For Quick Alerts
ALLOW NOTIFICATIONS  
For Daily Alerts
 

ಟಿ20 ನಾಯಕತ್ವಕ್ಕೆ ವಿರಾಟ್ ವಿದಾಯದ ಕುರಿತು ಅನುಷ್ಕಾ ಶರ್ಮಾ ಪ್ರತಿಕ್ರಿಯೆ

Anushka Sharmas reaction to Virat Kohli’s decision to step down as India’s T20I captain

ಸೆಪ್ಟೆಂಬರ್ 16ರ ಗುರುವಾರದಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮಹತ್ವದ ಘೋಷಣೆಯನ್ನು ಮಾಡುವುದರ ಮೂಲಕ ದೊಡ್ಡ ಮಟ್ಟದ ಸಂಚಲನವನ್ನು ಹುಟ್ಟು ಹಾಕಿದ್ದಾರೆ. ಹೌದು, ಮುಂಬರಲಿರುವ ಅಕ್ಟೋಬರ್ - ನವೆಂಬರ್‌ ತಿಂಗಳುಗಳಲ್ಲಿ ನಡೆಯಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿಯುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಹೌದು ಸೆಪ್ಟೆಂಬರ್ 16ರ ಗುರುವಾರದಂದು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಧಿಕೃತ ಖಾತೆಗಳ ಮೂಲಕ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ನಂತರ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಸ್ವತಃ ವಿರಾಟ್ ಕೊಹ್ಲಿಯವರೇ ತಿಳಿಸಿದ್ದಾರೆ. ಐದಾರು ವರ್ಷಗಳಿಂದ ಭಾರತ ಟಿ ಟ್ವೆಂಟಿ ತಂಡದ ನಾಯಕನಾಗಿ ಕಾರ್ಯನಿರ್ವಹಿಸಿರುವ ವಿರಾಟ್ ಕೊಹ್ಲಿಗೆ ದಿನೇದಿನೇ ಒತ್ತಡ ಹೆಚ್ಚಾಗುತ್ತಿದ್ದು ಬಿಡುವು ಮಾಡಿಕೊಳ್ಳಬೇಕಾದ ಅನಿವಾರ್ಯತೆಯಿಂದ ಈ ನಿರ್ಧಾರವನ್ನು ಕೈಗೊಳ್ಳುತ್ತಿದ್ದೇನೆ ಎಂದು ಸ್ವತಃ ವಿರಾಟ್ ಕೊಹ್ಲಿಯವರೇ ತಿಳಿಸಿದ್ದರು. ಹಾಗೂ ಭಾರತ ಏಕದಿನ ಮತ್ತು ಟೆಸ್ಟ್ ತಂಡಗಳಿಗೆ ಎಂದಿನಂತೆ ತಾವೇ ನಾಯಕನಾಗಿ ಮುಂದುವರಿಯುವುದಾಗಿ ಕೂಡ ವಿರಾಟ್ ಕೊಹ್ಲಿ ಇದೇ ವೇಳೆ ತಿಳಿಸಿದರು.

ಇನ್ನು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ವೈಟ್ ಬಾಲ್ ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿಯಲಿದ್ದು ರೋಹಿತ್ ಶರ್ಮಾ ನೂತನ ನಾಯಕನಾಗಿ ನೇಮಕಗೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತೀಚೆಗಷ್ಟೇ ವೈರಲ್ ಆಗಿತ್ತು. ಅಷ್ಟೆ ಅಲ್ಲದೆ ವಿರಾಟ್ ಕೊಹ್ಲಿ ನಾಯಕತ್ವವನ್ನು ತ್ಯಜಿಸಲಿದ್ದಾರೆ ಎಂಬ ಸುದ್ದಿ ಕಳೆದ ಕೆಲ ವರ್ಷಗಳಿಂದ ಆಗಾಗ ಕೇಳಿಬರುತ್ತಲೇ ಇತ್ತು. ಆದರೆ ಈ ರೀತಿಯ ಸುದ್ದಿಗಳು ಹರಿದಾಡಿದಾಗಲೆಲ್ಲ ಆ ಸುದ್ದಿಗಳೆಲ್ಲ ಸತ್ಯವಲ್ಲ ಎಂದು ಬಿಸಿಸಿಐ ಮತ್ತು ವಿರಾಟ್ ಕೊಹ್ಲಿ ಆ ಸುದ್ದಿಗಳನ್ನು ತಳ್ಳಿ ಹಾಕುತ್ತಿದ್ದರು. ಆದರೆ ಈ ಬಾರಿ ಮಾತ್ರ ಸ್ವತಃ ವಿರಾಟ್ ಕೊಹ್ಲಿಯವರೇ ಬಹಿರಂಗವಾಗಿ ಪತ್ರವೊಂದನ್ನು ಟ್ವೀಟ್ ಮಾಡುವ ಮೂಲಕ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ಭಾರತ ಟಿ ಟ್ವೆಂಟಿ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಸ್ಪಷ್ಟ ಘೋಷಣೆ ಮಾಡಿದ್ದಾರೆ. ಹಾಗೂ ನಾಯಕ ಸ್ಥಾನದಿಂದ ಕೆಳಗಿಳಿದ ನಂತರ ಒಬ್ಬ ಜವಾಬ್ದಾರಿಯುತ ಬ್ಯಾಟ್ಸ್‌ಮನ್‌ ಆಗಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವುದಾಗಿಯೂ ವಿರಾಟ್ ಕೊಹ್ಲಿ ಇದೇ ಪತ್ರದಲ್ಲಿ ಬರೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಈ ರೀತಿಯ ದೊಡ್ಡ ಮಟ್ಟದ ನಿರ್ಧಾರವನ್ನು ಕೈಗೊಂಡಿರುವುದರ ಕುರಿತು ಹಲವಾರು ಮಾಜಿ ಕ್ರಿಕೆಟಿಗರು, ಕ್ರಿಕೆಟಿಗರು ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳು ಭಿನ್ನ ವಿಭಿನ್ನವಾದ ರೀತಿಯಲ್ಲಿ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಹೆಚ್ಚಿನ ಜನರು ವಿರಾಟ್ ಕೊಹ್ಲಿ ತೆಗೆದುಕೊಂಡಿರುವ ನಿರ್ಧಾರವನ್ನು ಗೌರವಿಸುತ್ತಾ ಓರ್ವ ಜವಾಬ್ದಾರಿಯುತ ನಾಯಕನಾಗಿ ವಿರಾಟ್ ಕೊಹ್ಲಿ ಉತ್ತಮ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಕೊಹ್ಲಿ ನಡೆಯನ್ನು ಪ್ರಶಂಸಿಸಿದ್ದಾರೆ.

anushka sharma

ಇದೀಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿ ತೆಗೆದುಕೊಂಡಿರುವ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರದ ಕುರಿತು ತಮ್ಮ ಇನ್ ಸ್ಟಾಗ್ರಾಂ ಖಾತೆಯ ಸ್ಟೋರಿಯ ಮೂಲಕ ಪ್ರತಿಕ್ರಿಯೆ ನೀಡಿದ್ದು 'ಹಾರ್ಟ್ ಇಮೋಜಿ' ಬಳಸುವುದರ ಮೂಲಕ ವಿರಾಟ್ ಕೊಹ್ಲಿ ನಡೆಗೆ ತಮ್ಮ ಸಂಪೂರ್ಣ ಬೆಂಬಲವನ್ನು ಸೂಚಿಸಿದ್ದಾರೆ.

ಕೊಹ್ಲಿ ನಡೆಗೆ ಗಂಗೂಲಿ ಮೆಚ್ಚುಗೆ

"ಟಿ20 ಕ್ರಿಕೆಟ್ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕನಾಗಿ ನೀಡಿದ ಅಮೋಘ ಕೊಡುಗೆಗೆ ನಾವು ಧನ್ಯವಾದ ಸಲ್ಲಿಸುತ್ತೇವೆ. ಮುಂಬರುವ ಟಿ20 ವಿಶ್ವಕಪ್‌ಗೆ ನಾವು ವಿರಾಟ್‌ಗೆ ಶುಭಹಾರೈಸುತ್ತೇವೆ. ಆತ ತಂಡಕ್ಕಾಗಿ ಅದ್ಭುತ ಪ್ರದರ್ಶನ ನಿಡುವ ಮೂಲಕ ರನ್‌ಗಳನ್ನು ಗಳಿಸುವುದನ್ನು ಮುಂದುವರಿಸುವ ನಿರೀಕ್ಷೆಯನ್ನು ಹೊಂದಿದ್ದೇವೆ" ಎಂದು ಸೌರವ್ ಗಂಗೂಲಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Story first published: Friday, September 17, 2021, 17:27 [IST]
Other articles published on Sep 17, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+