Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Arshdeep Singh: 15 ನಿಮಿಷಗಳಲ್ಲಿ ಇತಿಹಾಸ ಸೃಷ್ಟಿಸಿದ ಅರ್ಷದೀಪ್ ಸಿಂಗ್

ಭಾರತ ತಂಡದ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ಅರ್ಷದೀಪ್ ಸಿಂಗ್ ಹಿಂದಿಕ್ಕಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಈ ಸಾಧನೆ ಮಾಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಇದಾದ ಕೇವಲ 15 ನಿಮಿಷಗಳಲ್ಲಿ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

Arshdeep Singh creates record for most wickets by bowler for India in T20 Internationals

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಯುಜ್ವೇಂದ್ರ ಚಹಾಲ್ ಹೆಸರಿನಲ್ಲಿತ್ತು. ಈ ದಾಖಲೆಯನ್ನು ಮಾಡಲು ಚಹಾಲ್ 7 ವರ್ಷಗಳನ್ನು ತೆಗೆದುಕೊಂಡಿದ್ದರು. ಚಹಾಲ್ 2016 ರಿಂದ 2023 ರವರೆಗೆ 80 ಟಿ20 ಪಂದ್ಯಗಳಲ್ಲಿ 96 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆದರೆ ಅರ್ಷದೀಪ್ 2022 ರಿಂದ 2025 ರವರೆಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಅರ್ಷದೀಪ್ ಕೇವಲ 61 ಟಿ20 ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.

ಇತಿಹಾಸ ಸೃಷ್ಟಿಸಿದ್ದೇಗೆ?

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಬಂದ ಇಂಗ್ಲೆಂಡ ತಂಡದ ಸ್ಪೋಟಕ ಬ್ಯಾಟರ್ ಫಿಲ್ ಸಾಲ್ಟ್ ಅವರಿಂದ ಬಿಗ್ ನಿರೀಕ್ಷೆಯಿತ್ತು. ಆದರೆ, ಫಿಲ್ ಸಾಲ್ಟ್ ಅವರನ್ನು ಅರ್ಷದೀಪ್ ಸಿಂಗ್‌ ಮೊದಲನೇ ಓವರ್‌ ಮೂರನೇ ಎಸೆತದಲ್ಲಿ ಔಟ್ ಮಾಡಿದರು. ಇದಾದ ನಂತರ ಅವರು ಇನ್ನಿಂಗ್ಸ್‌ನ ಮೂರನೇ ಓವರ್‌ನ ಐದನೇ ಎಸೆತದಲ್ಲಿ ಬೆನ್ ಡಕೆಟ್ ಅವರನ್ನು 4 ರನ್‌ಗಳಿಗೆ ಔಟ್ ಮಾಡಿದರು. ಇದರೊಂದಿಗೆ ಅರ್ಷದೀಪ್ ತಮ್ಮ ಹೆಸರಿನಲ್ಲಿ ಬೃಹತ್ ದಾಖಲೆಯನ್ನು ಸೃಷ್ಟಿಸಿದರು.

ಭಾರತದ ಪರ ಅತಿ ಹೆಚ್ಚು ಟಿ20 ವಿಕೆಟ್ ಪಡೆದವರು

  • ಅರ್ಷದೀಪ್ ಸಿಂಗ್ - 61 ಪಂದ್ಯಗಳಲ್ಲಿ 97 ವಿಕೆಟ್‌ಗಳು
  • ಯುಜ್ವೇಂದ್ರ ಚಹಾಲ್ - 80 ಪಂದ್ಯಗಳಲ್ಲಿ 96 ವಿಕೆಟ್‌ಗಳು
  • ಭುವನೇಶ್ವರ್ ಕುಮಾರ್ - 87 ಪಂದ್ಯಗಳಲ್ಲಿ 90 ವಿಕೆಟ್‌ಗಳು
  • ಜಸ್ಪ್ರೀತ್ ಬುಮ್ರಾ - 70 ಪಂದ್ಯಗಳಲ್ಲಿ 89 ವಿಕೆಟ್‌ಗಳು
  • ಹಾರ್ದಿಕ್ ಪಾಂಡ್ಯ - 110 ಪಂದ್ಯಗಳಲ್ಲಿ 89 ವಿಕೆಟ್‌ಗಳು

Story first published: Wednesday, January 22, 2025, 20:05 [IST]
Other articles published on Jan 22, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+