Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Arshdeep Singh: ಭಾರತದ ಪರ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ ಅರ್ಷದೀಪ್ ಸಿಂಗ್

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಗೆದ್ದು ಬೀಗಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 4 ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಲ್ಲದೆ, ಅರ್ಷದೀಪ್ ಸಿಂಗ್ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪರ ಅರ್ಷದೀಪ್ ಸಿಂಗ್ ಅತಿ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಮೂರು ವಿಕೆಟ್‌ಗಳನ್ನು ಪಡೆದು ಭಾರತದ ಗೆಲುವಿಗೆ. ಇದರೊಂದಿಗೆ ಈ ದಾಖಲೆ ಅವರ ಹೆಸರಿನಲ್ಲಿದೆ. ಈಗ ಅಂತಾರಾಷ್ಟ್ರೀಯ ಟಿ20ಯಲ್ಲಿ 92 ವಿಕೆಟ್‌ಗಳು ಅವರ ಹೆಸರಿನಲ್ಲಿ ದಾಖಲಾಗಿವೆ.

Arshdeep Singh created T20 international cricket history

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅರ್ಷದೀಪ್ ಸಿಂಗ್ ಅವರಿಗೂ ಮುನ್ನ 90 ವಿಕೆಟ್‌ ಪಡೆದ ಭುವನೇಶ್ವರ್‌ ಕುಮಾರ್‌ ಹೆಸರಿನಲ್ಲಿ ಈ ದಾಖಲೆ ಇತ್ತು. ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಒಂದು ವಿಕೆಟ್ ಪಡೆಯುವ ಮೂಲಕ ಭುವೇಶ್ವರ್ ಕುಮಾರ್ ಅವರ ದಾಖಲೆಯನ್ನು ಸರಿಗಟ್ಟಿದರು. ನಂತರ ಕೊನೆಯ ಓವರ್‌ಗಳಲ್ಲಿ ಎರಡು ವಿಕೆಟ್ ಕಬಳಿಸುವ ಮೂಲಕ ನಂಬರ್-1 ಬೌಲರ್ ಆದರು.

ಟೀಮ್ ಇಂಡಿಯಾದ ಮತ್ತೋರ್ವ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 89 ವಿಕೆಟ್‌ಗಳನ್ನು ಪಡೆದಿದ್ದು, ಅರ್ಷದೀಪ್ ಅವರನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದ್ದಾರೆ. ಆದರೆ ಬುಮ್ರಾ ಟಿ20 ವಿಶ್ವಕಪ್ ಗೆಲುವಿನ ಬಳಿಕ ಯಾವುದೇ ಚುಟುಕು ಕ್ರಿಕೆಟ್ ಆಡಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಅರ್ಷದೀಪ್ ದಾಖಲೆಯನ್ನು ಮುರಿಯಬಹುದು. ಇನ್ನು ಈ ಪಟ್ಟಿಯಲ್ಲಿ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 88 ವಿಕೆಟ್‌ಗಳ್ನು ಪಡೆಯುವ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಅರ್ಷದೀಪ್ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ವೇಗದ ಬೌಲರ್ ಆಗಿದ್ದು ಮಾತ್ರವಲ್ಲದೆ, ಈ ಸ್ವರೂಪದಲ್ಲಿ ಒಟ್ಟಾರೆಯಾಗಿ ಹೆಚ್ಚು ವಿಕೆಟ್‌ಗಳನ್ನು ಪಡೆದವರ ಪಟ್ಟಿಯಲ್ಲಿ ಅವರು ಎರಡನೇ ಸ್ಥಾನವನ್ನು ತಲುಪಿದ್ದಾರೆ. 96 ವಿಕೆಟ್ ಪಡೆದಿರುವ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮೊದಲ ಸ್ಥಾನದಲ್ಲಿದ್ದಾರೆ. ಅರ್ಷದೀಪ್ ಸಿಂಗ್ ಚಹಾಲ್ ಅವರನ್ನು ಹಿಂದಿಕ್ಕುವ ಎಲ್ಲ ಅವಕಾಶಗಳಿವೆ. ಮುಂದಿನ ಕೆಲವು ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ಟಿ20 ಅಂತಾರಾಷ್ಟ್ರೀಯ ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಬಹುದು.

Story first published: Thursday, November 14, 2024, 8:01 [IST]
Other articles published on Nov 14, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+