For Quick Alerts
ALLOW NOTIFICATIONS  
For Daily Alerts
 

Arshdeep Singh: ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಯ ರೇಸ್‌ನಲ್ಲಿ ಅರ್ಷದೀಪ್‌ ಸೇರಿಂದತೆ ನಾಲ್ವರು

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಪ್ರತಿ ವರ್ಷ ಹಲವು ಪ್ರಶಸ್ತಿಗಳನ್ನು ನೀಡುತ್ತದೆ. ಹಲವು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಐಸಿಸಿ ಪ್ರೋತ್ಸಾಹಿಸುತ್ತದೆ. ಈ ನಿಟ್ಟಿನಲ್ಲಿ ಇತ್ತೀಚಿಗೆ ಐಸಿಸಿ ಉದೋನ್ಮುಖ ಆಟಗಾರನ ಪ್ರಶಸ್ತಿಯ ಶಾರ್ಟ್‌ ಲಿಸ್ಟ್‌ ಬಿಡುಗಡೆ ಮಾಡಿತ್ತು. ಇದರಲ್ಲಿ ಒಬ್ಬನೇ ಒಬ್ಬ ಭಾರತೀಯ ಆಟಗಾರ ಇಲ್ಲದೇ ಇರುವುದು ಅಭಿಮಾನಿಗಳಿಗೆ ಬೇಸರ ತರಿಸಿತ್ತು. ಆದರೆ ಈಗ ಟೀಮ್ ಇಂಡಿಯಾ ಅಭಿಮಾನಿಗಳು ಖುಷಿ ಪಡುವ ಸುದ್ದಿಯೊಂದು ಬಂದಿದೆ. ಆ ಸುದ್ದಿಯ ಬಗ್ಗೆ ವಿವರಣೆ ಇಲ್ಲಿದೆ.

ಐಸಿಸಿ ಪುರುಷರ ಟಿ20 ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ನಾಲ್ವರು ಆಟಗಾರರು ಆಯ್ಕೆಯಾಗಿದ್ದಾರೆ. ಇದರಲ್ಲಿ ಭಾರತದ ವೇಗದ ಬೌಲರ್‌ ಅರ್ಷದೀಪ್‌ ಸಿಂಗ್ ಸೇರಿದಂತೆ ನಾಲ್ವರು ಆಟಗಾರರನ್ನು ಶಾರ್ಟ್‌ ಲೀಸ್ಟ್ ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಈ ರೇಸ್‌ನಲ್ಲಿ ಅರ್ಷದೀಪ್‌ ಜೊತೆಗೆ ಪಾಕ್‌ ಆಟಗಾರ ಬಾಬರ್ ಅಜಮ್‌, ಆಸ್ಟ್ರೇಲಿಯಾದ ಟ್ರಾವಿಸ್‌ ಹೆಡ್‌, ಜಿಂಬಾಬ್ವೆಯ ಸಿಕಂದರ್ ರಾಜ್‌ ಸೇರಿದ್ದಾರೆ. ಈ ಪ್ರಶಸ್ತಿ ಯಾರಿಗೆ ಸಿಗಲಿದೆ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ಮೂರು ಆಟಗಾರರು ಪ್ರಸಕ್ತ ವರ್ಷ ಟಿ20 ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ತಮ್ಮ ತಂಡದ ಗೆಲುವಿನಲ್ಲಿ ಮಿಂಚಿದ್ದಾರೆ.

Arshdeep Singh Among Four Shortlisted for ICC Men s T20I Cricketer of the Year 2024

ಅರ್ಷದೀಪ್ ಸಿಂಗ್

ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ಚಾಂಪಿಯನ್‌ ಪಟ್ಟ ಅಲಂಕರಿಸುವಲ್ಲಿ ಅರ್ಷದೀಪ್‌ ಸಿಂಗ್ ಕೊಡುಗೆ ಅಪಾರ. ಇವರು 2024 ರ ಟಿ 20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್. ಅರ್ಷದೀಪ್‌ 17 ವಿಕೆಟ್ ಪಡೆದು ಸಾಧನೆ ಮಾಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತೀಯ ವೇಗದ ಬೌಲರ್ ಅಬ್ಬರಿಸಿದ್ದಾರೆ. ಅರ್ಷದೀಪ್ ಈ ವರ್ಷ 18 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 36 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಯಾವುದೇ ಸನ್ನಿವೇಶದಲ್ಲಾದ್ರೂ ಬೌಲಿಂಗ್‌ ನಡೆಸಬಲ್ಲ ಕ್ಷಮತೆಯನ್ನು ಇವರು ಹೊಂದಿದ್ದಾರೆ.

ಟ್ರಾವಿಸ್‌ ಹೆಡ್‌

ಈ ಪಟ್ಟಿಯಲ್ಲಿ ಎದ್ದು ಕಾಣುವ ಇನ್ನೊಂದು ಹೆಸರು ಎಂದರೆ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್‌. ಇವರು ಬ್ಯಾಟಿಂಗ್‌ನಲ್ಲಿ ಅಬ್ಬರದ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದಾರೆ. ಇವರು ಪ್ರಸಕ್ತ ವರ್ಷ ಆಡಿದ 15 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 539 ರನ್‌ ಸಿಡಿಸಿದ್ದಾರೆ. ಇದರಲ್ಲಿ 80 ರನ್‌ಗಳ ಅಮೋಘ ಇನಿಂಗ್ಸ್‌ ಸಹ ಸೇರಿದೆ.

Arshdeep Singh Among Four Shortlisted for ICC Men s T20I Cricketer of the Year 2024

ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಇನ್ನೊಂದು ದೊಡ್ಡ ಹೆಸರು ಎಂದರೆ ಪಾಕಿಸ್ತಾನ ತಂಡದ ಸೂಪರ್ ಸ್ಟಾರ್ ಬ್ಯಾಟರ್‌ ಬಾಬರ್‌ ಅಜಮ್. ಇವರು ಪ್ರಸಕ್ತ ವರ್ಷ ಟಿ20 ಫಾರ್ಮೆಟ್‌ನಲ್ಲಿ ರನ್‌ ಮಹಲ್‌ ಕಟ್ಟಿದ್ದಾರೆ. ಆಡಿದ 24 ಪಂದ್ಯಗಳಲ್ಲಿ ಒಟ್ಟು 738 ರನ್‌ ಸಿಡಿಸಿ ಅಬ್ಬರಿಸಿದ್ದಾರೆ. ಇವರನ್ನು ಹೊರತು ಪಡಿಸಿ ಪಾಕ್‌ ತಂಡದ ಯಾವೊಬ್ಬ ಬ್ಯಾಟರ್‌ ಈ ವರ್ಷ 700ಕ್ಕೂ ಹೆಚ್ಚು ರನ್‌ ಕಲೆ ಹಾಕೇ ಇಲ್ಲ. ಜಿಂಬಾಬ್ವೆ ತಂಡದ ಸಿಕಂದರ್ ರಜಾ ಸಹ ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಮತ್ತೊಂದು ಹೆಸರು. ಇವರು ಈ ವರ್ಷ 573 ರನ್ ಗಳಿಸಿ 24 ವಿಕೆಟ್ ಪಡೆದಿದು ಎಲ್ಲರ ಚಿತ್ತ ಕದ್ದಿದ್ದಾರೆ.

Story first published: Sunday, December 29, 2024, 16:30 [IST]
Other articles published on Dec 29, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+