ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅರ್ಜುನ ಪ್ರಶಸ್ತಿಗೆ ಶಿಖರ್ ಧವನ್, ಸ್ಮೃತಿ ಮಂದಾನ ಹೆಸರು ಶಿಫಾರಸು

ಬೆಂಗಳೂರು, ಏಪ್ರಿಲ್ 25: ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತು ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಿದೆ. ಇಬ್ಬರೂ ಎಡಗೈ ಬ್ಯಾಟ್ಸ್‌ಮನ್‌ಗಳಾಗಿರುವುದು ವಿಶೇಷ.

ವಿಶ್ವಕಪ್ 2019 : ಜೂನ್ 16ಕ್ಕೆ ಭಾರತ-ಪಾಕಿಸ್ತಾನ ಪಂದ್ಯವಿಶ್ವಕಪ್ 2019 : ಜೂನ್ 16ಕ್ಕೆ ಭಾರತ-ಪಾಕಿಸ್ತಾನ ಪಂದ್ಯ

'ಶಿಖರ್ ಧವನ್ ಮತ್ತು ಸ್ಮೃತಿ ಮಂದಾನ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದೇವೆ' ಎಂದು ಬಿಸಿಸಿಐನ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಹೇಳಿದ್ದಾರೆ.

Arjuna awards: BCCI recommends Shikhar Dhawan, Smriti Mandhana names

32 ವಯಸ್ಸಿನ ಶಿಖರ್ ಧವನ್, ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸನ್‌ ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2013ರಲ್ಲಿ ಆಡಿದ ಮೊದಲ ಟೆಸ್ಟ್‌ ಪಂದ್ಯದಲ್ಲಿಯೇ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಶತಕ ಗಳಿಸಿದ್ದ ಶಿಖರ್ ಧವನ್, ಆರಂಭಿಕ ಆಟಗಾರರಾಗಿ ತಂಡದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಕ್ರಿಕೆಟ್‌ನ ಎಲ್ಲ ಮೂರು ವಿಭಾಗದಲ್ಲಿಯೂ ಧವನ್ ಆರಂಭಿಕರಾಗಿ ಮಿಂಚುತ್ತಿದ್ದಾರೆ.

Arjuna awards: BCCI recommends Shikhar Dhawan, Smriti Mandhana names

21 ವರ್ಷದ ಸ್ಮೃತಿ ಮಂದಾನ ಇತ್ತೀಚೆಗೆ ಜನಪ್ರಿಯತೆ ಪಡೆದ ಹೆಸರು. ಕಳೆದ ವರ್ಷ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಭಾರತ ತಂಡ ಫೈನಲ್ ತಲುಪವಲ್ಲಿ ಸ್ಮೃತಿ ಮಂದಾನ ಪ್ರಮುಖ ಕೊಡುಗೆ ನೀಡಿದ್ದರು. ಅತ್ಯುತ್ತಮ ಫಾರ್ಮ್‌ನಲ್ಲಿರುವ ಅವರು, ಐಸಿಸಿ ಮಹಿಳಾ ರಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇತ್ತೀಚೆಗೆ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಸರಣಿಯಲ್ಲಿ ಮಂದಾನ 9 ಪಂದ್ಯದಲ್ಲಿ ಐದು ಅರ್ಧಶತಕಗಳ ಸಹಿತ 531 ರನ್ ಗಳಿಸಿದ್ದರು.

Story first published: Wednesday, April 25, 2018, 20:21 [IST]
Other articles published on Apr 25, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X