Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆತ ಮ್ಯಾಚ್ ವಿನ್ನರ್: ಯುವ ಆಟಗಾರನ ಬಗ್ಗೆ ಶಿಖರ್ ಧವನ್ ಭರವಸೆ

Arshdeep Singh He is a match-winner said Indian cricketer Shikhar Dhawan

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಪಂದ್ಯಗಳು ಅಂತಿಮ ಹಂತದಲ್ಲಿದೆ. ಭಾರತ ಭಾನುವಾರ ಈ ಹಂತದ ಅಂತಿಮ ಪಂದ್ಯವನ್ನು ಆಡಲಿದೆ. ಈ ಮೂಲಕ ಸೆಮಿಫೈನಲ್ ಟಿಕೆಟ್ ಖಚಿತಪಡಿಸಿಕೊಳ್ಳುವ ಅವಕಾಶ ಹೊಂದಿದೆ. ಈ ಸಂದರ್ಭದಲ್ಲಿ ಭಾರತದ ಅನುಭವಿ ಆಟಗಾರ ಶಿಖರ್ ಧವನ್ ಪ್ರತಿಕ್ರಿಯೆ ನೀಡಿದ್ದು ಟೀಮ್ ಇಂಡಿಯಾದ ಯುವ ಆಟಗಾರನ ಬಗ್ಗೆ ಭರವಸೆಯ ಮಾತುಗಳನ್ನಾಡಿದ್ದಾರೆ.

ಮುಂಬೈನಲ್ಲಿ ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಿಖರ್ ಧವನ್ ಹಲವು ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಭಾರತ ತಂಡದ ಯುವ ವೇಗದ ಬೌಲರ್ ಅರ್ಶದೀಪ್ ಸಿಂಗ್ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆರ್ಶ್‌ದೀಪ್ ಸಿಂಗ್ ಭಾರತದ ಮ್ಯಾನಚ್ ವಿನ್ನರ್ ಎಂದಿದ್ದಾರೆ ಶಿಖರ್ ಧವನ್. ಈ ಬಾರಿಯ ವಿಶ್ವಕಪ್‌ನಲ್ಲಿ ಅರ್ಶ್‌ದೀಪ್ ಸಿಂಗ್ ಅಮೋಘ ಪ್ರದರ್ಶನ ನೀಡಿ ಮಿಂಚುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪರವಾಘಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಇಂಚಿದ್ದಾರೆ ಅರ್ಶ್‌ದೀಪ್ ಸಿಂಗ್. ಟೀಮ್ ಇಂಡಿಯಾ ಆಡಿರುವ 4 ಪಂದ್ಯಗಳಲ್ಲಿ ಒಟ್ಟು 9 ವಿಕೆಟ್ ಪಡೆಯುವಲ್ಲಿ ಅರ್ಶ್‌ದೀಪ್ ಯಶಸ್ವಿಯಾಗಿದ್ದು ತಂಡದ ಯಶಸ್ಸಿನಲ್ಲಿ ವಿಶೇಷ ಕೊಡುಗೆ ನೀಡಿದ್ದಾರೆ. ಅಲ್ಲದೆ ಡೆತ್ ಓವರ್‌ಗಳಲ್ಲಿ ನೀಡುತ್ತಿರುವ ಪರಿಣಾಮಕಾರಿ ಪ್ರದರ್ಶನ ತಂಡಕ್ಕೆ ನೆರವಾಗಿತ್ತಿದೆ.

ಈ ಬಗ್ಗೆ ಮಾತನಾಡಿರುವ ಶಿಖರ್ ಧವನ್ "ಆತನೋರ್ವ ಮ್ಯಾಚ್ ವಿನ್ನರ್. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಆತ ಅಂತಿಮ ಓವರ್‌ನಲ್ಲಿ ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಆತ ನಿಜವಾಗಿಯೂ ಅತ್ಯಂತ ಕೌಶಲ್ಯಯುಕ್ತ ಆಟಗಾರ ಹೌದು, ಆದರೆ ಅದಕ್ಕೂ ಹೆಚ್ಚಾಗಿ ಆತನಲ್ಲಿರುವ ಆತ್ಮವಿಶ್ವಾಸ ನಿಜಕ್ಕೂ ಶ್ರೇಷ್ಠ ವಾಗಿದ್ದು" ಎಂದಿದ್ದಾರೆ ಶಿಖರ್ ಧವನ್.

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಅಂತಿಮ ಪಂದ್ಯ ಭಾನುವಾರ ನಡೆಯಲಿದ್ದು ಭಾರತ ಹಾಗೂ ಜಿಂಬಾಬ್ವೆ ನಡುವಿನ ಕದನದ ಮೂಲಕ ಈ ಮಹತ್ವದ ಹಂತದ ಸೆಣೆಸಾಟಕ್ಕೆ ತೆರೆ ಬೀಳಲಿದೆ. ಈ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದರೆ ಸೆಮಿಫೈನಲ್‌ಗೆ ಪ್ರವೇಶಿಸುವ ಕಾರಣ ಟೀಮ್ ಇಂಡಿಯಾ ಪಾಲಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

ಈವರೆಗೆ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಟೀಮ್ ಇಂಡಿಯಾ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಒಂದು ಪಂದ್ಯದಲ್ಲಿ ಸೋತಿದೆ. ಹೀಗಾಗಿ ಆರು ಅಂಕಗಳೊಂದಿಗೆ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ ಭಾರತ. ಜಿಂಬಾಬ್ವೆ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್‌ಗೆ ಅರ್ಹತೆಯನ್ನು ಪಡೆದುಕೊಳ್ಳಲಿದೆ. ಕಳೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಸೆಣೆಸಾಡಿ ಐದು ರನ್‌ಗಳ ಅಂತರದ ರೋಚಕ ಗೆಲುವು ಸಾಧಿಸಲು ಯಶಸ್ವಿಯಾಗಿತ್ತು.

Story first published: Saturday, November 5, 2022, 23:33 [IST]
Other articles published on Nov 5, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+