ಡಿ.21 ದೆಹಲಿಯಲ್ಲಿ ಧಾಮ್..ಧೂಮ್..ವಿರುಷ್ಕಾ ಆರತಕ್ಷತೆ
ನವದೆಹಲಿ, ಡಿಸೆಂಬರ್ 20: ಪ್ರಣಯ ಪಕ್ಷಿಗಳಂತೆ ಕಳೆದ ನಾಲ್ಕು ವರ್ಷಗಳಿಂದ ಮಾಧ್ಯಮಗಳ ಕಣ್ತಪ್ಪಿಸಿ ದೇಶ-ವಿದೇಶ ಸುತ್ತಾಡಿ ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮ ಜೋಡಿ ಹನಿಮೂನ್ ಮುಗಿಸಿಕೊಂಡು ನವದೆಹಲಿಗೆ ಬಂದಿಳಿದಿದೆ.
ಇಟಲಿಯಲ್ಲಿ ತಮ್ಮ ಕುಟುಂಬದ ಸಮ್ಮುಖದಲ್ಲಿ ಕೊಹ್ಲಿ-ಅನುಷ್ಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅನುಷ್ಕಾ ಹಾಗೂ ವಿರಾಟ್ ಮದುವೆ ಆರತಕ್ಷತೆ ಕುರಿತು ಅಭಿಮಾನಿಗಳು ಸಾಕಷ್ಟು ಚರ್ಚೆಗಳು ನಡೆದಿವೆ.

ಡಿಸೆಂಬರ್ 21 ಮತ್ತು ಡಿಸೆಂಬರ್ 26ರಂದು ಕುಟುಂಬಸ್ಥರಿಗೆ ಮತ್ತು ಸ್ನೇಹಿತರಿಗೆ ಪ್ರತ್ಯೇಕವಾಗಿ ಆರತಕ್ಷತೆ ಧಾಮ್..ಧೂಮ್..ಆಗಿ ನಡೆಯಲಿದೆ. ಇದಕ್ಕಾಗಿ ವಿರುಷ್ಕಾ ಕಳಿಸಿರುವ ಆರತಕ್ಷತೆ ಆಹ್ವಾನ ಪತ್ರಿಕೆ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ.
ಅನುಷ್ಕಾ ಹಾಗೂ ಕೊಹ್ಲಿ ತಮ್ಮ ಸಂಬಂಧಿಕರಿಗೆ ಡಿಸೆಂಬರ್ 21ರಂದು ದೆಹಲಿಯ ತಾಜ್ ಡಿಪ್ಲೊಮೆಟಿಕ್ ಎನ್ ಕ್ಲೇವ್ ನ ದರ್ಬಾರ್ ಹಾಲ್ ನಲ್ಲಿ ಆರತಕ್ಷತೆ ಇಟ್ಟುಕೊಂಡಿದ್ದಾರೆ. ಇನ್ನು ಸ್ನೇಹಿತರಿಗೆ, ಕ್ರಿಕೆಟರ್ಸ್, ಉದ್ಯಮಿಗಳಿಗೆ, ನಟ-ನಟಿಯರಿಗೆ ಡಿಸೆಂಬರ್ 26 ಮುಂಬೈನಲ್ಲಿ ಅರತಕ್ಷತೆಯನ್ನು ಆಯೋಜಿಸಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಜೋಡಿಯ ಆರತಕ್ಷತೆ ಸಮಾರಂಭದಲ್ಲಿ ಸಿನಿಮಾರಂಗದ ಗಣ್ಯರು ಸೇರಿದಂತೆ ಕ್ರಿಕೆಟಿಗರು ಭಾಗವಹಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಗುರುವಾರ ದೆಹಲಿಯಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮದಲ್ಲಿ ಎರಡು ಕುಟುಂಬದ ಆಪ್ತರು ಹಾಗೂ ಸ್ನೇಹಿತರು ಭಾಗವಹಿಸಲಿದ್ದಾರೆ. ಬಳಿಕ ವಿರಾಟ್ ಕೊಹ್ಲಿ ಜನವರಿ 5ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕ ವಿರುದ್ಧದ ಕ್ರಿಕೆಟ್ ಸರಣಿ ಆಡಲು ಆಫ್ರಿಕಾಗೆ ತೆರಳಿಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications