Arshdeep Singh: ಟಿ20 ಕ್ರಿಕೆಟ್‌ನಲ್ಲಿ ಅರ್ಷದೀಪ್ ಸಿಂಗ್ ಹೊಸ ದಾಖಲೆ
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬೌಲರ್ ಅರ್ಷದೀಪ್ ಸಿಂಗ್, ಏಷ್ಯಾ ಕಪ್ ಟಿ20 ಪಂದ್ಯದಲ್ಲಿ ಓಮನ್ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿದು ಒಂದು ವಿಕೆಟ್ ಪಡೆದರು. ಈ ಮೂಲಕ ಟೀಮ್ ಇಂಡಿಯಾದ ಪರ ದೊಡ್ಡ ಇತಿಹಾಸ ಬರೆದರು. ಈ ಮೂಲಕ ಈ ಸಾಧನೆಯನ್ನು ಮಾಡಿದ ಟೀಮ್ ಇಂಡಿಯಾದ ಮೊದಲ ಬೌಲರ್ ಎಂಬ ಖ್ಯಾತಿಗೆ ಪಾತ್ರರಾದರು. ಇವರು ರಚಿಸಿರುವ ದಾಖಲೆ ಏನು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಅಬುದಾಬಿಯಲ್ಲಿ ನಡೆದ ಏಷ್ಯಾ ಕಪ್ ಟಿ20 ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿತು. ಈ ವೇಳೆ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 188 ರನ್ ಸೇರಿಸಿತು. ಗುರಿಯನ್ನು ಹಿಂಬಾಲಿಸಿದ ಓಮನ್ 20 ಓವರ್‌ನಲ್ಲಿ 4 ವಿಕೆಟ್ ಕಳೆದುಕೊಂಡು 167 ರನ್ ಕಲೆ ಹಾಕಿ ಸೋಲು ಕಂಡಿತು. ಟೀಮ್ ಇಂಡಿಯಾದ ಸಂಜು ಸ್ಯಾಮ್ಸನ್ ಅರ್ಧಶತಕ ಬಾರಿಸಿ ಮಿಂಚಿದರು. ಟೀಮ್ ಇಂಡಿಯಾದ ಪರ ಕಣಕ್ಕೆ ಇಳಿದ ವೇಗಿ ಅರ್ಷದೀಪ್ ಸಿಂಗ್ ಒಂದು ವಿಕೆಟ್ ಪಡೆದರು.

ಓಮನ್ ವಿರುದ್ಧದ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ವಿನಾಯಕ್ ಶುಕ್ಲಾ ಅವರಿಗೆ ಪೆವಿಲಿಯನ್ ಹಾದಿ ತೋರಿಸಿದರು. ಈ ಮೂಲಕ ಚುಟುಕು ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಪರ ನೂರು ವಿಕೆಟ್‌ಗಳನ್ನು ಪಡೆದ ಸಾಧನೆಯನ್ನು ಮಾಡಿದರು. ಅಲ್ಲದೆ 100 ವಿಕೆಟ್ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆ ಇವರದ್ದಾಗಿದೆ.
ಅರ್ಷದೀಪ್ ಇತಿಹಾಸ
ಅರ್ಷದೀಪ್ ಸಿಂಗ್ ಟೀಮ್ ಇಂಡಿಯಾ ಪರ 2022ರಲ್ಲಿ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಆಗಿನಿಂದ ಇವರು ಭಾರತ ತಂಡದ ಪ್ರಮುಖ ವೇಗದ ಬೌಲರ್ ಎಂಬ ಖ್ಯಾತಿ ತಮ್ಮದಾಗಿಸಿಕೊಂಡಿದ್ದಾರೆ. ಇವರು ಭಾರತದ ಪರ 64 ಟಿ20 ಪಂದ್ಯಗಳನ್ನು ಆಡಿದ್ದು, 100 ವಿಕೆಟ್ ಪಡೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ 25ನೇ ಬೌಲರ್ ಎಂಬ ಖ್ಯಾತಿ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ 12ನೇ ವೇಗದ ಬೌಲರ್ ಎಂಬ ಖ್ಯಾತಿ ಪಡೆದಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತದಲ್ಲಿ ನೂರು ವಿಕೆಟ್ ಪಡೆದ ವೇಗದ ಬೌಲರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ರಶೀದ್ ಖಾನ್ 100 ವಿಕೆಟ್ ಪಡೆಯಲು 1185 ಎಸೆತ ತೆಗೆದುಕೊಂಡರೆ, ನೇಪಾಳದ ಸಂದೀಪ್ 1220 ಎಸೆತಗಳಲ್ಲಿ ನೂರು ವಿಕೆಟ್ ಹಾಗೂ ಭಾರತದ ಅರ್ಷದೀಪ್ ಸಿಂಗ್ 1329 ಎಸೆತಗಳಲ್ಲಿ ವಿಕೆಟ್‌ಗಳ ಶತಕ ಪೂರೈಸಿದ್ದಾರೆ. ಟೀಮ್ ಇಂಡಿಯಾ 2024ರಲ್ಲಿ ಟಿ20 ವಿಶ್ವ ಕಪ್ ಗೆದ್ದಾಗ ಅರ್ಷದೀಪ್ ಸಿಂಗ್ ಆ ತಂಡದ ಸದಸ್ಯರಾಗಿದ್ದಾರೆ. ಇವರಿಗೆ ಏಷ್ಯಾ ಕಪ್‌ನಲ್ಲಿ ಮೊದಲು ಆಡಿದ ಎರಡು ಪಂದ್ಯಗಳಲ್ಲಿ ಆಡಲು ಅವಕಾಶ ಲಭಿಸಿರಲಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications