Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ambati Rayudu: ಆರ್‌ಸಿಬಿ ಅಭಿಮಾನಿಗಳನ್ನು ಮತ್ತೆ ಕೆಣಕಿದ ರಾಯುಡು

ಐಪಿಎಲ್ 2025 ರಲ್ಲಿ, ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಡುವೆ ರೋಚಕ ಪಂದ್ಯ ನಡೆಯಲಿದೆ. ಐಪಿಎಲ್ 18ನೇ ಸೀಸನ್‌ನಲ್ಲಿ ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಬೆಂಗಳೂರು ಸೋಲಿಸಿತ್ತು. 2008 ರ ನಂತರ ಚಿದಂಬರಂ ಕ್ರೀಡಾಂಗಣದಲ್ಲಿ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಗೆದ್ದ ಮೊದಲ ಪಂದ್ಯ ಇದಾಗಿತ್ತು.

ಕಳೆದ ಪಂದ್ಯದಲ್ಲಿ ಚೆನ್ನೈ ತಂಡವನ್ನು ಆರ್‌ಸಿಬಿ 50 ರನ್‌ಗಳಿಂದ ಸೋಲಿಸಿತ್ತು. ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ಎಂಎಸ್ ಧೋನಿ ಪಡೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ.

Ambati Rayudu statement created a stir before the RCB vs CSK match

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2025ರ ಪಾಯಿಂಟ್ಸ್ ಪಟ್ಟಿಯಲ್ಲಿ 10 ಪಂದ್ಯಗಳಿಂದ 14 ಅಂಕಗಳನ್ನು ಗಳಿಸಿ ಮೂರನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಚೆನ್ನೈ ಸೂಪರ್ ಕಿಂಗ್ಸ್ ಇದುವರೆಗೆ ಆಡಿದ 10 ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಜಯ ಸಾಧಿಸಿ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಸ್‌ಕೆ ತಂಡದ ಮಾಜಿ ಆಟಗಾರ ಅಂಬಟಿ ರಾಯುಡು ಮತ್ತೊಮ್ಮೆ ಆರ್‌ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಅಂಬಟಿ ರಾಯುಡು ಆರ್‌ಸಿಬಿ ತಂಡದ ಕಟು ಟೀಕಾಕಾರರಾಗಿದ್ದಾರೆ. ಬೆಂಗಳೂರು ಮತ್ತು ಚೆನ್ನೈ ನಡುವೆ ಪ್ರಮುಖ ಪೈಪೋಟಿ ಇದೆ ಎಂಬುದನ್ನು ಅವರು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಇದು ಅಂಬಟಿ ರಾಯುಡು ಮೇಲೆ ಆರ್‌ಸಿಬಿ ಅಭಿಮಾನಿಗಳು ಸಿಟ್ಟಿಗೆಳು ಕಾರಣವಾಗಿದೆ. ಈ ಹಿಂದೆಯೂ ಹಲವು ಬಾರಿ ಬೆಂಗಳೂರು ತಂಡದ ಬಗ್ಗೆ ರಾಯುಡು ಕೆಲವು ಹೇಳಿಕೆಗಳನ್ನು ನೀಡುವ ಮೂಲಕ ಟೀಕೆಗಳಿಗೆ ಗುರಿಯಾಗಿದ್ದಾರೆ.

ರಾಯುಡು ಹೇಳಿದ್ದೇನು?

ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವಿನ ಪೈಪೋಟಿ ಅಷ್ಟು ದೊಡ್ಡದಲ್ಲ. ಏಕೆಂದರೆ ಚೆನ್ನೈ ತಂಡವು ಎದುರಾಳಿಗಳ ವಿರುದ್ಧ ಸಾಕಷ್ಟು ಪಂದ್ಯಗಳನ್ನು ಗೆದ್ದಿದೆ. ಎರಡೂ ತಂಡಗಳ ಪ್ರದರ್ಶನವನ್ನು ಪರಿಗಣಿಸಿದರೆ, ಸಿಎಸ್‌ಕೆ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಅತಿ ದೊಡ್ಡದು ಎಂದು ಅಂಬಟಿ ರಾಯುಡು ಹೇಳಿದ್ದಾರೆ. ರಾಯುಡು ಅವರ ಈ ಹೇಳಿಕೆ ಆರ್‌ಸಿಬಿ ಅಭಿಮಾನಿಗಳಿಗೆ ಕೆರಳುವಂತೆ ಮಾಡಿದೆ. ಏಕೆಂದರೆ ಕಳೆದ ಕೆಲವು ವರ್ಷಗಳಿಂದ ಸಿಎಸ್‌ಕೆ ಮತ್ತು ಆರ್‌ಸಿಬಿ ಪಂದ್ಯವು ತುಂಬಾ ರೋಮಾಂಚನಕಾರಿಯಾಗಿದೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ. ಇಂತಹ ಸಂದರ್ಭದಲ್ಲಿ ರಾಯುಡು ತಮ್ಮ ಹೇಳಿಕೆ ಮೂಲಕ ಟ್ರೋಲ್ ಆಗುತ್ತಿದ್ದಾರೆ.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್-11

ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ರೊಮಾರಿಯೊ ಶೆಫರ್ಡ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್, ಸುಯಾಶ್ ಶರ್ಮಾ.

ಚೆನ್ನೈ ಸೂಪರ್ ಕಿಂಗ್ಸ್: ಶೇಕ್ ರಶೀದ್, ಆಯುಷ್ ಮ್ಹಾತ್ರೆ, ಸ್ಯಾಮ್ ಕರ್ರಾನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ದೀಪಕ್ ಹೂಡಾ / ವಿಜಯ್ ಶಂಕರ್ / ವಂಶ್ ಬೇಡಿ, ಎಂಎಸ್ ಧೋನಿ (ನಾಯಕ, ವಿಕೆಟ್‌ ಕೀಪರ್), ಅನ್ಶುಲ್ ಕಾಂಬೋಜ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಮತೀಶ ಪತಿರಾನ.

Story first published: Saturday, May 3, 2025, 16:50 [IST]
Other articles published on May 3, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+