IND vs BAN: ರೋಹಿತ್ ಶರ್ಮಾ ಟೆನ್ಷನ್ ಕಡಿಮೆ ಮಾಡುವ ಇಬ್ಬರು ಆಟಗಾರರು ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ?
ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ತವರಿನಲ್ಲಿ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸಲು ಸಿದ್ಧವಾಗಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗಲಿದೆ.
ಉಭಯ ದೇಶಗಳ ನಡುವಿನ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ. ಮೊದಲ ಟೆಸ್ಟ್ ಚೆನ್ನೈನಲ್ಲಿ ನಡೆಯಲಿದ್ದು, ಎರಡನೇ ಟೆಸ್ಟ್ ಪಂದ್ಯಕ್ಕೆ ಕಾನ್ಪುರ ಮೈದಾನ ಆತಿಥ್ಯ ವಹಿಸಲಿದೆ.

ಈ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ 2 ಯುವ ಸ್ಟಾರ್ ಆಟಗಾರರು ಪರ್ದಾಪಣೆ ಮಾಡುವ ನಿರೀಕ್ಷೆಯಿದೆ. ಈ ಆಟಗಾರರು ರೋಹಿತ್ ಶರ್ಮಾ ಅವರ ಒತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅಲ್ಲದೆ, ಈ 2 ಆಟಗಾರರು ಏಕಾಂಗಿಯಾಗಿ ಪಂದ್ಯಗಳನ್ನು ತಿರುಗಿಸುವುದರಲ್ಲಿ ನಿಪುಣರು.
1) ಅರ್ಷದೀಪ್ ಸಿಂಗ್
ಬಾಂಗ್ಲಾದೇಶ ವಿರುದ್ಧ ವೇಗದ ಬೌಲರ್ ಅರ್ಷದೀಪ್ ಸಿಂಗ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವಾಡುವ ಸಾಧ್ಯತೆವಿದೆ. ಈ ವರ್ಷಾಂತ್ಯದಲ್ಲಿ ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಅವಕಾಶ ಸಿಗಬಹುದು. ಏಕೆಂದರೆ ಆಸ್ಟ್ರೇಲಿಯಾ ಬೌನ್ಸಿ ಪಿಚ್‌ಗಳಿಗೆ ಹೆಚ್ಚು ಹೆಸರುವಾಸಿಯಾಗಿದೆ.
ಈಗಾಗಲೇ ಅರ್ಷದೀಪ್ ಸಿಂಗ್ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ತಮ್ಮ ಬೆಂಕಿ ಬೌಲಿಂಗ್ ಶೈಲಿಯಿಂದ ಸೈ ಎನಿಸಿಕೊಂಡಿದ್ದಾರೆ. ಎಡಗೈ ವೇಗದ ಬೌಲರ್ ಆಗಿರುವ ಅವರು ಗಂಟೆಗೆ 140 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವುದರಿಂದ ಟೆಸ್ಟ್ ಕ್ರಿಕೆಟ್‌ಗೆ ಹೇಳಿ ಮಾಡಿಸಿರುವ ಬೌಲರ್ ಆಗಿದ್ದಾರೆ. ಇವರ ಬೌಲಿಂಗ್ ಲಾಭವನ್ನು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪಡೆಯುವುದೇ ಕಾದು ನೋಡಬೇಕಿದೆ.
2) ಋತುರಾಜ್ ಗಾಯಕ್ವಾಡ್
ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಋತುರಾಜ್ ಗಾಯಕ್ವಾಡ್ ಅದ್ಭುತ ದಾಖಲೆ ಹೊಂದಿದ್ದಾರೆ. ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಪಂದ್ಯದ ದಿಕ್ಕನ್ನು ಬದಲಿಸುವಲ್ಲಿ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ತವರಿನಲ್ಲಿ ನಡೆಯುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಋತುರಾಜ್ ಅವಕಾಶ ಪಡೆಯಬಹುದು.
ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ಗೌತಮ್ ಗಂಭೀರ್ ಭಾರತ ಟೆಸ್ಟ್ ತಂಡದಲ್ಲಿ ಋತುರಾಜ್ ಗಾಯಕ್ವಾಡ್ ಅವರನ್ನು 6ನೇ ಕ್ರಮಾಂಕದಲ್ಲಿ ನೋಡಲು ಬಯಸುತ್ತಿದ್ದಾರೆ. ಈಗಾಗಲೇ ಋತುರಾಜ್‌ಗೆ ಮೊದಲ ನಾಲ್ಕು ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿರುವ ಅನುಭವಿದೆ. ಒಂದು ವೇಳೆ ಅವರು ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‌ಗೆ ಪಾದರ್ಪಣೆ ಮಾಡಿದರೆ, ಬ್ಯಾಟಿಂಗ್ ವಿಭಾಗಕ್ಕೆ ಆನೆ ಬಲ ಸಿಕ್ಕಂತಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications