Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕೆಎಲ್ ರಾಹುಲ್ ಬೆಂಬಲಕ್ಕೆ ನಿಂತ ಲಕ್ನೋ ಸೂಪರ್ ಜೈಂಟ್ಸ್ ಕೋಚ್ ಆಂಡಿ ಫ್ಲವರ್

Andy Flower praises KL Rahul said he is An Amazing Cricketer, I Rate Him Very Highly

ಟೀಮ್ ಇಂಡಿಯಾದ ಪ್ರಮುಖ ಆಟಗಾರ ಕೆಎಲ್ ರಾಹುಲ್ ಇತ್ತೀಚೆಗೆ ಪದೇ ಪದೇ ಸಾಕಷ್ಟು ಟೀಕೆಗೆ ಗುರಿಯಾಗುತ್ತಿದ್ದಾರೆ. ಟಿ20 ಮಾದರಿಯಲ್ಲಿ ಕೆಎಲ್ ರಾಹುಲ್ ಆಟದ ಶೈಲಿಯಿಂದಾಗಿ ಅಭಿಮಾನಿಗಳು ಕಟುವಾಗಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಜಿಂಬಾಬ್ವೆಯ ಮಾಜಿ ನಾಯಕ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೋಚ್ ಆಂಡಿ ಫ್ಲವರ್ ಮಾತನಾಡಿದ್ದು ಕೆಎಲ್ ರಾಹುಲ್ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

ಕೆಎಲ್ ರಾಹುಲ್ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಅದ್ಭುತ ಪ್ರದರ್ಶನ ನೀಡಿದ್ದಾರೆ. ಟೀಮ್ ಇಂಡಿಯಾದ ಉಳಿದೆಲ್ಲಾ ಆಟಗಾರರು ಕೂಡ ಕನಿಷ್ಠ ಮೊತ್ತಕ್ಕೆ ವಿಕೆಟ್ ಕಳೆದುಕೊಂಡಿದ್ದರು ಕೂಡ ಕೆಎಲ್ ರಾಹುಲ್ 73 ರನ್‌ಗಳನ್ನು ಬಾರಿಸುವ ಮೂಲಕ ತಂಡಕ್ಕೆ ನೆರವಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಆಂಡಿ ಫ್ಲವರ್ ಟೀಮ್ ಇಂಡಿಯಾದ ಆಟಗಾರ ಕೆಎಲ್ ರಾಹುಲ್ ಅವರ ಈ ಹಿಂದಿನ ಅಂಕಿಅಂಶಗಳನ್ನು ಉಲ್ಲೇಖಿಸಿದರು. ತಂಡದ ನಿರೀಕ್ಷೆಗೆ ತಕ್ಕನಾಗಿ ಕೆಎಲ್ ರಾಹುಲ್ ಯಾವ ರೀತಿಯಾಗಿ ಪ್ರದರ್ಶನವನ್ನು ನೀಡಿದ್ದಾರೆ ಎಂಬುದನ್ನು ಅವರ ಈ ಹಿಂದಿನ ಅಂಕಿಅಂಶಗಳೇ ಹೇಳುತ್ತವೆ ಎಂದಿದ್ದಾರೆ ಆಂಡಿ ಫ್ಲವರ್.

"ತನ್ನಿಂದ ಅತ್ಯುತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತದೆ ಎಂಬುದನ್ನು ಅವರು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ. ಆತನೋರ್ವ ಅದ್ಭುತ ಆಟಗಾರ. ಆತನ ಆಟವನ್ನು ನೋಡುವುದೇ ಸೊಗಸು.ಅಲ್ಲದೆ ಅದ್ಭುತ ದಾಖಲೆಗಳನ್ನು ಕೂಡ ಹೊಂದಿದ್ದಾರೆ. ವಿಶೇಷವಾಗಿ ಐಪಿಎಲ್‌ನಲ್ಲಿ ಅವರ ಅಂಕಿಅಂಶಗಳು ಅತ್ಯುತ್ತಮವಾಗಿದೆ. ಹಾಗಾಗಿ ಆತ ಅತ್ಯುತ್ತಮ ಆಟಗಾರ ಎಂದು ನಾನು ಹೇಳುತ್ತೇನೆ" ಎಂದಿದ್ದಾರೆ ಆಂಡಿ ಫ್ಲವರ್.

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದು ವಿಕೆಟ್ ಕೀಪಿಂಗ್ ಜವಾಬ್ಧಾರಿ ಕೂಡ ವಹಿಸಿಕೊಂಡಿದ್ದಾರೆ. ಮುಂದಿನ ವರ್ಷ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿರುವ ಕಾರಣ ಮ್ಯಾನೇಜ್‌ಮೆಂಟ್‌ನ ಈ ನಿರ್ಧಾರ ಸಾಕಷ್ಟು ಕುತೂಹಲ ಮೂಡಿಸಿದೆ. ರಿಷಭ್ ಪಂತ್ ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ಮತ್ತೆ ಮತ್ತೆ ವಿಫಲವಾಗುತ್ತಿರುವ ಈ ಸಂದರ್ಭದಲ್ಲಿ ಈ ನಿರ್ಧಾರ ಬಹಳ ಮಹತ್ವ ಪಡೆದುಕೊಳ್ಳಲಿದೆ.

Story first published: Tuesday, December 6, 2022, 23:38 [IST]
Other articles published on Dec 6, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+