Mohammed Siraj: ಏಕದಿನ ವಿಶ್ವಕಪ್ ಆಡಿದ ಬೌಲರ್‌ಗೆ ಇಲ್ಲ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಪ್ರಕಟಿತ ತಂಡದಲ್ಲಿ ಯುವ ಆಟಗಾರರಿಗೆ ಆದ್ಯತೆ ನೀಡಲಾಗಿದೆ. ಅಲ್ಲದೆ ಅನುಭವಿಗಳಿಗೂ ಅಷ್ಟೇ ಮನ್ನಣೆ ಸಿಕ್ಕಿದೆ. ಆದರೆ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯ ಈ ಬಾರಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲನಾಗಿದ್ದಾನೆ. ಇವರು ಟೆಸ್ಟ್ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು, ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಆದರೆ ಈ ಬಾರಿ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಶನಿವಾರ ಭಾರತ ತಂಡವನ್ನು ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಿಸಲಾಗಿದೆ. ಈ ತಂಡದ ಮುಂದಾಳತ್ವವನ್ನು ಮತ್ತೊಮ್ಮೆ ರೋಹಿತ್ ಶರ್ಮಾ ಹೆಗಲಿಗೆ ನೀಡಲಾಗಿದೆ. ಇನ್ನು ಶುಭಮನ್ ಗಿಲ್ ಅವರು ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಮೆಗಾ ಟೂರ್ನಿಯಲ್ಲಿ ಸ್ಥಾನ ಪಡೆಯುವಲ್ಲಿ ಮೊಹಮ್ಮದ್ ಸಿರಾಜ್ ವಿಫಲರಾಗಿದ್ದಾರೆ. ಪ್ರಕಟಿತ ತಂಡದಲ್ಲಿ ಕಾಣದ ಸಿಗದ ಒಂದೇ ಒಂದು ಅಚ್ಚರಿಯ ಹೆಸರು ಅಂದರೆ ಮೊಹಮ್ಮದ್ ಸಿರಾಜ್.

ಸಿರಾಜ್‌ಗಿಲ್ಲ ಅವಕಾಶ
ಮೊಹಮ್ಮದ್ ಸಿರಾಜ್ ಈಗಾಗಲೇ ಭಾರತದ ಪರ ಐಸಿಸಿ ಟೂರ್ನಿಗಳಲ್ಲಿ ಆಡಿ ಸೈ ಎನಿಸಿಕೊಂಡಿದ್ದರು. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಆಡಿದ 11 ಪಂದ್ಯಗಳಲ್ಲಿ 14 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು ಟಿ20 ವಿಶ್ವಕಪ್‌ನಲ್ಲಿ ಆಡಲು ಸಿಕ್ಕ ಮೂರು ಪಂದ್ಯಗಳಲ್ಲಿ ಕೇವಲ ಒಂದು ವಿಕೆಟ್ ಪಡೆದಿದ್ದರು. ಇನ್ನು ಕಳೆದ ವರ್ಷ ಮೂರು ಫಾರ್ಮೆಟ್‌ಗಳನ್ನು ಸೇರಿ ಒಟ್ಟಾರೆಯಾಗಿ ಸಿರಾಜ್ 13 ಪಂದ್ಯಗಳ 25 ಇನಿಂಗ್ಸ್‌ನಲ್ಲಿ 35 ವಿಕೆಟ್ ಪಡೆಯುವಲ್ಲಿ ಸಫಲರಾಗಿದ್ದಾರೆ. ಇವರಿಗೆ ಚಾಂಪಿಯನ್ಸ್ ಟ್ರೋಫಿ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಾನ ಸಿಕ್ಕಿಲ್ಲ.
ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಶರ್ಮಾ, ಸಿರಾಜ್ ಅವರನ್ನು ಕೈ ಬಿಡಲಾದ ಕಾರಣವನ್ನು ತಿಳಿಸಿದರು. ಸಿರಾಜ್ ದುಬೈ ಪಿಚ್‌ನಲ್ಲಿ ತಮ್ಮ ಕ್ಷಮತೆಯನ್ನು ಸಾಬೀತು ಪಡಿಸುವಲ್ಲಿ ಕೊಂಚ ವಿಫಲರಾಗಿದ್ದಾರೆ. ಇನ್ನು ಪಂದ್ಯ ಆದಂತೆ ಚೆಂಡು ಹಳೆಯದಾಗುತ್ತದೆ. ಈ ವೇಳೆ ಸಿರಾಜ್ ಪರಿಣಾಮಕಾರಿಯಾಗಿ ಬೌಲಿಂಗ್ ನಡೆಸಲು ಪರದಾಡುತ್ತಾರೆ ಎಂದು ತಿಳಿಸಿದ್ದಾರೆ. ಇನ್ನು ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲೂ ಅಮೋಘ ಸಾಧನೆ ನೀಡುವಲ್ಲಿ ವಿಫಲರಾಗಿದ್ದಾರೆ. ಇವರು ಸರಿಯಾದ ಸಮಯದಲ್ಲಿ ತಂಡದ ಪರ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು. ಇವರು 2024 ರಲ್ಲಿ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ತನ್ನ ಕೊನೆಯ ಏಕದಿನ ಸರಣಿಯನ್ನು ಆಡಿದಾಗ ಮೊಹಮ್ಮದ್ ಸಿರಾಜ್ ತಂಡದ ಭಾಗವಾಗಿದ್ದರು.

ಭರವಸೆಯ ಬೌಲರ್ ಅರ್ಷದೀಪ್
ಇನ್ನು ಟಿ20 ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದ್ದ ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಅರ್ಷದೀಪ್ ಸಿಂಗ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಇವರು 2024 ರಲ್ಲಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದಾಗ, ಅಮೋಘವಾಗಿ ಬೌಲಿಂಗ್ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications