Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Arshdeep Singh: ಅರ್ಷದೀಪ್‌ ಅಮೋಘ ಪ್ರದರ್ಶನಕ್ಕೆ ಐಸಿಸಿ ಗೌರವ: ಇತಿಹಾಸ ಬರೆದ ಬೌಲರ್‌

ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್‌ ಅರ್ಷದೀಪ್‌ ಸಿಂಗ್, ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಎಲ್ಲರ ಗಮನ ಸೆಳೆದ ಆಟಗಾರ. ಇವರು ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಇತಿಹಾಸ ನಿರ್ಮಿಸಿದ್ದಾರೆ. ಜಸ್ಪ್ರಿತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಅರ್ಷದೀಪ್‌ ಸಿಂಗ್ ಭಾರತ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಇವರ ಮೇಲೆ ಚುಟುಕು ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಹೆಚ್ಚಾಗಿ ಅವಲಂಭಿತವಾಗಿದೆ. ಇವರ ಸತತ ಪರಿಶ್ರಮಕ್ಕೆ ಐಸಿಸಿ ಗೌರವ ಸಂದಿದೆ.

ಅರ್ಷದೀಪ್‌ ಸಿಂಗ್‌ ಭಾರತದ ಪರ 2022ರಲ್ಲಿ ಪದಾರ್ಪಣೆ ಮಾಡಿದರು. ಕಳೆದ ಮೂರು ವರ್ಷಗಳಲ್ಲಿ ಇವರು ಭಾರತದ ಬೌಲಿಂಗ್‌ ದಾಳಿಯನ್ನು ಮುನ್ನಡೆಸಿದ್ದಾರೆ. ಇವರು ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಇವರು ಸ್ಥಿರ ಪ್ರದರ್ಶನದ ಫಲವಾಗಿ ಅರ್ಷದೀಪ್ ಸಿಂಗ್, ಐಸಿಸಿ ಗೌರವಕ್ಕೆ ಪಾತ್ರವಾಗಿದ್ದಾರೆ. ಅರ್ಷದೀಪ್‌ 2024ರ ಟಿ20 ಕ್ರಿಕೆಟಿಗ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಪ್ರಶಸ್ತಿಯನ್ನು ಗೆದ್ದ ಭಾರತದ ಮೊದಲ ಬೌಲರ್‌ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ.

Arshdeep Singh Becomes First Indian Bowler to Win ICC T20I Cricketer of the Year Award 2024

ಅರ್ಷದೀಪ್ ಸಾಧನೆ

ಅರ್ಷದೀಪ್‌ ಸಿಂಗ್‌ ಭಾರತದ ಪರ ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಐಸಿಸಿ ಪ್ರಶಸ್ತಿಯನ್ನು ಪಡೆದ ಭಾರತದ ಎರಡನೇ ಆಟಗರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದೊಡ್ಡ ಪ್ರಶಸ್ತಿಯನ್ನು ಗೆದ್ದ ಭಾರತದ ಮೊದಲ ಬೌಲರ್ ಆಗಿದ್ದಾರೆ. ಇಲ್ಲಿಯವರೆಗೆ, ಸೂರ್ಯಕುಮಾರ್ ಯಾದವ್ ಮತ್ತು ಮೊಹಮ್ಮದ್ ರಿಜ್ವಾನ್ ಮಾತ್ರ ಐಸಿಸಿ ಟಿ20ಐ ವರ್ಷದ ಕ್ರಿಕೆಟಿಗ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಕಳೆದ ವರ್ಷ ಟೀಮ್ ಇಂಡಿಯಾ ಟಿ20 ಕ್ರಿಕೆಟ್‌ನಲ್ಲಿ ಅರ್ಷದೀಪ್‌ ಅಮೋಘ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಇವರು ಕಳೆದ ವರ್ಷ ಆಡಿದ 18 ಪಂದ್ಯಗಳಲ್ಲಿ 36 ವಿಕೆಟ್‌ ಕಬಳಿಸಿದ್ದರು. ಇವರು ವರ್ಷ ಇಡೀ ಎದುರಾಳಿ ಬ್ಯಾಟರ್‌ಗಳನ್ನು ಕಾಡಿದ್ದಾರೆ. ಇವರು ಕಳೆದ ವರ್ಷ 7.49 ರ ಎಕಾನಮಿಯಲ್ಲಿ ಬೌಲಿಂಗ್ ಮಾಡಿದ್ದಾರೆ.

Arshdeep Singh Becomes First Indian Bowler to Win ICC T20I Cricketer of the Year Award 2024

ಟಿ20 ವಿಶ್ವಕಪ್‌ನಲ್ಲಿ ಶಿಸ್ತು ಬದ್ಧ ದಾಳಿ ನಡೆಸಿದ ಬಳಿಕ ಅರ್ಷದೀಪ್ ಸಿಂಗ್ ಸಾಧನೆ ಎಲ್ಲರ ಮುಂದೆ ಬಂದಿತು. ಬಾರ್ಬಡೋಸ್‌ನಲ್ಲಿ ನಡೆದಿದ್ದ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅವರು ಭಾರತ ಪಂದ್ಯಗೆಲ್ಲುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಇವರು 20 ರನ್‌ ನೀಡಿ 2 ವಿಕೆಟ್‌ ಕಬಳಿಸಿದ್ದರು. ಇನ್ನು ಡೆತ್ ಓವರ್‌ಗಳಲ್ಲಿ 19ನೇ ಓವರ್‌ನಲ್ಲಿ ಕೇವಲ 4 ರನ್‌ ನೀಡಿ ಎದುರಾಳಿಗಳನ್ನು ಕಾಡಿದರು. ಇವರು ಟಿ20 ವಿಶ್ವಕಪ್‌ನಲ್ಲಿ ಅರ್ಷದೀಪ್‌ ಸಿಂಗ್ ಒಟ್ಟು 17 ವಿಕೆಟ್‌ ಕಬಳಿಸಿದ್ದಾರೆ.

ಅರ್ಷದೀಪ್ ವೃತ್ತಿಜೀವನ

ಅರ್ಷದೀಪ್ ಸಿಂಗ್ ಇದುವರೆಗೆ ಭಾರತ ತಂಡದ ಪರ 61 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 97 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದಲ್ಲದೆ, ಅವರು ಭಾರತ ಪರ 8 ಏಕದಿನ ಪಂದ್ಯಗಳಲ್ಲಿ 12 ವಿಕೆಟ್‌ಗಳನ್ನು ಪಡೆದಿದ್ದಾರೆ.

Story first published: Saturday, January 25, 2025, 19:20 [IST]
Other articles published on Jan 25, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+