For Quick Alerts
ALLOW NOTIFICATIONS  
For Daily Alerts
 

ವಿಶ್ವ ದಾಖಲೆ ಬರೆದ ನ್ಯೂಜಿಲೆಂಡ್ ನಾಯಕಿ ಅಮೆಲಿಯಾ ಕೆರ್

ಇಂಗ್ಲೆಂಡ್‌ನಲ್ಲಿ ಮಹಿಳಾ ಟಿ20 ವಿಶ್ವಕಪ್ ನಡೆಯಲಿದೆ. ಈ ಮೆಗಾ ಟೂರ್ನಿಗಾಗಿ ಎಲ್ಲ ತಂಡಗಳು ಭರದ ತಯಾರಿ ನಡೆಸಿವೆ. ನ್ಯೂಜಿಲೆಂಡ್ ತಂಡ ತವರಿನಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯ ಮೌಂಟ್ ಮೌಂಗನುಯಿದಲ್ಲಿ ನಡೆಯಿತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ವನಿತೆಯರ ತಂಡ 80 ರನ್‌ಗಳ ಜಯ ಸಾಧಿಸಿತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ನಾಯಕಿ ಅಮೆಲಿಯಾ ಕೆರ್ ವಿಶ್ವ ದಾಖಲೆಯನ್ನು ಬರೆದಿದ್ದಾರೆ.

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ತನ್ನದಾಗಿಸಿಕೊಂಡಿತು. ಆದರೆ ತಂಡದ ಪರ ಆರಂಭಿಕರಾಗಿ ಕಣಕ್ಕೆ ಇಳಿದ ಇಸಾಬೆಲ್ಲಾ ಗೇಜ್ ರನ್ ಕಲೆ ಹಾಕುವಲ್ಲಿ ವಿಫಲರಾದರು. ಎರಡನೇ ವಿಕೆಟ್‌ಗೆ ಜಾರ್ಜಿಯಾ ಪ್ಲೈಮರ್ ಹಾಗೂ ನಾಯಕಿ ಕೆರ್ ಅವರು ತಂಡವನ್ನು ಸಂಕಷ್ಟದಿಂದ ಪಾರು ಮಾಡುವ ಹೊಣೆಯನ್ನು ಹೊತ್ತುಕೊಂಡರು. ಈ ಜೋಡಿ ಎರಡನೇ ವಿಕೆಟ್‌ಗೆ 146 ರನ್‌ ಸೇರಿಸಿತು.

Amelia Kerr

ನಾಯಕಿ ಅಮೆಲಿಯಾ ಕೆರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 44 ಎಸೆತಗಳಲ್ಲಿ 11 ಬೌಂಡರಿ, 2 ಸಿಕ್ಸರ್ ನೆರವಿನಿಂದ 78 ರನ್ ಬಾರಿಸಿದರು. ಇನ್ನೊರ್ವ ಆರಂಭಿಕ ಆಟಗಾರ್ತಿ ಜಾರ್ಜಿಯಾ ಪ್ಲೈಮರ್ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 63 ರನ್‌ ಸಿಡಿಸಿ ತಂಡಕ್ಕೆ ನೆರವಾದರು. ಈ ಇಬ್ಬರ ಸಮಯೋಚಿತ ಆಟದ ನೆರವಿನಿಂದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 190 ರನ್‌ ಸೇರಿಸಿತು.

ವಿಶ್ವ ದಾಖಲೆ ಬರೆದ ಕೆರ್

ಮಹಿಳಾ ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಮೊದಲ ಐದು ಪಂದ್ಯಗಳಲ್ಲಿ ನಾಯಕಿಯಾಗಿ ಅಮೆಲಿಯಾ ಕೆರ್ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿದ್ದಾರೆ. ನಾಯಕಿಯಾಗಿ ಕೆರ್ ತಮ್ಮ ಮೊದಲ ಐದು ಇನ್ನಿಂಗ್ಸ್‌ಗಳಲ್ಲಿ ಒಟ್ಟು 301 ರನ್ ಗಳಿಸಿದ್ದಾರೆ. ಈ ಮೂಲಕ ರೊಮೇನಿಯಾದ ರೆಬೆಕ್ಕಾ ಬ್ಲೇಕ್ ಅವರ ದಾಖಲೆಯನ್ನು ಮುರಿದಿದ್ದಾರೆ. ಇವರು 250 ರನ್‌ ಬಾರಿಸಿದ್ದರು.

ಈ ಟಿ20 ಸರಣಿಗೂ ಮುನ್ನ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅಮೆಲಿಯಾ ಕೆರ್ ಅತ್ಯುತ್ತಮ ಆಲ್‌ರೌಂಡ್ ಪ್ರದರ್ಶನ ನೀಡಿದರು. ಈ ಸರಣಿಯಲ್ಲಿ ಅವರು 140 ರನ್ ಸಿಡಿಸಿದ್ದರು. ಮತ್ತು 16 ವಿಕೆಟ್‌ಗಳನ್ನು ಪಡೆದರು. ಮುಂಬರುವ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ಇವರು ಲಯಕ್ಕೆ ಮರಳಿರುವುದು ತಂಡದ ಉತ್ಸಾಹ ಇಮ್ಮಡಿ ಮಾಡಿದೆ.

ಗುರಿಯನ್ನು ಹಿಂಬಾಲಿಸಿದ ದಕ್ಷಿಣ ಆಫ್ರಿಕಾ ತಂಡದ ಬ್ಯಾಟರ್‌ಗಳು ರನ್‌ ಕಲೆ ಹಾಕುವಲ್ಲಿ ವಿಫಲರಾದರು. ದಕ್ಷಿಣ ಆಫ್ರಿಕಾದ ಪರ ತಜ್ಮಿನ್‌ ಬ್ರಿಟ್ಸ್‌ 29, ಕೇಯ್ಲಾ ರೇನೆಕೆ 24 ರನ್‌ ಸಿಡಿಸಿ ಸೋಲಿನಲ್ಲಿ ಮಿಂಚಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 110 ರನ್‌ ಸೇರಿಸಿತು. ನ್ಯೂಜಿಲೆಂಡ್ ತಂಡದ ಭರವಸೆಯ ಆಟಗಾರ್ತಿ ಸೋಪಿ ಡಿವೈನ್ ಬಿಗುವಿನ ದಾಳಿ ನಡೆಸಿ 4 ವಿಕೆಟ್‌ ಪಡೆದರು.

Story first published: Sunday, March 15, 2026, 18:29 [IST]
Other articles published on Mar 15, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+