ಏಷ್ಯಾ ಕಪ್‌ಗೆ ಆಡುವ 11ರ ಬಳಗ ಸಿದ್ಧವಾಗಿದೆ: ಕುತೂಹಲಕಾರಿ ಮಾಹಿತಿ ಬಹಿರಂಗಪಡಿಸಿದ ಟೀಮ್ ಇಂಡಿಯಾ ಅನುಭವಿ
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯ ಸರಣಿಯ ನಿರ್ಣಾಯಕ ಪಂದ್ಯವಾಗಿದ್ದು ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಗೆದ್ದು ಸರಣಿ ವಶಕ್ಕೆ ಪಡೆದುಕೊಳ್ಳಲಿದೆಯಾ ಎಂಬುದು ಕುತೂಹಲ ಮೂಡಿಸಿದೆ. ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ ಕೆಲ ಪ್ರಯೋಗಕ್ಕೆ ಮುಂದಾಗಿ ಕೈಸುಟ್ಟುಕೊಂಡಿದ್ದು ಟೀಮ್ ಇಂಡಿಯಾದ ಈ ಪ್ರಯೋಗಗಳ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ಈ ಬಗ್ಗೆ ಟೀಮ್ ಇಂಡಿಯಾದ ಅನುಭವಿ ಆಟಗಾರ ರವೀಂದ್ರ ಜಡೇಜಾ ಪ್ರಮುಖ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಟೀಮ್ ಇಂಡಿಯಾದಲ್ಲಿ ಮಾಡಿರುವ ಪ್ರಯೋಗಗಳು ಯುವ ಆಟಗಾರರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ತೆಗೆದುಕೊಂಡ ನಿರ್ಧಾರಗಳಾಗಿತ್ತು ಎಂದಿದ್ದಾರೆ. "ಇದು ಏಷ್ಯಾಕಪ್ ಹಾಗೂ ವಿಶ್ವಕಪ್‌ಗೆ ಮುನ್ನ ನಡೆಯುವ ಸರಣಿಯಾಗಿದ್ದು ಇಲ್ಲಿ ನಾವು ಪ್ರಯೋಗಗಳನ್ನು ಮಾಡಬಹುದಾಗಿದೆ. ಇಲ್ಲಿ ಹೊಸ ಕಾಂಬಿನೇಶನ್‌ಗಳನ್ನು ಪ್ರಯೋಗ ನಡೆಸಲಾಗಿದೆ. ಇದು ತಂಡದ ಹೊಂದಾಣಿಕೆಯ ಬಗ್ಗೆ, ಬಲ ಹಾಗೂ ದೌರ್ಬಲ್ಯಗಳ ಬಗ್ಗೆ ಮಾಹಿತಿ ನೀಡುತ್ತದೆ ಎಂದಿದ್ದಾರೆ.

ಸಿಡಿದ ಕಪಿಲ್ ದೇವ್‌ಗೆ ಜಡೇಜಾ ಖಡಕ್ ಉತ್ತರ: ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಟೀಮ್ ಇಂಡಿಯಾ ಆಟಗಾರ
ಇನ್ನು ಇದೇ ಸಂದರ್ಭದಲ್ಲಿ ರವೀಂದ್ರ ಜಡೇಜಾ ಟೀಮ್ ಇಂಡಿಯಾ ಏಷ್ಯಾಕಪ್‌ನಲ್ಲಿ ಯಾವ ಸಂಯೋಜನೆಯೊಂದಿಗೆ ಕಣಕ್ಕಿಳಿಯಬೇಕು ಎಂಬುದರ ಬಗ್ಗೆ ಸ್ಪಷ್ಟತೆಯನ್ನು ಹೊಂದಿದೆ ಎಂದಿದ್ದಾರೆ. ಏಷ್ಯಾಕಪ್‌ನಲ್ಲಿ ಯಾವೆಲ್ಲಾ ಆಟಗಾರರ ಪಡೆಯೊಂದಿಗೆ ಕಣಕ್ಕಿಳಿಯಬೇಕು ಎಂಬುದರ ಬಗ್ಗೆ ತಂಡದ ಮ್ಯಾನೇಜ್‌ಮೆಂಟ್ ಹಾಗೂ ನಾಯಕ ಸ್ಪಷ್ಟವಾಗಿದ್ದು ಅದರಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದಿದ್ದಾರೆ.
"ಯಾವ ಸಂಯೋಜನೆಯಲ್ಲಿ ಆಡಬೇಕು ಎಂದು ಮ್ಯಾನೇಜ್‌ಮೆಂಟ್ ಹಾಗೂ ನಾಯಕ ಸ್ಪಷ್ಟತೆಯನ್ನು ಹೊಂದಿದ್ದಾರೆ. ಅಲ್ಲಿ ಯಾವುದೇ ಗೊಂದಲಗಳು ಇಲ್ಲ. ಏಷ್ಯಾಕಪ್‌ನಲ್ಲಿ ಆಡುವ ತಂಡದ ಬಗ್ಗೆ ಈ ಮೊದಲೇ ನಿರ್ಧಾರಗಳು ತೆಗೆದುಕೊಳ್ಳಲಾಗಿದೆ. ಈಗ ಕೆಲ ಆಟಗಾರರನ್ನು ಕೆಲ ಸ್ಥಾನಗಳಿಗೆ ಸೂಕ್ತವಾಗುತ್ತಾರೆಯೇ ಎನ್ನುವುದನ್ನು ಕಂಡುಕೊಳ್ಳುವುದಷ್ಟೇ ಆಗಿದೆ" ಎಂದಿದ್ದಾರೆ ರವೀಂದ್ರ ಜಡೇಜಾ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿದ್ದರು. ಇನ್ನು ಅನುಭವಿ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಗೆಲುವು ಸಾಧಿಸಿದ ಈ ಪಂದ್ಯದಲ್ಲಿ ಬ್ಯಾಟಿಂಗ್ ನಡೆಸಲಿಲ್ಲ. ಎರಡು ಪಂದ್ಯದಲ್ಲಿಯೂ ಟೀಮ್ ಆರಂಬಿಕರಾಗಿ ಇಶಾನ್ ಕಿಶನ್ ಹಾಗೂ ಶುಬ್ಮನ್ ಗಿಲ್ ಕಣಕ್ಕಿಳಿದಿದ್ದರೆ ಸೂರ್ಯಕುಮಾರ್ ಯಾದವ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿದ್ದರು. ಎರಡನೇ ಪಂದ್ಯದಲ್ಲಿ ರೋಹಿತ್ ಹಾಗೂ ಕೊಹ್ಲಿ ಇಬ್ಬರು ಕೂಡ ಆಡುವ ಬಳಗದಿಂದ ಹೊರಗುಳಿದಿದ್ದು ಸಂಜು ಸ್ಯಾಮ್ಸನ್ ಹಾಗೂ ಅಕ್ಷರ್ ಪಟೇಲ್‌ಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿತ್ತು.
ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕ & ವಿಕೆಟ್ ಕೀಪರ್), ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್, ಕೆವಿನ್ ಸಿಂಕ್ಲೇರ್, ಡೊಮಿನಿಕ್ ಡ್ರೇಕ್ಸ್, ರೋವ್‌ಮನ್ ಪೊವೆಲ್, ಓಶೇನ್ ಥಾಮಸ್
ಟೀಮ್ ಇಂಡಿಯಾ ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಶುಬ್ಮನ್ ಗಿಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ಯುಜ್ವೇಂದ್ರ ಚಾಹಲ್, ರುತುರಾಜ್ ಗಾಯಕ್ವಾಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications