ್ತಿ ಎತ್ತಿ ಹಿಡಿದಿತ್ತು. ಈಗ ಮೊಹಮ್ಮದ್ ರಿಜ್ವಾನ್ ನೇತೃತ್ವದ ಪಾಕಿಸ್ತಾನ ಪ್ರಶಸ್ತಿ ಉಳಿಸಿಕೊಳ್ಳುವ ಲೆಕ್ಕಚಾರದಲ್ಲಿದೆ. ಇದಕ್ಕಾಗಿ ಪಾಕ್ ಆಟಗಾರರು ಮೂರು ವಿಭಾಗಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ. ಟೀಮ್ ಇಂಡಿಯಾ ಆಟಗಾರರು ಕೂಡ ಪಾಕಿಸ್ತಾನ ತಂಡವನ್ನು ಹಗುರವಾಗಿ ತೆಗೆದುಕೊಳ್ಳುವಂತಿಲ್ಲ.

ರೋಹಿತ್ ಮೇಲೆ ಚಿತ್ತ

ಭಾರತ ತಂಡವು ಮೂರು ವಿಭಾಗದಲ್ಲಿಯೂ ಸ್ಥಿರ ಪ್ರದರ್ಶನ ನೀಡುತ್ತಿದೆ. ಟೀಮ್ ಇಂಡಿಯಾ ದುಬೈ ಪಿಚ್‌ನ ಪರಿಸ್ಥಿತಿಗೆ ಚೆನ್ನಾಗಿ ಹೊಂದಿಕೊಂಡಿದೆ. ಆದರೆ ಪಾಕಿಸ್ತಾನ ತಂಡ ಕರಾಚಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಹೀನಾಯ ಸೋಲಿನ ನಂತರ ದುಬೈಗೆ ತಲುಪಿದೆ. ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ಆಟಗಾರರ ಮೇಲೆ ಹೆಚ್ಚಿನ ಒತ್ತಡವಿರುತ್ತದೆ. ಆದಾಗ್ಯೂ, ಭಾರತ ತಂಡವು ಅಂತಹ ಸಂದರ್ಭಗಳನ್ನು ಉತ್ತಮವಾಗಿ ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ನಾಯಕ ರೋಹಿತ್ ಶರ್ಮಾ ಅವರ ಫಾರ್ಮ್ ಭಾರತಕ್ಕೆ ಕಳವಳಕಾರಿಯಾಗಿದೆ. ಆದರೆ ಬಾಂಗ್ಲಾದೇಶ ವಿರುದ್ಧ ಅವರು ಬ್ಯಾಟಿಂಗ್ ಮಾಡಿದ ರೀತಿ ಆರಂಭಿಕ ಆಟಗಾರ ತನ್ನ ಲಯವನ್ನು ಕಂಡುಕೊಂಡಿರುವುದನ್ನು ತೋರಿಸುತ್ತದೆ. ಅವರು 41 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡುವ ಮೂಲಕ ಭಾರತಕ್ಕೆ ಉತ್ತಮ ಆರಂಭ ನೀಡಿದರು. ಇದೀಗ ಪಾಕಿಸ್ತಾನ ವಿರುದ್ಧ ರೋಹಿತ್ ಹೇಘೇ ಬ್ಯಾಟಿಂಗ್ ಮಾಡಲಿದ್ದಾರೆ ಎಂಬುದು ಕುತೂಹಕ ಮೂಡಿಸಿದೆ.

ಗಿಲ್ ಸ್ಥಿರ ಪ್ರದರ್ಶನ

ಭಾರತ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರ ಅತ್ಯುತ್ತಮ ಫಾರ್ಮ್ ಭಾರತಕ್ಕೆ ಉತ್ತಮ ಆರಂಭ ಸಿಗುತ್ತಿದೆ. ಬಾಂಗ್ಲಾದೇಶ ವಿರುದ್ದದ ಕಳೆದ ಪಂದ್ಯದಲ್ಲಿ ಅವರು ಶತಕ ಗಳಿಸಿದ್ದರಿಂದ ಭಾರತ 229 ರನ್‌ಗಳ ಗುರಿಯನ್ನು ಸುಲಭವಾಗಿ ತಲುಪಿತು. ಪಾಕಿಸ್ತಾನದ ಮಟ್ಟಿಗೆ ಹೇಳುವುದಾದರೆ, ಅದರ ಸ್ಟಾರ್ ಬ್ಯಾಟರ್ ಬಾಬರ್ ಅಜಮ್ ಅವರ ಫಾರ್ಮ್. ನ್ಯೂಜಿಲೆಂಡ್ ವಿರುದ್ಧ 320 ರನ್‌ಗಳ ಗುರಿಯನ್ನು ಬೆನ್ನಟ್ಟುವಾಗ ಬಾಬರ್ 90 ಎಸೆತಗಳಲ್ಲಿ 64 ರನ್ ಗಳಿಸಿದರು. ಅವರು ನಿಧಾನಗತಿಯಲ್ಲಿ ರನ್ ಗಳಿಸಿದ್ದಕ್ಕಾಗಿ ಟೀಕೆಗಳನ್ನು ಎದುರಿಸುವಂತಾಗಿತ್ತು. ಇಷ್ಟೇ ಅಲ್ಲ, ಆರಂಭಿಕ ಬ್ಯಾಟರ್ ಫಖರ್ ಜಮಾನ್ ಗಾಯದಿಂದಾಗಿ ತಂಡದಿಂದ ಹೊರನಡೆದ ಕಾರಣ ಪಾಕಿಸ್ತಾನದ ಸಮಸ್ಯೆಗಳು ಹೆಚ್ಚಿವೆ. ಜಮಾನ್ ಬದಲಿಗೆ ಇಮಾಮ್ ಉಲ್ ಹಕ್ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ದುಬೈನಲ್ಲಿ ತಂಡವನ್ನು ಸೇರಿಕೊಂಡಿದ್ದುಮ ಪಾಕಿಸ್ತಾನ ಆಟಗಾರರ ಮೇಲೂ ಒತ್ತಡ ಹೆಚ್ಚಿದೆ.

ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಬ್ಯಾಟರ್ ಖುಶ್ದಿಲ್ ಶಾ ಮೊದಲ ಪಂದ್ಯದಲ್ಲಿ 69 ರನ್‌ಗಳ ಆಕ್ರಮಣಕಾರಿ ಇನ್ನಿಂಗ್ಸ್ ಆಡಿದ್ದು, ಇದು ಪಾಕಿಸ್ತಾನಕ್ಕೆ ಬಲವಾಗಿದೆ. ಭಾರತಕ್ಕೆ ದೊಡ್ಡ ಚಿಂತೆ ಎಂದರೆ ವಿರಾಟ್ ಕೊಹ್ಲಿ ಫಾರ್ಮ್. ಅವರು ತಮ್ಮ ಉತ್ತಮ ಆರಂಭವನ್ನು ದೊಡ್ಡ ಸ್ಕೋರ್ ಆಗಿ ಪರಿವರ್ತಿಸಲು ವಿಫಲವಾಗುತ್ತಿದ್ದಾರೆ. ಕೆಲವು ಸಮಯದಿಂದ, ಅವರು ಮೊದಲಿನಂತೆ ಬ್ಯಾಟಿಂಗ್‌ನಲ್ಲಿ ಗಮನಹರಿಸಲು ಸಾಧ್ಯವಾಗುತ್ತಿಲ್ಲ. ಈಗ ಪಾಕಿಸ್ತಾನ ವಿರುದ್ಧ ಬಿಗ್ ಇನ್ನಿಂಗ್ಸ್ ಆಡಲು ಕೊಹ್ಲಿ ಸಜ್ಜಾಗಿದ್ದಾರೆ.

ಕಳೆದ ಪಂದ್ಯದಲ್ಲಿ ಪಾಕಿಸ್ತಾನದ ಬೌಲರ್‌ಗಳು ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಟೀಮ್ ಇಂಡಿಯಾ ಬ್ಯಾಟರ್‌ಗಳು ಪಾಕಿಸ್ತಾನ ಬೌಲರ್‌ಗಳ ದೌರ್ಬಲ್ಯದ ಲಾಭವನ್ನು ಪಡೆದುಕೊಂಡು ಆರಂಭದಿಂದಲೇ ಅವರ ಮೇಲೆ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸಲು ತಂತ್ರ ರೂಪಿಸಿದ್ದಾರೆ. ಮತ್ತೊಂದೆಡೆ, ಟೀಮ್ ಇಂಡಿಯಾ ಬೌಲಿಂಗ್ ಅದ್ಭವಾಗಿ ಕಾಣುತ್ತಿದೆ. ಫಿಟ್ ಆದ ನಂತರ ತಂಡಕ್ಕೆ ಮರಳಿದ್ದ ವೇಗಿ ಮೊಹಮ್ಮದ್ ಶಮಿ ಕಳೆದ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದ್ದರು. ಶಮಿಗೆ ಹರ್ಷಿತ್ ರಾಣಾ ಅವರಿಂದ ಉತ್ತಮ ಬೆಂಬಲವೂ ಸಿಕ್ಕಿತು. ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದ ಜಸ್ಪ್ರೀತ್ ಬುಮ್ರಾ ಅವರನ್ನು ಭಾರತ ಮಿಸ್ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಶಮಿ ಅವರ ಅದ್ಭುತ ಬೌಲಿಂಗ್ ಈಗ ಸ್ಪಷ್ಟಪಡಿಸಿದೆ.

ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಐಸಿಸಿ ಟೂರ್ನಿಗಳಲ್ಲಿ ಪಾಕಿಸ್ತಾನ ವಿರುದ್ಧ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. 2017 ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಅವರು ಭಾರತದ ಪ್ರಶಸ್ತಿ ಗೆಲ್ಲುವ ಭರವಸೆಯನ್ನು ಕೊನೆಯವರೆಗೂ ಜೀವಂತವಾಗಿರಿಸಿದರು. ಕಳೆದ ಪಂದ್ಯವನ್ನು ಗೆದ್ದ ತಂಡದಲ್ಲಿ ಭಾರತ ಯಾವುದೇ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಕಡಿಮೆ. ಈ ಪಿಚ್ ಸ್ಪಿನ್ ಬೌಲರ್‌ಗಳಿಗೆ ಸಹಾಯ ಮಾಡುವ ನಿರೀಕ್ಷೆಯಿದ್ದು, ಇಂತಹ ಪರಿಸ್ಥಿತಿಯಲ್ಲಿ ಕುಲದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಅಕ್ಸರ್ ಪಟೇಲ್ ಅಂತಿಮ ಹನ್ನೊಂದರ ಬಳಗದಲ್ಲಿ ಉಳಿಯುವುದು ಬಹುತೇಕ ಖಚಿತ.

Story first published: Sunday, February 23, 2025, 7:59 [IST]
Other articles published on Feb 23, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+