ಕೋಚಿಂಗ್ ಹುದ್ದೆಯ ಅಂತ್ಯ ಉತ್ತಮವಾಗಿರಬಹುದಿತ್ತು ಎಂದ ಅನಿಲ್ ಕುಂಬ್ಳೆ

ಟೀಮ್ ಇಂಡಿಯಾ ಮಾಜಿ ಕೋಚ್ ಅನಿಲ್ ಕುಂಬ್ಳೆ ತಮ್ಮ ಕೋಚ್ ಅವಧಿಯ ಬಗ್ಗೆ ಮಾತನಾಡಿದ್ದಾರೆ. ತಮ್ಮ ಕೋಚಿಂಗ್ ಅವಧಿಯ ಅಂತ್ಯ ಇನ್ನಷ್ಟು ಉತ್ತಮವಾಗಿರಬಹುದಿತ್ತು, ಆದರೆ ನಾನು ಅದರಿಂದ ಸಾಕಷ್ಟು ಮುಂದೆ ಬಂದಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಭಾರತ ತಂಡದ ಕೋಚ್ ಆಗಿ ತನ್ನ ಅವಧಿಯನ್ನು ಸಾಕಷ್ಟು ಅನುಭವಿಸಿದ್ದೇನೆ ಎಂದು ಅನಿಲ್ ಕುಂಬ್ಳೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2017ರಲ್ಲಿ ಟೀಮ್ ಇಂಡಿಯಾದ ಚಾಂಫಿಯನ್ಸ್ ಟ್ರೋಫಿ ಅಭಿಯಾನದ ಅಂತ್ಯದ ನಂತರ ಅನಿಲ್ ಕುಂಬ್ಲೆ ಕೋಚ್ ಹುದ್ದೆಯಿಂದ ಕೆಳಗಿಳಿದರು. ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ಅನಿಲ್ ಕುಂಬ್ಳೆ ನಡುವೆ ಭಿನ್ನಾಭಿಪ್ರಾಯವಿದೆ ಎಂದು ವರದಿಯಾಗಿತ್ತು. ಆದರೆ ಇದನ್ನು ವಿರಾಟ್ ಕೊಹ್ಲಿ ಒಪ್ಪಿಕೊಂಡಿರಲಿಲ್ಲ.
ಆದರೆ ಕೋಚ್ ಹುದ್ದೆಗೆ ರಾಜೀನಾಮೆಯನ್ನು ನೀಡಿದ ನಂತರ ಅನಿಲ್ ಕುಂಬ್ಳೆ ಟ್ವೀಟ್ಟರ್‌ನಲ್ಲಿ ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿದ್ದರು. ನನ್ನ ಅವಧಿ ಮುಂದುವರಿಯುವ ಬಗ್ಗೆ ಬಿಸಿಸಿಐ ಒಲವನ್ನು ವ್ಯಕ್ತಪಡಿಸಿದೆ. ಆದರೆ ತಂಡದ ನಾಯಕ ವಿರಾಟ್ ಕೊಹ್ಲಿಗೆ ನನ್ನ ಕರ್ತವ್ಯ ವಿಧಾನದ ಬಗ್ಗೆ ಒಲವಿಲ್ಲ. ಹೀಗಾಗಿ ನಾನು ರಾಜೀನಾಮೆಯನ್ನು ನೀಡುತ್ತಿರುವುದಾಗಿ ಹೇಳಿಕೊಂಡಿದ್ದರು.
ಪೋಮೊ ಎಂಬಾಗ್ವ ಜೊತೆಗೆ ಇನ್ಸ್ಟಾಗ್ರಾಮ್ ಲೈವ್‌ನಲ್ಲಿ ಮಾತನಾಡಿದ ಅನಿಲ್ ಕುಂಬ್ಳೆ ಕೋಚ್ ಹುದ್ದೆಯ ಅವಧಿಯ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ರಾಜೀನಾಮೆ ನೀಡಿದ ನಿರ್ಧಾರದ ಬಗ್ಗೆ ಯಾವುದೇ ವಿಷಾದವೂ ಇಲ್ಲ ಎಂದು ಹೇಳಿಕೊಂಡಿದ್ದಾರೆ ಅನಿಲ್ ಕುಂಬ್ಳೆ.
ಅನಿಲ್ ಕುಂಬ್ಳೆ ಕೋಚ್ ಅವಧಿಯಲ್ಲಿ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿತ್ತು. ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಫೈನಲ್‌ಗೆ ಪ್ರವೇಶ ಪಡೆಯುವಲ್ಲಿಯೂ ಯಶಸ್ವಿಯಾಗಿತ್ತು. ಅತ್ಯುತ್ತಮ ಆಟಗಾರರ ಜೊತೆಗೆ ಟೀಮ್ ಇಂಡಿಯಾದ ಡ್ರೆಸ್ಸಿಂಗ್ ರೂಮ್‌ನಲ್ಲಿ ತಂಡದ ಭಾಗವಾಗಿ ಮತ್ತೊಮ್ಮೆ ಅವಕಾಶ ಸಿಕ್ಕಿದ್ದು ಶ್ರೇಷ್ಠ ಅನುಭವ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications