Ind vs Aus T20: ಭಾರತ ತಂಡದ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ!
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಪಡೆದುಕೊಂಡಿರುವ ಭಾರತ ತಂಡ ನಾಲ್ಕನೇ ಟಿ20 ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದೆ. ಇಂದು ನಡೆಯುವ ಪಂದ್ಯದಲ್ಲಿ ಭಾರತ ತಂಡದ ಆಡುವ ಬಳಗದಲ್ಲಿ ಬದಲಾವಣೆ ಮಾಡಲಿದೆ.
ಉಪನಾಯಕ ಶ್ರೇಯಸ್ ಅಯ್ಯರ್ ನಾಲ್ಕನೇ ಟಿ20 ಪಂದ್ಯಕ್ಕೆ ಮುನ್ನ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ತಿಲಕ್ ವರ್ಮಾ ಅವರಿಗೆ ಸ್ಥಾನ ಬಿಟ್ಟುಕೊಡಬೇಕಾಗುವ ಕಾರಣ ಬೆಂಚ್ ಕಾಯಬೇಕಾಗುತ್ತದೆ. ರಾಯ್‌ಪುರದಲ್ಲಿ ಪ್ರಸಿದ್ಧ್ ಕೃಷ್ಣ ಮತ್ತು ದೀಪಕ್ ಚಹಾರ್ ನಡುವೆ ಆಯ್ಕೆ ಮಾಡುವಲ್ಲಿ ಸೂರ್ಯಕುಮಾರ್ ಯಾದವ್ ಯೋಚನೆ ಮಾಡಬೇಕಾಗುತ್ತದೆ.

ಭಾರತ ಸರಣಿಯನ್ನು ಬ್ಯಾಕ್-ಟು-ಬ್ಯಾಕ್ ಗೆಲುವಿನೊಂದಿಗೆ ಪ್ರಾರಂಭಿಸಿತು ಆದರೆ ನಂತರ ಗ್ಲೆನ್ ಮ್ಯಾಕ್ಸ್‌ವೆಲ್ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ. ಭಾರತ ತಂಡ ಇಂದಿನ ಪಂದ್ಯವನ್ನು ಗೆದ್ದು 5-ಪಂದ್ಯಗಳ ಸರಣಿಯನ್ನು ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದೆ.
ಪ್ಲೇಯಿಂಗ್ ಇಲೆವೆನ್‌ನಲ್ಲಿ ಬದಲಾವಣೆ
ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಇಬ್ಬರೂ ಆರಂಭಿಕರಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. 3 ನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಅತ್ಯದ್ಭುತ ಫಾರ್ಮ್‌ನಲ್ಲಿದ್ದಾರೆ ರಾಯ್‌ಪುರದಲ್ಲಿ ಅಮೋಘ ಪ್ರದರ್ಶನ ನೀಡುವ ಉತ್ಸಾಹದಲ್ಲಿದೆ.
ಶ್ರೇಯಸ್ ಅಯ್ಯರ್ ಏಕದಿನ ವಿಶ್ವಕಪ್ ನಂತರ 3 ಟಿ20 ಪಂದ್ಯಗಳ ವಿರಾಮದ ನಂತರ ತಂಡಕ್ಕೆ ಮರಳುತ್ತಾರೆ. ಆತಿಥೇಯರಿಗೆ ಇನ್ನಿಂಗ್ಸ್ ಆಂಕರ್ ಮಾಡುವ ಜವಾಬ್ದಾರಿಯನ್ನು ಉಪನಾಯಕನಿಗೆ ವಹಿಸಲಾಗುತ್ತದೆ.
ಸರಣಿ ಸಮಬಲಗೊಳಿಸಲು ಆಸ್ಟ್ರೇಲಿಯಾ
ಇನ್ನು ಮೊದಲ ಎರಡು ಪಂದ್ಯಗಳಲ್ಲಿ ಸೋತ ಆಸ್ಟ್ರೇಲಿಯಾ ಮೂರನೇ ಪಂದ್ಯದಲ್ಲಿ ತಿರುಗಿ ಬಿದ್ದಿದೆ. 223 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿ ಗೆದ್ದ ಆಸ್ಟ್ರೇಲಿಯಾ ವಿಶ್ವಾಸ ಹೆಚ್ಚಿಸಿಕೊಂಡಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ಮೂರನೇ ಪಂದ್ಯ ಗೆದ್ದಿದ್ದು, ನಾಲ್ಕನೇ ಪಂದ್ಯ ಗೆದ್ದು ಸರಣಿ ಸಮಬಲಗೊಳಿಸುವ ವಿಶ್ವಾಸದಲ್ಲಿದೆ.
ಸರಣಿಯ ಮೂರನೇ ಪಂದ್ಯದಲ್ಲಿ ಆಡಿದ ತಂಡವೇ ನಾಲ್ಕನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ರಾಯಪುರದಲ್ಲಿ ಪಿಚ್ ಬ್ಯಾಟಿಂಗ್‌ಗೆ ಸಹಕಾರಿಯಾಗಿದ್ದು ಇದು ಕೂಡ ಹೈಸ್ಕೋರಿಂಗ್ ಪಂದ್ಯವಾಗುವ ಸಾಧ್ಯತೆ ಇದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಮ್ಯಾಟ್ ಶಾರ್ಟ್, ಆರನ್ ಹಾರ್ಡಿ, ಬೆನ್ ಮೆಕ್‌ಡರ್ಮಾಟ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕ್ರಿಸ್ ಗ್ರೀನ್, ಬೆನ್ ಡ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications