Manchester Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ: ಭಾರತದ ಪರ ಅನ್ಶುಲ್ ಪದಾರ್ಪಣೆ
ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಮ್ಯಾಂಚೆಸ್ಟರ್ ಅಂಗಳದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದ ಪರ ಅನ್ಶುಲ್ ಕಾಂಬೋಜ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿದೆ. ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಪ್ರದರ್ಶನ ಅನ್ಶುಲ್ ಕಾಂಬೋಜ್, ಅವರಿಗೆ ಚೊಚ್ಚಲ ಅಟವಕಾಶ ಲಭಿಸಿದೆ.
ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಈ ಸರಣಿಯ ಮೊದಲ ಮೂರು ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿರುವ ಕರುಣ್ ನಾಯರ್ ಅವರಿಗೆ ತಂಡ ಗೇಟ್ ಪಾಸ್ ನೀಡಿದೆ. ಇವರ ಸ್ಥಾನದಲ್ಲಿ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಸಾಯಿ ಸುದರ್ಶನ್ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ಗಾಯಾಳು ಆಟಗಾರರ ಬದಲಿಗೆ ಟೀಮ್ ಇಂಡಿಯಾ ಬದಲಿ ಆಟಗಾರರನ್ನು ಆಯ್ಕೆ ಮಾಡಿದೆ.

ಗಾಯಾಳು ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ಮೂರನೇ ವೇಗದ ಬೌಲರ್ ಸ್ಥಾನದಲ್ಲಿ ಆಕಾಶ್ ದೀಪ್ ಬದಲಿಗೆ ಅನ್ಶುಲ್ ಕಾಂಬೋಜ್ ಸ್ಥಾನ ಪಡೆದಿದ್ದಾರೆ. ಇವರು ದೇಶೀಯ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದು ಬಿಸಿಸಿಐ ಆಯ್ಕೆ ಸಮಿತಿಯ ಚಿತ್ತ ಕದ್ದಿದ್ದರು. ಈಗ ಇವರು ಇಂಗ್ಲೆಂಡ್‌ನಲ್ಲಿ ತಮ್ಮ ಚೊಚ್ಚಲ ಪಂದ್ಯವನ್ನು ಆಡುತ್ತಿದ್ದಾರೆ.
ನಾಲ್ಕು ವೇಗದ ಬೌಲರ್‌ಗೆ ಅವಕಾಶ
ಭಾರತ ತಂಡದಲ್ಲಿ ನಾಲ್ಕು ವೇಗದ ಬೌಲರ್‌ಗಳಿಗೆ ಅವಕಾಶ ನೀಡಲಾಗಿದೆ. ಅನ್ಶುಲ್ ಕಾಂಬೋಜ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಜೊತೆಗೆ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಇನ್ನು ಆಲ್‌ರೌಂಡರ್ ರೂಪದಲ್ಲಿ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಅವರು ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ಇಂಗ್ಲೆಂಡ್‌ನಲ್ಲಿ ಸರಣಿ ಮುನ್ನಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಆಂಡರ್ಸನ್ ಹಾಗೂ ತೆಂಡುಲ್ಕರ್ ಸರಣಿಯ ಐದು ಪಂದ್ಯಗಳ ಸರಣಿಯಲ್ಲಿ 2-1 ರಿಂದ ಆತಿಥೇಯ ತಂಡ ಮುನ್ನಡೆ ಸಾಧಿಸಿದೆ. ಇಂಗ್ಲೆಂಡ್ ಲಾರ್ಡ್ಸ್‌ನಲ್ಲಿ ನಡೆದ ಪಂದ್ಯದಲ್ಲಿ 22 ರನ್‌ಗಳಿಂದ ಗೆದ್ದು ಕೊಂಡಿದೆ. ಇನ್ನು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿ, ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯನ್ನು ಭಾರತ ಹೊಂದಿದೆ. ಹೀಗಾಗಿ ಕೊನೆಯ ಟೆಸ್ಟ್ ಪಂದ್ಯಕ್ಕೆ ಭಾರತ ಅಳೆದು ತೂಗಿ ಆಟಗಾರರನ್ನು ಆಯ್ಕೆ ಮಾಡಿದೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಅನ್ಶುಲ್ ಕಾಂಬೋಜ್, ಮೊಹಮ್ಮದ್ ಸಿರಾಜ್, ಜಸ್ಪ್ರೋತ್ ಬುಮ್ರಾ,
ಇಂಗ್ಲೆಂಡ್ ತಂಡ: ಜಾಕ್ ಕ್ರಾಲಿ, ಬೆನ್ ಡಕೆಟ್, ಒಲಿ ಪೋಪ್, ಜೋ ರೂಟ್, ಓಲಿ ಪೋಪ್, ಜೇಮಿ ಸ್ಮಿತ್, ಕ್ರಿಸ್ ವೋಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಬ್ರೈಡನ್ ಕಾರ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications